Featured

ಬೆಂಗಳೂರು ಯುವಕನ ಕಿಡ್ನಾಪ್, ಕೊಲೆ ಪ್ರಕರಣ; ಶವಕ್ಕಾಗಿ ಚಾರ್ಮಾಡಿ ಘಾಟ್ ನಲ್ಲಿ ಹುಡುಕಾಟ – Vishwanews24

ಬೆಂಗಳೂರು ಯುವಕನ ಕಿಡ್ನಾಪ್, ಕೊಲೆ ಪ್ರಕರಣ; ಶವಕ್ಕಾಗಿ ಚಾರ್ಮಾಡಿ ಘಾಟ್ ನಲ್ಲಿ ಹುಡುಕಾಟ

ಕೊಟ್ಟಿಗೆಹಾರ: ಸುಮಾರು 9 ತಿಂಗಳ ಹಿಂದೆ ಕೊಲೆಯಾದ ಯುವಕನ ಶವವನ್ನು ಚಾರ್ಮಾಡಿ ಘಾಟಿ ಪರಿಸರದಲ್ಲಿ ಎಸೆಯಲಾಗಿದೆ ಎಂದು ಆರೋಪಿಗಳು ತಿಳಿಸಿದ್ದು ಅದರಂತೆ ಬೆಂಗಳೂರು ಕಬ್ಬನ್ ಪಾರ್ಕ್ ಪೊಲೀಸರು ಡಿಸಿಪಿ ನೇತೃತ್ವದಲ್ಲಿ ಇನ್ಸ್ ಪೆಕ್ಟರ್, ಪಿಎಸ್ ಐ ಮತ್ತು ಸಿಬ್ಬಂದಿಗಳು ಶವ ಪತ್ತೆ ಹಚ್ಚುವ ಕಾರ್ಯಾಚರಣೆಗೆ ಮಂಗಳವಾರ ಆಗಮಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ – ದಕ್ಷಿಣ ಕನ್ನಡ ಜಿಲ್ಲೆಗೆ ಸೇರಿದ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿ ಹಾಗೂ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಘಾಟಿಯ ಪ್ರದೇಶಗಳ ಕಣಿವೆಗಳಲ್ಲಿ ಸ್ಥಳೀಯ ಪೊಲೀಸರ ಹಾಗೂ ಸಾರ್ವಜನಿಕರ ಸಹಕಾರದಲ್ಲಿ ಹುಡುಕಾಟ ಆರಂಭಿಸಿದ್ದಾರೆ.

ಘಟನೆಯ ಹಿನ್ನೆಲೆ: ಬೆಂಗಳೂರಿನ ಕೋಣನಕುಂಟೆ ನಿವಾಸಿ ಶರತ್ ಎಂಬಾತ ಸಾಲ ಪಡೆದು ಹಿಂತಿರುಗಿಸದೆ ಓಡಾಡುತ್ತಿದ್ದ. ಇದರಿಂದ ರೊಚ್ಚಿಗೆದ್ದ ಗ್ಯಾಂಗ್ ಶರತ್ ನನ್ನು ಕಿಡ್ನಾಪ್ ಮಾಡಿ ಕೊಲೆ ಮಾಡಿದ್ದರು. ಕೊಲೆಯಾದ ಎಚ್. ಶರತ್ ಚಿಕ್ಕಬಳ್ಳಾಪುರ ಹಾಗೂ ಯಲಹಂಕ ನಿವಾಸಿಗಳಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ಸಬ್ಸಿಡಿ ದರದಲ್ಲಿ ವಾಹನ ಕೊಡಿಸುವುದಾಗಿ ನಂಬಿಸಿದ್ದ. ಆದರೆ ಕಾರು ಕೊಡಿಸದೆ ಅಲ್ಲಿನ‌ ಜನರಿಗೆ ವಂಚಿಸಿದ್ದ.ಇದರಿಂದ ಹಣ ಕೊಟ್ಟು ಜನ ಎಚ್. ಶರತ್ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದರು. ಅಷ್ಟೇ ಅಲ್ಲದೆ ಚಿಕ್ಕಬಳ್ಳಾಪುರದ ಮಖಂಡರೊಬ್ಬರಿಗೆ ಹಣ ವಾಪಸ್ ಕೊಡಿಸುವಂತೆ ಜನ ಕೇಳಿಕೊಂಡಿದ್ದಾರೆ. ಜನರ‌ ಮನವಿ‌ ಮೇರೆಗೆ ಅವರು ತನ್ನ ಪುತ್ರನಿಗೆ ಹಣ ವಸೂಲಿ ಮಾಡುವಂತೆ ಹೇಳಿದ್ದ. ಇದರಿಂದ ಇಲ್ಲಿಂದ ಶರತ್ ಕಿಡ್ನಾಪ್ ಆ್ಯಂಡ್ ಮರ್ಡರ್ ಪ್ಲಾನ್ ಆರಂಭವಾಯಿತು ಎಂದು ಕೇಳಿ ಬರುತ್ತಿದೆ.

ಮುಖಂಡರ ಹಾಗೂ ಆತನ‌ ಸ್ನೇಹಿತರು, ಜತೆಗೆ ಹಣ ಪಡೆದುಕೊಂಡ ಕೆಲವರು ಸೇರಿ ಶರತ್‌ ನನ್ನು ಕಿಡ್ನಾಪ್ ಮಾಡಿ ಆತನ ಮೊಬೈಲ್ ನಿಂದಲೇ ಯುವಕನ ತಂದೆ ತಾಯಿಗೆ ‘ನಾನು ದುಡಿಯಲು ಹೋಗುತ್ತಿದ್ದೇನೆ ಹುಡುಕಬೇಡಿ ಎಂದು ಮೆಸೇಜ್’ ಹಾಕಿ ಬಳಿಕ ಮೊಬೈಲನ್ನು ಲಾರಿಯೊಂದರ ಮೇಲೆ ಎಸೆದಿದ್ದಾರೆ. ಲಾರಿ ಮೈಸೂರು ಮಾರ್ಗವಾಗಿ ಸಾಗಿ ಹೊರ ರಾಜ್ಯಕ್ಕೆ ಪ್ರಯಾಣವಾಗಿದ್ದು ಬಳಿಕ ಮೊಬೈಲ್ ಸ್ವಿಚ್‌ ಆಫ್ ಆಗಿತ್ತು. ಇಷ್ಟರಲ್ಲಿ ಶರತ್‌ ನನ್ನು ಬನಶಂಕರಿಯಿಂದ ಅಪಹರಿಸಿದ ಗ್ಯಾಂಗ್ ಚಿಕ್ಕಬಳ್ಳಾಪುರದ ಗೌರಿಬಿದನೂರಿನ ವಾಟದ ಹೊಸಹಳ್ಳಿಯ ಮಾವಿನ ತೋಟದ ಮನೆಯೊಂದರಲ್ಲಿ ಬಂಧನದಲ್ಲಿ ಇಡಲಾಗಿತ್ತು. ಬಳಿಕ ಆತನಿಗೆ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ. ಆತನಿಗೆ ಹಿಂಸೆ ನೀಡಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಕೊಲೆಯಾದ ಶರತ್‌ ನ ಶವನನ್ನು ಚಾರ್ಮಾಡಿ ಘಾಟ್‌ನಲ್ಲಿ ಎಸೆದು ಯಾರಿಗೂ ಶವದ ಸುಳಿವು ಸಿಗದಂತೆ ಮಾಡಿದ್ದರು. ಸದ್ಯ ಕಬ್ಬನ್ ಪಾರ್ಕ್ ಪೊಲೀಸರು ಸಮೊಟೋ ಪ್ರಕರಣವನ್ನು ದಾಖಲಿಸಿ 10 ಮಂದಿ ಆರೋಪಿಗಳನ್ನು ಬಂಧಿಸಿ ಅವರ ಮೇಲೆ ಕೊಲೆ ಪ್ರಕರಣ ಎಫ್ಐಆರ್ ದಾಖಲಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಪತ್ರ‌ ನೀಡಿದ ಸುಳಿವು:

ಈ ಕಿಡ್ನಾಪ್, ಕೊಲೆ 9 ತಿಂಗಳ ಹಿಂದೆಯೇ ನಡೆದಿದೆ. ಆದರೆ ಪ್ರಕರಣ ನಡೆದು ಕೆಲವು ತಿಂಗಳ ನಂತರ ಕೇಂದ್ರ ವಿಭಾಗದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಬಂದ ಪತ್ರ ಹಾಗೂ ಚಿತ್ರಹಿಂಸೆ ನೀಡಿದ ದೃಶ್ಯದ ಪೆನ್ ಡ್ರೈವ್ ಕೊಲೆಯ ಸುಳಿವು ನೀಡಿದೆ.‌

ಬಳಿಕ‌ ಪೊಲೀಸರು ವಿಶೇಷ ತಂಡ ರಚಿಸಿ ರಹಸ್ಯ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಒಟ್ಟು 10 ಜನರನ್ನು ಬಂಧಿಸಿದಾಗ ಘಟನೆಯ ಸಂಪೂರ್ಣ ಚಿತ್ರಣ ದೊರಕಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಚಾರ್ಮಾಡಿ ಘಾಟಿ ಪರಿಸರಕ್ಕೆ ಕರೆ ತಂದು ಶವ ಹುಡುಕಲು ಮುಂದಾಗಿದ್ದಾರೆ.

ಶವ ಹುಡುಕುವುದೇ ಸವಾಲು:

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಚಾರ್ಮಾಡಿ ಘಾಟಿ ಸಾಕಸ್ಟು ಕಣಿವೆ ಪ್ರದೇಶಗಳನ್ನು ಹೊಂದಿದೆ. ಘಾಟಿಯ ಸ್ಥಳಗಳಲ್ಲಿ ವಿಪರೀತ ಪೊದೆಗಳು ಆಳವಾದ ಕಂದಕಗಳು ಇವೆ. ಘಟನೆ ನಡೆದು 9 ತಿಂಗಳು ಕಳೆದಿರುವುದರಿಂದ ಇಲ್ಲಿ ತಂದು ಎಸೆಯಲಾಗಿದೆ ಎಂದಿರುವ ಶವ ಮಳೆಗಾಲದಲ್ಲಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ, ಪ್ರದೇಶದಲ್ಲಿ ಸಾಕಷ್ಟು ವನ್ಯಮೃಗಗಳು ಇದ್ದು ಅವುಗಳ ಪಾಲಾಗಿರುವ ಶಂಕೆಯು ಇದೆ.

 

Vishwa News 24

Recent Posts

ಉಡುಪಿ: ಖರ್ಗೆ ಭಾಷಣ ಸ್ಥಳ ಸ್ವಚ್ಛಗೊಳಿಸಿದ ಬಿಜೆಪಿ ವಿರುದ್ಧ ಸೆ. 12ರಂದು  ಕಾಂಗ್ರೆಸ್ ಸತ್ಯಾಗ್ರಹ – vishwanews24

ಉಡುಪಿ: ಖರ್ಗೆ ಭಾಷಣ ಸ್ಥಳ ಸ್ವಚ್ಛಗೊಳಿಸಿದ ಬಿಜೆಪಿ ವಿರುದ್ಧ ಸೆ. 12ರಂದು  ಕಾಂಗ್ರೆಸ್ ಸತ್ಯಾಗ್ರಹ ಅಜ್ಜರಕಾಡಿನ ಗಾಂಧಿ ಪ್ರತಿಮೆ ಎದುರು ಮೌನ…

11 hours ago

ಉಡುಪಿ :ವ್ಯಕ್ತಿ ನಾಪತ್ತೆ – vishwanews24

ಉಡುಪಿ :ವ್ಯಕ್ತಿ ನಾಪತ್ತೆ  ಉಡುಪಿ : ಕೊಡಂಕೂರು ಮೂಡುತೋಟದ ನಿವಾಸಿ ಶರತ್ (35) ಎಂಬ ವ್ಯಕ್ತಿಯು  ಸೆ. 7 ರಂದು…

11 hours ago

ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್ : ಎರಡೇ ಚರಣ ಹಾಡಲು ರಾಜ್ಯ ಸರ್ಕಾರ ಆದೇಶ – vishwanews24

ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್ : ಎರಡೇ ಚರಣ ಹಾಡಲು ರಾಜ್ಯ ಸರ್ಕಾರ ಆದೇಶ ಬೆಂಗಳೂರು: ವಂದೇ ಮಾತರಂ…

12 hours ago

ರಾಜ್ಯ ಕಾಂಗ್ರೆಸ್ ಸರ್ಕಾರ ಆದಷ್ಟು ಬೇಗ ಮನೆಗೆ ಹೋಗಲಿದೆ , ಬಿಜೆಪಿಗೆ ಜನಾಶ್ರೀರ್ವಾದ ಸಿಗಲಿದೆ : ಬಿ.ವೈ. ವಿಜಯೇಂದ್ರ – vishwanews24

ಯುದ್ಧ ಆರಂಭವಾಗಿದೆ, ರಣರಂಗದಲ್ಲಿ ಗೆಲುವು ನಮ್ಮದೇ .. ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮುಂದಿನ ಒಂದೂವರೆ ವರ್ಷಗಳ ಕಾಲ ಮುಂದುವರಿಯಲಿದೆ…

12 hours ago

ಡಿ.ಕೆ. ಶಿವಕುಮಾರ್‌ ಅವರ ನೇತೃತ್ವದ ಸರ್ಕಾರ ಸರಿಯಾದ ಹಾದಿಯಲ್ಲಿ ಸಾಗುತ್ತಿದೆ : ಸಿದ್ದರಾಮಯ್ಯ – vishwanews24

ಡಿ.ಕೆ. ಶಿವಕುಮಾರ್‌ ಅವರ ನೇತೃತ್ವದ ಸರ್ಕಾರ ಸರಿಯಾದ ಹಾದಿಯಲ್ಲಿ ಸಾಗುತ್ತಿದೆ : ಸಿದ್ದರಾಮಯ್ಯ ಬೆಂಗಳೂರು:ಡಿ.ಕೆ ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗಿ ಅವರ…

13 hours ago

ಉಡುಪಿ : 28 ಗಂಟೆಗಳ ನಿರಂತರ ಗಾಯನದ ಮೂಲಕ ವಿಶ್ವ ದಾಖಲೆ ನಿರ್ಮಿಸಲು ಮುಂದಾದ ಖ್ಯಾತ ಗಾಯಕ ವಿದ್ವಾನ್ ಯಶವಂತ್ ಎಂ.ಜಿ. – vishwanews24

ಉಡುಪಿ : 28 ಗಂಟೆಗಳ ನಿರಂತರ ಗಾಯನದ ಮೂಲಕ ವಿಶ್ವ ದಾಖಲೆ ನಿರ್ಮಿಸಲು ಮುಂದಾದ ಖ್ಯಾತ ಗಾಯಕ ವಿದ್ವಾನ್ ಯಶವಂತ್…

13 hours ago