ಬೆಂಗಳೂರು: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಸ್ಪಾ ಮೇಲೆ ದಾಳಿ ಮಾಡಿರುವ ಇಂದಿರಾನಗರ ಠಾಣೆ ಪೊಲೀಸರು, ಸ್ಪಾ ಮ್ಯಾನೇಜರ್‌ನನ್ನು ಬಂಧಿಸಿ ಹೊರರಾಜ್ಯದ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ.
ಸ್ಟಾ ಮ್ಯಾನೇಜರ್ ಮಣಿ ಬಂಧಿತ. ಸ್ಪಾ ಮಾಲೀಕ ಉಪ್ಪೇನ್ ರಾಟಿ ಎಂಬಾತ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಶೋಧ ಕಾರ್ಯ ಮುಂದುವರೆದಿದೆ. ದೊಮ್ಮಲೂರು 2ನೇ ಹಂತದ ಸ್ಪಾವೊಂದರಲ್ಲಿ ಹೊರರಾಜ್ಯದ ಮಹಿಳೆಯರನ್ನು ಇರಿಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಮೇ 29ರಂದು ಪೊಲೀಸರು ಸ್ಪಾ ಮೇಲೆ ದಾಳಿ ಮಾಡಿದ್ದಾರೆ. ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಉತ್ತರ ಪ್ರದೇಶ ಮತ್ತು ನಾಗಲ್ಯಾಂಡ್ ಮೂಲದ ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದೆ.
ಸ್ಪಾನಲ್ಲಿ ಕ್ರಾಸ್ ಮಸಾಜ್, ಬಾಡಿ ಟು ಬಾಡಿ ಮಸಾಜ್, ಹ್ಯಾಪಿ ಎಂಡಿಂಗ್ ಇತ್ಯಾದಿ ಸೇವೆಗಳ ಹೆಸರಿನಲ್ಲಿ ಗ್ರಾಹಕರನ್ನು ಬರಮಾಡಿಕೊಂಡು ಬಳಿಕ ಲೈಂಗಿಕ ಕ್ರಿಯೆಗೆ ಪುಸಲಾಯಿಸಿ ಅಕ್ರಮವಾಗಿ ಹಣ ಸಂಪಾದಿಸುತ್ತಿದ್ದಾಗಿ ಸ್ಪಾ ಮ್ಯಾನೇಜರ್ ಮಣಿ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾನೆ. ಸದ್ಯಕ್ಕೆ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಸಂಬಂಧ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…