ಬೆಂಗಳೂರು: ಮತಾಂತರ ನಿಷೇಧ ಕಾಯ್ದೆ ಜಾರಿಯಾದ ನಂತರ ರಾಜ್ಯದಲ್ಲಿ ಮೊದಲ ಪಕರಣ ದಾಖಲಾಗಿದೆ. ಮದುವೆಯಾಗುವ ಭರವಸೆ ನೀಡಿ 18 ವರ್ಷದ ಉತ್ತರ ಪದೇಶದ ಯುವತಿಯನ್ನು ಮತಾಂತರ ಮಾಡಲಾಗಿದ್ದು ಸೈಯದ್ ಮುಯಿನ್ ಎಂಬಾತನ ಮೇಲೆ ಯಶವಂತಪುರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಯುವತಿಯ ಕುಟುಂಬದವರು ಮೂಲತಃ ಉತ್ತರ ಪುದೇಶದ ಗೋರಖ್‌ಪುರದವರು. ಯುವತಿಯ ತಂದೆ ಪೇಂಟಿಂಗ್ ಕೆಲಸ ಮಾಡುತ್ತಿದ್ದು, ತಾಯಿ ಗೃಹಿಣಿಯಾಗಿದ್ದಾರೆ. ಇಬ್ಬರು ಸಹೋದರಿಯರು ಓರ್ವ ಸಹೋದರನೊಂದಿಗೆ ‘ಯುವತಿ ಯಶವಂತಪುರ ವ್ಯಾಪ್ತಿಯ ಬಿ.ಕೆ.ನಗರದಲ್ಲಿ ಕಳೆದ 15 ವರ್ಷಗಳಿಂದ ವಾಸವಿದ್ದಳು.
ಮಗಳು ಅನ್ಯ ಧರ್ಮದ ಯುವಕನನ್ನು ಪ್ರೀತಿಸುತ್ತಿದ್ದಾಳೆ ಎಂಬ ಶಂಕೆ ಮೇಲೆ ಆರು ತಿಂಗಳ ಹಿಂದೆ ಮಗಳಿಗೆ ಪೋಷಕರು ಬುದ್ಧಿ ಹೇಳಿದ್ದರು. ಆದರೆ ಕಳೆದ ಅ 5ರಂದು ಅಂಗಡಿಗೆ ಹೋಗಿಬರುವುದಾಗಿ ಹೋಗಿದ್ದ ಯುವತಿ ಮನೆಗೆ ವಾಪಸ್ ಬಂದಿರಲಿಲ್ಲ.
ಮಂಡ್ಯದ ಐದು ರೂಪಾಯಿ ವೈದ್ಯ ಖ್ಯಾತಿಯ ಶಂಕರೇಗೌಡರಿಗೆ ‘ಇಂಡಿಯನ್ ಆಫ್ ದಿ ಇಯರ್’ ಪ್ರಶಸ್ತಿ – Vishwanews24
ಈ ಹಿನ್ನೆಲೆ ಯಶವಂತಪುರ ಠಾಣೆಯಲ್ಲಿ ಯುವತಿಯ ಕುಟುಂಬಸ್ಥರು ನಾಪತ್ತೆ ಪುಕರಣ ದಾಖಲಿದ್ದರು. ಆದರೆ ವಾರದ ಬಳಿಕ ಬುರ್ಖಾ ಧರಿಸಿಕೊಂಡು ಯುವತಿ ಠಾಣೆಗೆ ಆಗಮಿಸಿದ್ದಳು. ಆದರೆ ಆದಾಗಲೇ ಯುವತಿ ಮತಾಂತರಗೊಂಡಿದ್ದು, ಆಕೆಯನ್ನು ಮದುವೆಯಾಗುವುದಾಗಿ ಮುಯಿನ್ ಎಂಬಾತ ಪೊಲೀಸ್ ಠಾಣೆಗೆ ಕರೆತಂದಿದ್ದ. ಮಗಳ ನಡೆ ಕಂಡು ಗಾಬರಿಗೊಂಡ ಪೋಷಕರು ಮುಯೀನ್ ವಿರುದ್ಧ ಮದುವೆಯ ಭರವಸೆ ಕೊಟ್ಟು ಮತಾಂತರ ಮಾಡಿದ್ದಾನೆ ಎಂದು ಆರೋಪಿಸಿ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು ದಾಖಲಿಸಿದ್ದಾರೆ.
ಆರೋಪಿ ಮುಯೀನ್ ಮತ್ತು ಯುವತಿ ಪ್ರೀತಿಸುತ್ತಿದ್ದರು. ಮದುವೆಯಾಗಬೇಕಾದರೆ ಮತಾಂತರವಾಗಬೇಕು ಎಂದು ಮುಯೀನ್ ಯುವತಿಯ ಮೇಲೆ ಒತ್ತಡ ಹೇರಿದ್ದನಂತೆ. ಮುಯಿನ್ ಮಾತು ನಂಬಿ ಆತನ ಜೊತೆ ಹೋಗಿದ್ದ ಯುವತಿಯನ್ನು ಕಾನೂನು ಬಾಹಿರವಾಗಿ ಮಸೀದಿಯೊಂದರಲ್ಲಿ ಮತಾಂತರ ಮಾಡಲಾಗಿದೆ ಎಂದು ಯುವತಿಯ ಪೋಷಕರು ದೂರಿದ್ದಾರೆ.
ಸದ್ಯ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಮತಾಂತರ ಕಾಯ್ದೆ ಅಡಿ ಪುಕರಣ ದಾಖಲಾಗಿದೆ. ಮತಾಂತರ ನಿಷೇಧ ಕಾಯ್ದೆಯ ಅನ್ವಯ ಮತಾಂತರ ಪುಕ್ರಿಯೆಗೆ ಹಲವು ನಿಯಮಗಳನ್ನು ವಿಧಿಸಲಾಗಿದೆ. ಮತಾಂತರವಾಗುವ ವ್ಯಕ್ತಿ ಮೊದಲು ಡಿಸಿಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಬಳಿಕ ಡಿಸಿ ಆ ವ್ಯಕ್ತಿಯ ಪೋಷಕರು ಹಾಗೂ ಆಪ್ತರ ಅಭಿಪ್ರಾಯ ಪಡೆದು 30 ದಿನಗಳ ಗಡುವು ನೀಡುತ್ತಾರೆ.
ಜನತಾದಳ (ಜಾತ್ಯತೀತ) ಪಕ್ಷದ “ಜಿಲ್ಲಾ ವಕ್ತಾರರಾಗಿ ಶ್ರೀ ಶ್ರೀಕಾಂತ್ ಹೆಬ್ರಿ ನೇಮಕ- Vishwanews24
ಯಾವುದೇ ಒತ್ತಡವಿಲ್ಲದ ತಮ್ಮಿಷ್ಟದಂತೆ ಮತಾಂತರವಾಗುತ್ತಿದ್ದರೆ ಜಿಲ್ಲಾಧಿಕಾರಿ ಅನುಮತಿ ನೀಡುತ್ತಾರೆ. ಯಾವುದೇ ಒತ್ತಡ ಅಥವಾ ಆಮಿಷಕ್ಕೆ ಬಲಿಯಾಗಿ ಮತಾಂತರವಾದರೆ ಮತಾಂತರವಾಗಲು ಸಹಾಯ ಮಾಡುವ ಎಲ್ಲರ ವ ಮೇಲೆ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಈಗ ಇದೇ ಕಾಯ್ದೆಯಂತೆ ಮುಯೀನ್ ಬಂಧನವಾಗಿದ್ದು ಆತನಿಗೆ ಸಹಾಯ ಮಾಡಿದವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ತನಿಖೆ ಮುಂದುವರೆಯುತ್ತಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…