Featured

ಬೆಂಗಳೂರು: ಯಾವ ಮಕ್ಕಳಿಗೂ ಶಾಲೆಗೆ ಬರಲು ಬಲವಂತ ಇಲ್ಲ , ಹಾಜರಾತಿ ಕಡ್ಡಾಯ ಇಲ್ಲ : ಬಿ.ಸಿ. ನಾಗೇಶ್ – Vishwanews24

ಬೆಂಗಳೂರು: ಯಾವ ಮಕ್ಕಳಿಗೂ ಶಾಲೆಗೆ ಬರಲು ಬಲವಂತ ಇಲ್ಲ , ಹಾಜರಾತಿ ಕಡ್ಡಾಯ ಇಲ್ಲ : ಬಿ.ಸಿ. ನಾಗೇಶ್ – Vishwanews24

ಬೆಂಗಳೂರು: ಮಕ್ಕಳಿಗೆ ಹಾಜರಾತಿ ಕಡ್ಡಾಯವಲ್ಲ, ಶಾಲೆ ಆರಂಭವಾದರೂ ಚಂದನದಲ್ಲಿ ತರಗತಿ ಮುಂದುವರೆಯುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.

ಬೆಂಗಳೂರಿನಲ್ಲಿ ಒಂದರಿಂದ ಒಂಬತ್ತನೇ ತರಗತಿಯ ಬಗ್ಗೆ ತಜ್ಞರ ಸಲಹೆ ಮೇರೆಗೆ ಶಾಲೆ ಆರಂಭದ ಕುರಿತು ನಿರ್ಧಾರ ಮಾಡುತ್ತೇವೆ. ಶಾಲೆ ಪ್ರಾರಂಭಿಸಿ ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ನೀಡುವುದು ನಮ್ಮ ಆಧ್ಯತೆಯಾಗಿದೆ. ಆದ್ದರಿಂದ ಇಂದಿನ ಕ್ಯಾಬಿನೆಟ್‍ನಲ್ಲಿಯೂ ಈ ಬಗ್ಗೆ ಚರ್ಚೆ ನಡೆಸುತ್ತೇವೆ. ತಜ್ಞರು ಒಪ್ಪಿಗೆ ನೀಡಿದರೆ ಸೋಮವಾರದಿಂದ ಶಾಲೆ ಪ್ರಾರಂಭ ಮಾಡುತ್ತೇವೆ ಎಂದು ತಿಳಿಸಿದರು.

ಕೊರೊನಾ ಮೂರನೇ ಅಲೆಯಿಂದ ಯಾವ ಮಕ್ಕಳಿಗೂ ಹೆಚ್ಚಿನ ತೊಂದರೆಯಿಲ್ಲ. ಆದರೂ ಆರೊಗ್ಯದ ವಿಚಾರದಲ್ಲಿ ಶಿಕ್ಷಣ ಇಲಾಖೆ ಯಾವುದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲ. ಇದರಿಂದ ಆರೋಗ್ಯ ಇಲಾಖೆ ಜೊತೆ ಚರ್ಚಿಸಿ ಕ್ರಮ ತೆಗೆದುಕೊಳ್ಳುತ್ತೇವೆ.

ಈ ವರ್ಷ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ. ಯಾವ ಮಕ್ಕಳಿಗೂ ಶಾಲೆಗೆ ಬರಲು ಬಲವಂತ ಇಲ್ಲ. ಪರೀಕ್ಷೆಗೂ 75% ಹಾಜರಾತಿ ಕಡ್ಡಾಯ ಮಾಡುವುದಿಲ್ಲ. ಎಸ್‍ಎಸ್‍ಎಲ್ಸಿ ಮತ್ತು ಪಿಯುಸಿ ಪರೀಕ್ಷೆ ನಿಗದಿಯಂತೆ ನಡೆಯುತ್ತದೆ. ಪೂರ್ಣ ಪ್ರಮಾಣದ ಆಫ್‍ಲೈನ್ ತರಗತಿ ಪ್ರಾರಂಭ ಆಗೋವರೆಗೂ ಚಂದನ, ಆಕಾಶವಾಣಿಯಲ್ಲಿ ಪಠ್ಯ ಬೋಧನೆ ಮುಂದುವರೆಯುತ್ತದೆ ಎಂದು ಭರವಸೆ ನೀಡಿದರು.

ಇದನ್ನೂ ಓದಿ :

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

10 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

12 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

12 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

12 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

13 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

13 hours ago