ಬೆಂಗಳೂರು: ಯಮಹಾ ಬೈಕ್ ಶೋರೂಂ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿ, 50ಕ್ಕೂ ಹೆಚ್ಚು ಬೈಕ್‍ಗಳು ಸುಟ್ಟು ಭಸ್ಮವಾದ ಘಟನೆ ಮಹದೇವಪುರದ ಬಿ.ನಾರಾಯಣಪುರದಲ್ಲಿ ನಡೆದಿದೆ.
ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. 7 ಗಂಟೆಗೆ ಶೋರೂಂನ ಸಿಬ್ಬಂದಿ ಮನೆಗೆ ತೆರಳಿದ್ದರು. ಇನ್ನೂ 8 ಗಂಟೆ ಸುಮಾರಿಗೆ ಸೆಕ್ಯೂರಿಟಿ ಊಟಕ್ಕೆ ತೆರಳಿದ್ದರು. ಈ ವೇಳೆ ಅಗ್ನಿ ಅವಘಡ ಸಂಭವಿಸಿದೆ. ಅವಘಡದಿಂದ ಶೋರೂಂನಲ್ಲಿದ್ದ ಸುಮಾರು 50ಕ್ಕೂ ಹೆಚ್ಚು ಬೈಕ್ ಸುಟ್ಟು ಭಸ್ಮವಾಗಿವೆ. ಅಲ್ಲದೇ ಶೋ ರೂಂ ಹಿಂಬದಿಯಲ್ಲಿರುವ ಸರ್ವೀಸ್ ಸೆಂಟರ್‌ಗೆ ಸಹ ಬೆಂಕಿ ತಗುಲಿದೆ.
ತಕ್ಷಣ ಆಗ್ನಿಶಾಮಕ ಸಿಬ್ಬಂದಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಬಳಿಕ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಅಷ್ಟರಲ್ಲಾಗಲೇ ದೊಡ್ಡ ಮಟ್ಟದಲ್ಲಿ ಬೆಂಕಿ ಅವರಿಸಿ ಶೋರೂಂನಲ್ಲಿದ್ದ 40ಕ್ಕೂ ಹೆಚ್ಚು ಬೈಕ್ ಹಾಗೂ ಶೋರೂಂ ಹಿಂಭಾಗದ ಸರ್ವಿಸ್ ಸೆಂಟರ್‌ನಲ್ಲಿದ್ದ 20ಕ್ಕೂ ಹೆಚ್ಚು ಬೈಕ್‍ಗಳು ಬೆಂಕಿಗೆ ಆಹುತಿಯಾಗಿವೆ.
ಅಗ್ನಿ ಅವಘಡ ಸಂಭಿವಿಸಿದ ಶೋರೂಂ ಪಕ್ಕದಲ್ಲಿ ಮತ್ತೊಂದು ಶೋರೂಂ ಇದ್ದು, ಅಲ್ಲಿಗೂ ಬೆಂಕಿ ವ್ಯಾಪಿಸಿತ್ತು. ಅಲ್ಲಿನ ಬೈಕ್‍ಗಳನ್ನು ತಕ್ಷಣ ಬೇರೆಡೆಗೆ ಶಿಫ್ಟ್ ಮಾಡಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಬಳಿಕ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…