ಬೆಂಗಳೂರು: ಮಕ್ಕಳಿಗೆ ಹಾಜರಾತಿ ಕಡ್ಡಾಯವಲ್ಲ, ಶಾಲೆ ಆರಂಭವಾದರೂ ಚಂದನದಲ್ಲಿ ತರಗತಿ ಮುಂದುವರೆಯುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.
ಬೆಂಗಳೂರಿನಲ್ಲಿ ಒಂದರಿಂದ ಒಂಬತ್ತನೇ ತರಗತಿಯ ಬಗ್ಗೆ ತಜ್ಞರ ಸಲಹೆ ಮೇರೆಗೆ ಶಾಲೆ ಆರಂಭದ ಕುರಿತು ನಿರ್ಧಾರ ಮಾಡುತ್ತೇವೆ. ಶಾಲೆ ಪ್ರಾರಂಭಿಸಿ ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ನೀಡುವುದು ನಮ್ಮ ಆಧ್ಯತೆಯಾಗಿದೆ. ಆದ್ದರಿಂದ ಇಂದಿನ ಕ್ಯಾಬಿನೆಟ್‍ನಲ್ಲಿಯೂ ಈ ಬಗ್ಗೆ ಚರ್ಚೆ ನಡೆಸುತ್ತೇವೆ. ತಜ್ಞರು ಒಪ್ಪಿಗೆ ನೀಡಿದರೆ ಸೋಮವಾರದಿಂದ ಶಾಲೆ ಪ್ರಾರಂಭ ಮಾಡುತ್ತೇವೆ ಎಂದು ತಿಳಿಸಿದರು.
ಕೊರೊನಾ ಮೂರನೇ ಅಲೆಯಿಂದ ಯಾವ ಮಕ್ಕಳಿಗೂ ಹೆಚ್ಚಿನ ತೊಂದರೆಯಿಲ್ಲ. ಆದರೂ ಆರೊಗ್ಯದ ವಿಚಾರದಲ್ಲಿ ಶಿಕ್ಷಣ ಇಲಾಖೆ ಯಾವುದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲ. ಇದರಿಂದ ಆರೋಗ್ಯ ಇಲಾಖೆ ಜೊತೆ ಚರ್ಚಿಸಿ ಕ್ರಮ ತೆಗೆದುಕೊಳ್ಳುತ್ತೇವೆ.
ಈ ವರ್ಷ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ. ಯಾವ ಮಕ್ಕಳಿಗೂ ಶಾಲೆಗೆ ಬರಲು ಬಲವಂತ ಇಲ್ಲ. ಪರೀಕ್ಷೆಗೂ 75% ಹಾಜರಾತಿ ಕಡ್ಡಾಯ ಮಾಡುವುದಿಲ್ಲ. ಎಸ್‍ಎಸ್‍ಎಲ್ಸಿ ಮತ್ತು ಪಿಯುಸಿ ಪರೀಕ್ಷೆ ನಿಗದಿಯಂತೆ ನಡೆಯುತ್ತದೆ. ಪೂರ್ಣ ಪ್ರಮಾಣದ ಆಫ್‍ಲೈನ್ ತರಗತಿ ಪ್ರಾರಂಭ ಆಗೋವರೆಗೂ ಚಂದನ, ಆಕಾಶವಾಣಿಯಲ್ಲಿ ಪಠ್ಯ ಬೋಧನೆ ಮುಂದುವರೆಯುತ್ತದೆ ಎಂದು ಭರವಸೆ ನೀಡಿದರು.
ಇದನ್ನೂ ಓದಿ :
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…
ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…
ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್ ಆಟಗಾರ, ಟೀಂ…
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…
ಬೆಂಗಳೂರು: ಡೇ ಕೇರ್ ಸೆಂಟರ್ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…
ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…