ಬೆಂಗಳೂರು : ನಮ್ಮ ಮೆಟ್ರೋ ನಿರ್ಮಾಣ ಕಾರ್ಯದಲ್ಲಿ ಸುರಕ್ಷತಾ ಲೋಪಕ್ಕೆ ಮತ್ತೊಂದು ದುರಂತ ಸಂಭವಿಸಿದೆ. ಯೋಜನೆಗಾಗಿ ಸಾಗಿಸಲಾಗುತ್ತಿದ್ದ ಬೃಹತ್ ವಯಾಡಕ್ಟ್ ಟ್ರಕ್‌ನಿಂದ ಬಿದ್ದು ಆಟೋ ರಿಕ್ಷಾವೊಂದು ಜಖಂಗೊಂಡ ಪರಿಣಾಮ ಅದರ ಚಾಲಕ ಸಾವನ್ನಪ್ಪಿದ ಘಟನೆ ಮಂಗಳವಾರ ತಡರಾತ್ರಿ ಕೋಗಿಲು ಕ್ರಾಸ್ ಬಳಿ ನಡೆದಿದೆ.
ನಮ್ಮ ಮೆಟ್ರೋ ನಿರ್ಮಾಣ ಸಾಮಗ್ರಿಗಳನ್ನು ಸಾಗಿಸುತ್ತಿದ್ದ ಟ್ರಕ್ ಸಮತೋಲನ ತಪ್ಪಿ, ವಯಾಡಕ್ಟ್ ನಿಂತಿದ್ದ ಆಟೋ ಮೇಲೆ ಉರುಳಿ ಬಿತ್ತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಜನ ಆತನ ರಕ್ಷಣೆಗೆ ದಾವಿಸಿದ್ದರು. ಆದರೆ ಬೃಹತ್ ಗಾತ್ರದ ವಯಾಡೆಕ್ಟ್ ತೆಗೆಯಲು ಕ್ರೇನ್ ಅತ್ಯಗತ್ಯವಾಗಿತ್ತು. ಸ್ಥಳಕ್ಕೆ ಪೊಲೀಸರು ಬಂದರೂ ಸಹ ಕ್ರೇನ್ ಮಾತ್ರ ಬರಲು ತಡವಾಯಿತು. ಇದರಿಂದ ಆಕ್ರೋಶಗೊಂಡ ಜನ ಕಲ್ಲುತೂರಾಟ ಸಹ ಮಾಡಿದ್ದಾರೆ ಎನ್ನಲಾಗಿದೆ.
ಘಟನೆ ನಡೆದ ಎರಡು ಗಂಟೆ ಬಳಿ ಕ್ರೇನ್ ತರಿಸಿ ವಯಾಡೆಕ್ಟ್ ಪಕ್ಕಕ್ಕೆ ಇಡುವ ಮೂಲಕ ಮೃತದೇಹ ಹೊರ ತೆಗೆಯಲಾಗಿದೆ. ಇನ್ನು ಈ ದುರಂತಕ್ಕೆ ಮೆಟ್ರೋ ಅಧಿಕಾರಿಗಳ ಬೇಜವಾಬ್ದಾರಿ ತನವೇ ಕಾರಣ ಅಂತ ಜನ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ವಯಾಡೆಕ್ಟ್ ಮುಗುಚಿ ಆಟೋ ಮೇಲೆ ಬಿದ್ದ ತಕ್ಷಣ ಲಾರಿ ಚಾಲಕ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಯಲಹಂಕ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಚಾಲಕನ ಪತ್ತೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…