ಬೆಂಗಳೂರು: ನಮ್ಮ ಮೆಟ್ರೋ ರೈಲಿನ ಟ್ರ್ಯಾಕ್ಗೆ ಜಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಟ್ರೈನ್ ಬರುವಾಗ ಯುವಕ ಹಳಿಗೆ ಜಿಗಿದಿದ್ದಾನೆ. ಯುವಕ ಯಾರು? ಯಾಕಾಗಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂಬುದು ತಿಳಿದು ಬಂದಿಲ್ಲ. ಮಾ.21ರ ಮಧ್ಯಾಹ್ನ 2:10ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಬಿಎಂಆರ್ಸಿಎಲ್ ಎಕ್ಸ್ ಮೂಲಕ ತಿಳಿಸಿದೆ.
ಮೆಟ್ರೋ ಹಳಿಗೆ ಹಾರಿದ ಕಾರಣಕ್ಕೆ 15 ನಿಮಿಷಕ್ಕೂ ಹೆಚ್ಚು ಸಮಯ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ರೈಲು ಹಳಿಗೆ ಹಾರಿದ ಯುವಕನನ್ನು ಕೂಡಲೇ ಅಲ್ಲಿದ್ದ ಸಿಬ್ಬಂದಿ ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಆದರೆ ಆತ ಮಾರ್ಗ ಮಧ್ಯೆದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೆಟ್ರೋ ಓಡಾಟವನ್ನು ಬಂದ್ ಮಾಡಿ ನಿಲ್ದಾಣದಲ್ಲಿದ್ದ ಎಲ್ಲ ಪ್ರಯಾಣಿಕರನ್ನು ಹೊರ ಕಳಿಸಿದ್ದಾರೆ.
ಸದ್ಯ ಅತ್ತಿಗುಪ್ಪೆ ನಿಲ್ದಾಣದಲ್ಲಿ ರೈಲು ಓಡಾಟ ಸ್ಥಗಿತವಾಗಿದ್ದು, ಮಾಗಡಿ ರೋಡ್ನಿಂದ ವೈಟ್ ಫೀಲ್ಡ್ವರೆಗೆ ಮಾತ್ರ ಮೆಟ್ರೋ ಸಂಚಾರ ಇದೆ. ಮಾಗಡಿ ರಸ್ತೆಯಿಂದ ಚಲ್ಲಘಟ್ಟದವರೆಗೆ ಯಾವುದೇ ಸೇವೆ ಇಲ್ಲ ಎಂದು ನಮ್ಮ ಮೆಟ್ರೋ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ವಿಜಯನಗರ ಪೊಲೀಸರು ಹಾಗೂ ಬಿಎಂಆರ್ಸಿಎಲ್ನ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…