ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಳೆದ ಕೆಲ ದಿನಗಳಿಂದ ಬೆಂಗಳೂರಿನಲ್ಲಿ ಮಳೆಯ ಅಬ್ಬರ ಜೋರಾಗಿತ್ತು. ನಗರದಲ್ಲಿ ನಾಲ್ಕು ವರ್ಷಗಳ ಬಳಿಕ ಅತ್ಯಧಿಕ ಮಳೆ ದಾಖಲಾಗಿದ್ದು, ಈ ವರ್ಷ ವಾಡಿಕೆಗಿಂತ ಹೆಚ್ಚು ವರ್ಷಧಾರೆಯಾಗಿದೆ. ಅಕ್ಟೊಬರ್ 15 ರಂದು 281 ಮೀ.ಮೀ ಮಳೆಯಾಗಿತ್ತು. ನಿನ್ನೆ ವಾಡಿಕೆಗಿಂತ ಶೇ.60ರಷ್ಟು ಹೆಚ್ಚು ಮಳೆ ಸುರಿದಿತ್ತು. ಇದು ಬೆಂಗಳೂರಿನಲ್ಲಿ 2017ರ ಬಳಿಕ ಸುರಿದ ಅಧಿಕ ಮಳೆಯಾಗಿದೆ.
ನಿನ್ನೆ ಮಲ್ಲೇಶ್ವರಂ, ಯಶವಂತಪುರ, ಗೋರಗುಂಟೆ ಪಾಳ್ಯ, ರಾಜಕುಮಾರ್ ಸಮಾಧಿ, ಇಸ್ಕಾನ್ ಸೇರಿದಂತೆ ಹಲವೆಡೆ ಬೆಳಗಿನ ಜಾವವೇ ಮಳೆ ಆರಂಭವಾಗಿತ್ತು. ಮಳೆಯಿಂದ ವಾಹನ ಸವಾರರು ಪರದಾಟ ನಡೆಸಿದರು. ಇಂದು ಮಳೆರಾಯ ಸ್ವಲ್ಪ ಮಟ್ಟಿನ ಬಿಡುವು ನೀಡಿದ್ದು, ಮುಂದಿನ ವಾರ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಹಿಂಗಾರು ಮಾರುತಗಳಿಂದ ಅಕ್ಟೋಬರ್ ಕೊನೆಯ ವಾರದ ಹೊತ್ತಿಗೆ ಮತ್ತೆ ನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಿಎಂ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದ ವೇಳೆ ಸ್ಥಳೀಯ ಶಾಸಕರಾದ ಸತೀಶ್ ರೆಡ್ಡಿ, ಮುಖ್ಯ ಕಾರ್ಯದರ್ಶಿಗಳಾದ ರವಿಕುಮಾರ್, ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ಗೌರವ್ ಗುಪ್ತ, ಜಲಮಂಡಳಿ ಅಧ್ಯಕ್ಷರಾದ ಜಯರಾಮ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…