Featured

ಬೆಂಗಳೂರು: ಮಳೆ ಬೆನ್ನಲ್ಲೇ ಡೆಂಗ್ಯೂ ಪ್ರಕರಣ ಹೆಚ್ಚಳ – vishwanews24

ಬೆಂಗಳೂರು: ಮಳೆ ಬೆನ್ನಲ್ಲೇ ಡೆಂಗ್ಯೂ ಪ್ರಕರಣ ಹೆಚ್ಚಳ:

ಬೆಂಗಳೂರು: ಮಳೆ ಶುರುವಾದರೆ ಸಾಕು ಇದರ ಜತೆಗೆ ಸೊಳ್ಳೆಗಳ ಕಾಟವೂ ಹೆಚ್ಚಲಿದೆ. ಇದೇ ಋತುವಿನಲ್ಲಿ ಡೆಂಗ್ಯೂ ಜ್ವರ ಹೆಚ್ಚಳ ಆಗುವುದರಿಂದ ಎಚ್ಚರ ವಹಿಸುವುದು ಅತಿ ಅವಶ್ಯಕ. ಸದ್ಯ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಡೆಂಗ್ಯೂ ಭೀತಿ ಹೆಚ್ಚಾಗಿದೆ. ಬೆಂಗಳೂರಿನ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರಿಗೂ ಡೆಂಗ್ಯೂ ಜ್ವರ ಕಾಣಿಸಿಕೊಂಡಿದೆ. ನಾಲ್ಕು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡು, ಡೆಂಗ್ಯೂ ಧೃಡಪಟ್ಟಿದೆ.

ಹವಾಮಾನ ವೈಪರೀತ್ಯ ಮತ್ತು ಮಳೆಯಿಂದಾಗಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದು ಆತಂಕ ಮೂಡಿಸಿದೆ. 2022ರಲ್ಲಿ ರಾಜ್ಯದಲ್ಲಿ 7,317 ಡೆಂಗ್ಯೂ ಜ್ವರ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ ನಾಲ್ವರು ಮೃತಪಟ್ಟಿದ್ದರು. 2023ರಲ್ಲಿ 2003 ಪ್ರಕರಣಗಳು ವರದಿಯಾಗಿದ್ದವು. 2024ರಲ್ಲಿ ಈ ವರೆಗೆ (ಜೂನ್‌) 85,365 ಶಂಕಿತವಾಗಿದ್ದು, ಇದರಲ್ಲಿ 37,144 ಮಂದಿಯ ರಕ್ತ ಮಾದರಿಯನ್ನು ಸಂಗ್ರಹಿಸಲಾಗಿತ್ತು. ಆ ಪ್ರಕಾರ 3,957 ಮಂದಿಗೆ ಡೆಂಗ್ಯೂ ಜ್ವರ ದೃಢಪಟ್ಟಿದೆ. ಬೆಂಗಳೂರಲ್ಲಿ 1230 ಮಂದಿಗೆ ಡೆಂಗ್ಯೂ ಜ್ವರ ಕಂಡು ಬಂದಿದೆ. ಈವರೆಗೆ ಡೆಂಗ್ಯೂನಿಂದ ಮೃತಪಟ್ಟ ವರದಿ ಆಗಿಲ್ಲ.

ಡೆಂಗ್ಯೂ ಹೇಗೆ ಹರಡುತ್ತದೆ?

ಡೆಂಗ್ಯೂ ಜ್ವರ ಸೊಳ್ಳೆಯಿಂದ ಹರಡುವ ವೈರಲ್ ಸೋಂಕು ಆಗಿದೆ. ಇದು ಈಡಿಪಸ್‌ ಎಂಬ ಹೆಣ್ಣು ಸೊಳ್ಳೆಗಳ ಕಡಿತದಿಂದ ಹರಡುತ್ತದೆ. ಸೊಳ್ಳೆ ಕಚ್ಚಿದ 4-7 ದಿನಗಳ ನಂತರ ರೋಗ ಲಕ್ಷಣಗಳು ಸಾಮಾನ್ಯವಾಗಿ ಕಂಡು ಬರುತ್ತವೆ. ಇದರ ಪ್ರಭಾವ 10 ದಿನಗಳವರೆಗೆ ಇರುತ್ತದೆ. ಹೀಗಾಗಿ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳುವುದು, ಸ್ವಚ್ಛತೆಗೆ ಆದ್ಯತೆ ನೀಡುವುದು ಉತ್ತಮವಾಗಿದೆ.

ಡೆಂಗ್ಯೂ ಜ್ವರ ತಲೆನೋವಿನಂತಹ ರೋಗಲಕ್ಷಣಗಳನ್ನು ಉಂಟು ಮಾಡಬಹುದು. ಡೆಂಗ್ಯೂವನ್ನು ಹೆಮರಾಜಿಕ್ ಜ್ವರ ಎಂದೂ ಕರೆಯಲಾಗುತ್ತದೆ. ಡೆಂಗ್ಯೂ ಜ್ವರದ ತೀವ್ರ ಸ್ವರೂಪವು ತೀವ್ರ ರಕ್ತಸ್ರಾವ, ರಕ್ತದೊತ್ತಡ ಹಾಗೂ ರಕ್ತಕಣಗಳ ಸಂಖ್ಯೆಯಲ್ಲಿ ಭಾರಿ ಕುಸಿತವಾಗಿ ವ್ಯಕ್ತಿಯ ಸಾವಿಗೂ ಕಾರಣವಾಗಬಹುದು. ಅಧಿಕ ಜ್ವರ, ತೀವ್ರ ತಲೆನೋವು, ವಾಂತಿ, ದೇಹದ ವಿವಿಧ ಭಾಗಗಳಲ್ಲಿ ದದ್ದುಗಳು, ಗ್ರಂಥಿಗಳಲ್ಲಿ ಊತ, ಮೂಳೆ ಮತ್ತು ಕೀಲು ನೋವು, ರಕ್ತಸ್ರಾವವಾಗವುದು ರೋಗ ಲಕ್ಷಣಗಳಾಗಿವೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago