ಬೆಂಗಳೂರು: ಯುಗಾದಿ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿ ವತಿಯಿಂದ 2,000 ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ. ಈ ವಿಶೇಷ ಬಸ್‌ಗಳು ಮಾರ್ಚ್ 28,
29 ಹಾಗೂ 30 ರಂದು ಮೂರು ದಿನ ಬೆಂಗಳೂರಿನಿಂದ ರಾಜ್ಯ, ಹೊರ ರಾಜ್ಯದ ಪ್ರಮುಖ ಸ್ಥಳಗಳಿಗೆ ಸಂಚಾರ ನಡೆಸಲಿವೆ.
ಈ ಬಗ್ಗೆ ಕೆಎಸ್‌ಆರ್‌ಟಿಸಿ ಪ್ರಕಟಣೆ ನೀಡಿದ್ದು, ಮಾರ್ಚ್ 30 ರಂದು ಚಂದ್ರಮಾನ ಯುಗಾದಿ, ಮಾರ್ಚ್ 31 ರಂದು ರಂಜಾನ್ ಹಬ್ಬವಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರಿನಿಂದ ಪ್ರಯಾಣಿಕರು ತಮ್ಮ ಊರುಗಳಿಗೆ ಸಂಚಾರ ನಡೆಸುತ್ತಾರೆ. ಇವರ ಅನುಕೂಲಕ್ಕಾಗಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಈ ಹೆಚ್ಚುವರಿ ಬಸ್‌ಗಳು ಮೆಜೆಸ್ಟಿಕ್, ಶಾಂತಿನಗರ, ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ನಡೆಸಲಿವೆ.
ಮೆಜೆಸ್ಟಿಕ್‌ನಿಂದ…
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಈ ವಿಶೇಷ ಬಸ್ ಸಂಚರಿಸಲಿವೆ. ಇದನ್ನೂ ಓದಿ: ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ – ಗಂಡನ ಹಿಂಸೆ ತಾಳಲಾರದೆ ತವರು ಸೇರಿದ್ದ ಪತ್ನಿ
ಸ್ಯಾಟಲೈಟ್ ಬಸ್ ನಿಲ್ದಾಣದಿಂದ
ಮಂಡ್ಯ,ರಾಮನಗರ, ಕುಶಾಲನಗರ, ಚಾಮರಾಜನಗರ, ಕೊಡಗು, ವೀರಾಜಪೇಟೆ, ಪಿರಿಯಾಪಟ್ಟಣಕ್ಕೆ ಬಸ್ ಗಳು ಲಭ್ಯವಿರಲಿದೆ.
ಶಾಂತಿನಗರ ಬಸ್ ನಿಲ್ದಾಣದಿಂದ
ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಝಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ವಿಶೇಷ ಬಸ್‌ಗಳು ಕಾರ್ಯಾಚರಣೆ ಮಾಡಲಿವೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…