ಬೆಂಗಳೂರು: ಮೊಬೈಲ್ ಚಾರ್ಜರ್ ಬಳಸುತ್ತಿದ್ದ ಸಂದರ್ಭ ವಿದ್ಯಾರ್ಥಿ ಕರೆಂಟ್ ಶಾಕ್ ಹೊಡೆದು ಸಾವಿಗೀಡಾದ ಘಟನೆ ಬೆಂಗಳೂರಿನ ಮಂಜುನಾಥ್ ನಗರದ ಪಿಜಿಯಲ್ಲಿ ನಡೆದಿದೆ.
ಬೀದರ್ ಮೂಲದ ಶ್ರೀನಿವಾಸ್ (24) ಸಾವನ್ನಪ್ಪಿದ ವಿದ್ಯಾರ್ಥಿಯಾಗಿದ್ದಾನೆ. ಶ್ರೀನಿವಾಸ್ ಬೀದರ್‌ನಿಂದ ಬೆಂಗಳೂರಿಗೆ ಬಂದು ಸಾಫ್ಟ್‌ವೇರ್ ಕೋರ್ಸ್ ಮಾಡುತ್ತಿದ್ದರು. ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಪಿಜಿಯಲ್ಲಿ ಶ್ರೀನಿವಾಸ್ ಇದ್ದ ರೂಮ್‌ನಲ್ಲೇ ಈ ದುರ್ಟಘನೆ ನಡೆದಿದೆ. ಮೊಬೈಲ್ ಚಾರ್ಜ್ ಹಾಕಲು ಹೋದಾಗ ಎಲೆಕ್ಟ್ರಿಕ್ ಶಾಕ್ ಹೊಡೆದಿದ್ದು, ಚಾರ್ಜಿಂಗ್ ವೈರ್ ಅಥವಾ ಸ್ವಿಚ್ ಬೋರ್ಡ್‌ನಿಂದ ವಿದ್ಯುತ್ ತಗುಲಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಅವರು ಬಳಸುತ್ತಿದ್ದ ಮೊಬೈಲ್ ಚಾರ್ಜರ್ ವೈರ್ ಕೂಡ ಸ್ವಲ್ಪ ಡ್ಯಾಮೇಜ್ ಆಗಿತ್ತು ಎನ್ನಲಾಗಿದೆ. ಕರೆಂಟ್ ಶಾಕ್ ತಗುಲಿ ಅಂಗಾತ ಬಿದ್ದಿದ್ದ ಶ್ರೀನಿವಾಸನನ್ನು, ಊಟಕ್ಕೆ ಬಾ ಎಂದು ಕರೆಯಲು ಬಂದ ರೂಂ ಮೆಟ್ ಮೈಮುಟ್ಟಿ ಕರೆಯಲು ಮುಂದಾಗಿದ್ದಾನೆ. ಈ ವೇಳೆ ಆತನಿಗೂ ಶ್ರೀನಿವಾಸ್ ಮೈಯಿಂದ ಕರೆಂಟ್ ಶಾಕ್ ತಗುಲಿದೆ. ಆದರೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ. ಪಿಜಿ ಸಿಬ್ಬಂದಿ ತಕ್ಷಣ ಬಸವೇಶ್ವರ ನಗರ ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಸ್ಥಳಕ್ಕೆ ಬಂದು ಮೃತದೇಹವನ್ನು ಆಸ್ಪತ್ರೆಗೆ ಶಿಫ್ಟ್ ಮಾಡಿ ತನಿಖೆ ನಡೆಸುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…