ಬೆಂಗಳೂರು: ಪ್ರೇಮ ವಿವಾಹವಾಗಿದ್ದ ಯುವತಿಯನ್ನು ಕುಟುಂಬದವರು ಅಪಹರಿಸಲು ಸುಪಾರಿ ನೀಡಿದ ಆರೋಪ ಕೇಳಿಬಂದಿದ್ದು, ಬೆಂಗಳೂರಿನಲ್ಲಿ ಸಿನಿಮೀಯ ರೀತಿಯ ಕಿಡ್ನಾಪ್ ಯತ್ನ ನಡೆದಿದೆ. ಅಗ್ರಹಾರ ದಾಸರಹಳ್ಳಿಯ ಮನೆಗೆ ನುಗ್ಗಿದ ಆರೋಪಿಗಳು ಪೂಜಾ ಎಂಬ 21 ವರ್ಷದ ಯುವತಿಯನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ಯಲು ಮುಂದಾಗಿದ್ದಾರೆ. ಈ ವೇಳೆ ಸ್ಥಳೀಯರು ತಡೆಯಲು ಬಂದಾಗ, ಆರೋಪಿಗಳು ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿ ಸರಣಿ ಅಪಘಾತಕ್ಕೆ ಕಾರಣರಾಗಿದ್ದಾರೆ.
ರಾಜಸ್ಥಾನ ಮೂಲದ ಪೂಜಾ, ಓಂ ಪ್ರಕಾಶ್ ಎಂಬ ಯುವಕನನ್ನು ಪ್ರೀತಿಸಿ ಸುಮಾರು 9 ತಿಂಗಳ ಹಿಂದೆ ವಿವಾಹವಾಗಿದ್ದರು. ಮದುವೆಯ ಬಳಿಕ ಇಬ್ಬರೂ ರಾಜಸ್ಥಾನ ತೊರೆದು ಬೆಂಗಳೂರಿಗೆ ಬಂದು, ಅಗ್ರಹಾರ ದಾಸರಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಆದರೆ, ಮಗಳ ಪ್ರೇಮ ವಿವಾಹವನ್ನು ಕುಟುಂಬದವರು ಒಪ್ಪಿರಲಿಲ್ಲ ಎನ್ನಲಾಗಿದೆ.
ರಾತ್ರಿ ಕಾರಿನಲ್ಲಿ ಬೆಂಗಳೂರಿಗೆ ಬಂದಿದ್ದ ಆರೋಪಿಗಳು, ಪೂಜಾ ವಾಸವಿದ್ದ ಮನೆಗೆ ನುಗ್ಗಿ ಆಕೆಯನ್ನು ಬಲವಂತವಾಗಿ ಹೊರಗೆ ಕರೆತಂದಿದ್ದಾರೆ. ಯುವತಿ ಚೀರಾಟ ಕೇಳಿ ಸ್ಥಳೀಯರು ರಕ್ಷಣೆಗೆ ಧಾವಿಸಿದಾಗ, ಆರೋಪಿಗಳು ಆಕೆಯನ್ನು ಕಾರಿನಲ್ಲಿ ಹತ್ತಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಕಾರು ಚಾಲಕ ಸದ್ದಾಂ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿದ್ದು, ದಾರಿಯುದ್ದಕ್ಕೂ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾನೆ.
ದಾಸರಹಳ್ಳಿಯಿಂದ ಗೋವಿಂದರಾಜನಗರ, ವಿಜಯನಗರ ಮಾರ್ಗವಾಗಿ ಹೊಸಹಳ್ಳಿ ಕಡೆಗೆ ಸಾಗಿದ ಕಾರು, ಪೊಲೀಸ್ ವಾಹನ, ನ್ಯಾಯಾಧೀಶರ ಕಾರು ಸೇರಿದಂತೆ 35ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಅಲ್ಲದೆ, 100ಕ್ಕೂ ಹೆಚ್ಚು ಬೈಕ್‌ಗಳಿಗೂ ಡಿಕ್ಕಿ ಹೊಡೆದಿರುವ ಆರೋಪ ಕೇಳಿಬಂದಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಪೃಥ್ವಿರಾಜ್ (12), ಯಶಿಕಾ (9), ಅಮುಲ್ (25), ಮಣಿ (64), ಸಂತೋಷ್ (33) ಮತ್ತು ಜಯಲಕ್ಷ್ಮೀ (57) ಎಂದು ಗುರುತಿಸಲಾಗಿದೆ. ಜಯಲಕ್ಷ್ಮೀ ಅವರನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.\
ಸ್ಥಳೀಯರು ಆರೋಪಿಗಳ ಕಾರನ್ನು ಬೆನ್ನಟ್ಟಿಕೊಂಡು ಹೋಗಿ ಹೊಸಹಳ್ಳಿ ಬಳಿ ಅಡ್ಡಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಕಾರಿನಲ್ಲಿದ್ದ ಪೂಜಾಳನ್ನು ರಕ್ಷಿಸಿ, ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆಕ್ರೋಶಗೊಂಡ ಸ್ಥಳೀಯರು ಕಾರಿನ ಗಾಜುಗಳನ್ನು ಕಲ್ಲಿನಿಂದ ಒಡೆದು ಹಾಕಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಮೂಲದ ರಾಕೇಶ್ (31), ಕರಣ್ (25) ಮತ್ತು ಆಯನ್ (18) ಎಂಬ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತೊಬ್ಬ ಆರೋಪಿಗಾಗಿ ಶೋಧ ನಡೆಸಲಾಗುತ್ತಿದೆ. ಅಪಹರಣಕ್ಕೆ ಬಳಸಿದ್ದ ಕಾರಿನ ಚಾಲಕ ಸದ್ದಾಂ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಗಳ ಪ್ರೇಮ ವಿವಾಹವನ್ನು ಒಪ್ಪದ ಕುಟುಂಬದವರು, ಆಕೆಯನ್ನು ಬೆಂಗಳೂರಿನಿಂದ ಕರೆದುಕೊಂಡು ಬರಲು ಆರೋಪಿಗಳಿಗೆ ಸುಪಾರಿ ನೀಡಿದ್ದರು ಎಂಬ ಆರೋಪ ಕೇಳಿಬಂದಿದೆ. ಪ್ರಕರಣದ ಕುರಿತು ಮಾಗಡಿ ರೋಡ್ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ತನಿಖೆ ಮುಂದುವರಿಸಿದ್ದಾರೆ.
'ದಾದಾಸಾಹೇಬ್ ಫಾಲ್ಕೆ' ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ನೀಡಿದ ಅಪಾರ…
ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ ಕೊಣಾಜೆ : ಚಾಲಕನ ನಿಯಂತ್ರಣ…
ಮಂಗಳೂರು : ಜೈಲಿನಲ್ಲಿ ಗಲಾಟೆ ;ಅಡುಗೆಮನೆ ಸ್ಫೋಟಿಸುವುದಾಗಿ ಕೈದಿ ಬೆದರಿಕೆ ಮಂಗಳೂರು,: ಜೈಲು ಅಡುಗೆಮನೆಯ ಗೇಟಿಗೆ ಬೀಗ ಹಾಕಿದ ಬಳಿಕ…
ಬೆಳ್ತಂಗಡಿ: ಗಡಾಯಿಕಲ್ಲು ಚಾರಣಕ್ಕೆ ಮುಕ್ತ ; ದಿನಕ್ಕೆ 500 ಪ್ರವಾಸಿಗರಿಗೆ ಮಾತ್ರ ಅವಕಾಶ ಬೆಳ್ತಂಗಡಿ: ತಾಲೂಕಿನ ಗಡಾಯಿಕಲ್ಲು ಚಾರಣ ತಾಣವು ಸೆ.…
ಕುಂದಾಪುರ: ಮೀನುಗಾರರ ಹಿತ ಕಾಯಲು ಸರಕಾರ ಬದ್ಧ: ಸಚಿವ ಬಸವಂತಪ್ಪ ಕುಂದಾಪುರ: ಮೀನುಗಾರಿಕೆ ವಲಯದ ಜ್ವಲಂತ ಸಮಸ್ಯೆಗಳ ಕುರಿತು ಅರಿಯಲು,…
ಮಂಗಳೂರಿನ ಸಚಿವ ಸಂಪುಟ ಸಭೆಯಲ್ಲಿ ಉಡುಪಿಯ ಜಿಲ್ಲಾಸ್ಪತ್ರೆಯ ಲೋಕಾರ್ಪಣೆಗೆ ಅಗತ್ಯ ನಿರ್ಣಯ ಕೈಗೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ…