ಬೆಂಗಳೂರು : ಮುತ್ತಪ್ಪ ರೈ ಆಸ್ತಿ ಹಕ್ಕಿನ ವಿಚಾರವಾಗಿ ಎರಡನೇ ಪತ್ನಿ ಅನುರಾಧಾ ಸಲ್ಲಿಸಿರುವ ಅರ್ಜಿಯ ಸಂಬಂಧ ಹೈಕೋರ್ಟ್ ಕೆಲ ನಿರ್ದಿಷ್ಟ ಆಸ್ತಿಗಳ ಮಾರಾಟಕ್ಕೆ ಮಧ್ಯಂತರ ತಡೆ ನೀಡಿದೆ ಆಸ್ತಿ ವಿವಾದ ಸಂಬಂಧ ಸಿವಿಲ್ ಕೋರ್ಟ್ ಆದೇಶ ಪ್ರಶ್ನಿಸಿ ಅನುರಾಧಾ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಸ್ ಮುದಗಲ್ ಅವರಿದ್ದ ಏಕಸದಸ್ಯಪೀಠ ಈ ಆದೇಶ ಹೊರಡಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ಷೇಪಿಸಿರುವ ನಿರ್ದಿಷ್ಟ ಆಸ್ತಿಗಳನ್ನು ನ್ಯಾಯಾಲಯದ ಮುಂದಿನ ಆದೇಶದವರೆಗೆ ವರ್ಗಾವಣೆ ಮಾಡದಂತೆ ಪೀಠ ಮಧ್ಯಂತರ ಆದೇಶ ಹೊರಡಿಸಿದೆ.ಮುತ್ತಪ್ಪ ರೈ ಎರಡನೇ ಪತ್ನಿ ಆಗಿರುವ ಅನುರಾಧ ಪತಿಯ ಆಸ್ತಿಯಲ್ಲಿ ಮೂರನೇ ಒಂದು ಪಾಲು ಕೋರಿ ಸಿವಿಲ್ ಕೋರ್ಟ್ ನಲ್ಲಿ ದಾವೆ ಹೂಡಿದ್ದರು. ಈ ನಡುವೆ ಮುತ್ತಪ್ಪ ರೈ ಪುತ್ರರಾದ ರಾಕಿ ರೈ ಹಾಗೂ ರಿಕ್ಕಿ ರೈ ಕೆಲ ಆಸ್ತಿ ಮಾರಾಟ ಮಾಡಿದ್ದರು. ಆಸ್ತಿ ಮಾರಾಟ ಮಾಡದಂತೆ ನೀಡಿದ್ದ ತಡೆಯಾಜ್ಞೆಯನ್ನು ಸಿವಿಲ್ ಕೋರ್ಟ್ ಇತ್ತೀಚೆಗೆ ತೆರವು ಮಾಡಿತ್ತು. ಅದನ್ನು ಪ್ರಶ್ನಿಸಿ, ಅನುರಾಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಏನಿದು ಪ್ರಕರಣ?
ಮುತ್ತಪ್ಪ ರೈ ಅವರು ಸಾಯುವ ಮುನ್ನವೇ ತನ್ನ ಆಸ್ತಿಯ ಬಗ್ಗೆ ವಿಲ್ ಬರೆದು ಇಟ್ಟಿದ್ದರು. ಇದರಲ್ಲಿ ಅವರ ಆಸ್ತಿ ಯಾರಿಗೇ ಸೇರಬೇಕು ಮತ್ತು ಎಷ್ಟು ಸೇರಬೇಕು ಎಂದು ತಿಳಿಸಿದ್ದರು. ಮುತ್ತಪ್ಪ ರೈ ಸಾವಿನ ಬಳಿಕ ಅವರ ಎರಡನೇ ಪತ್ನಿ ಅನುರಾಧ ಪಾಲು ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ.
ಈಗಾಗಲೇ ಅನುರಾಧ ಅವರಿಗೂ ಆಸ್ತಿಯಲ್ಲಿ ಪಾಲು ನೀಡಲಾಗಿದೆ ಎಂದು ರೈ ವಿಲ್‍ನಲ್ಲಿ ತಿಳಿಸಿದ್ದರು. ಎರಡನೇ ಪತ್ನಿ ಅನುರಾಧಾಗೆ ಚಿನ್ನಾಭರಣ, ಕಾರು, ಕೋಟ್ಯಂತರ ರೂಪಾಯಿ ಹಣದ ಜೊತೆ ಹೆಚ್ ಡಿ ಕೋಟೆ ಆಸ್ತಿ, ಜೊತೆಗೆ ಸಹಕಾರ ನಗರದಲ್ಲಿ ಎರಡು ಅಂತಸ್ತಿನ ಕಟ್ಟಡವನ್ನು ನಿರ್ಮಿಸಿ ಕೊಡಲಾಗಿದೆ. ಅನುರಾಧಾ ಜೊತೆಗಿದ್ದ ಸಂದರ್ಭದಲ್ಲಿ ಅವರಿಗೆ ಸೇರಬೇಕಾದ ಆಸ್ತಿಯನ್ನು ನೀಡಲಾಗಿದೆ ಎಂದು ವಿಲ್‍ನಲ್ಲಿ ಉಲ್ಲೇಖವಾಗಿದೆ.
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…