Featured

ಬೆಂಗಳೂರು :ಯುಗಾದಿ, ರಂಜಾನ್‌ ಹಬ್ಬದ ಹಿನ್ನೆಲೆ  ಮಾ.31ರ ವರೆಗೆ ವಿಶೇಷ ಬಸ್‌

ಬೆಂಗಳೂರು :ಯುಗಾದಿ, ರಂಜಾನ್‌ ಹಬ್ಬದ ಹಿನ್ನೆಲೆ  ಮಾ.31ರ ವರೆಗೆ ವಿಶೇಷ ಬಸ್‌  -Vishwanews24

ಬೆಂಗಳೂರು: ಯುಗಾದಿ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿ ವತಿಯಿಂದ 2,000 ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ. ಈ ವಿಶೇಷ ಬಸ್‌ಗಳು ಮಾರ್ಚ್‌ 28,

29 ಹಾಗೂ 30 ರಂದು ಮೂರು ದಿನ ಬೆಂಗಳೂರಿನಿಂದ ರಾಜ್ಯ, ಹೊರ ರಾಜ್ಯದ ಪ್ರಮುಖ ಸ್ಥಳಗಳಿಗೆ ಸಂಚಾರ ನಡೆಸಲಿವೆ.

ಈ ಬಗ್ಗೆ ಕೆಎಸ್‌ಆರ್‌ಟಿಸಿ ಪ್ರಕಟಣೆ ನೀಡಿದ್ದು, ಮಾರ್ಚ್‌ 30 ರಂದು ಚಂದ್ರಮಾನ ಯುಗಾದಿ, ಮಾರ್ಚ್‌ 31 ರಂದು ರಂಜಾನ್ ಹಬ್ಬವಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರಿನಿಂದ ಪ್ರಯಾಣಿಕರು ತಮ್ಮ ಊರುಗಳಿಗೆ ಸಂಚಾರ ನಡೆಸುತ್ತಾರೆ. ಇವರ ಅನುಕೂಲಕ್ಕಾಗಿ ವಿಶೇಷ ಬಸ್‌ ವ್ಯವಸ್ಥೆ ಮಾಡಲಾಗಿದೆ. ಈ ಹೆಚ್ಚುವರಿ ಬಸ್‌ಗಳು ಮೆಜೆಸ್ಟಿಕ್, ಶಾಂತಿನಗರ, ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ನಡೆಸಲಿವೆ.

ಮೆಜೆಸ್ಟಿಕ್‌ನಿಂದ
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಈ ವಿಶೇಷ ಬಸ್‌ ಸಂಚರಿಸಲಿವೆ. ಇದನ್ನೂ ಓದಿ: ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ – ಗಂಡನ ಹಿಂಸೆ ತಾಳಲಾರದೆ ತವರು ಸೇರಿದ್ದ ಪತ್ನಿ

ಸ್ಯಾಟಲೈಟ್‌ ಬಸ್‌ ನಿಲ್ದಾಣದಿಂದ
ಮಂಡ್ಯ,ರಾಮನಗರ, ಕುಶಾಲನಗರ, ಚಾಮರಾಜನಗರ, ಕೊಡಗು, ವೀರಾಜಪೇಟೆ, ಪಿರಿಯಾಪಟ್ಟಣಕ್ಕೆ ಬಸ್ ಗಳು ಲಭ್ಯವಿರಲಿದೆ.

ಶಾಂತಿನಗರ ಬಸ್ ನಿಲ್ದಾಣದಿಂದ
ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಝಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ವಿಶೇಷ ಬಸ್‌ಗಳು ಕಾರ್ಯಾಚರಣೆ ಮಾಡಲಿವೆ.

Vishwa News 24

Recent Posts

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

2 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

5 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

6 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

6 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

7 hours ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

7 hours ago