ಬೆಂಗಳೂರು: ದೇಶವನ್ನೇ ಬೆಚ್ಚಿಬೀಳಿಸಿದ್ದ ದೆಹಲಿಯ ಶ್ರದ್ಧಾ ವಾಕರ್ ಕೊಲೆಯ ರೀತಿಯಲ್ಲೇ ಬೆಂಗಳೂರಿನಲ್ಲಿಯೂ ಯುವತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ನಗರದ ವೈಯಾಲಿಕಾವಲ್‌ನ ಪೈಪ್ ಲೈನ್ ರಸ್ತೆಯ ವೀರಣ್ಣ ಭವನ ಬಳಿಯ ಮನೆಯೊಂದರಲ್ಲಿ ಆರೋಪಿಯು ಯುವತಿಯನ್ನು ಕೊಲೆಗೈದು 30 ಕ್ಕೂ ಹೆಚ್ಚು ಪೀಸ್ ಪೀಸ್ ಮಾಡಿ ಫ್ರಿಜ್‌ನಲ್ಲಿ ಇಟ್ಟಿದ್ದಾನೆ. ಮೇಲ್ನೋಟಕ್ಕೆ ಹೊರ ರಾಜ್ಯದ ಸುಮಾರು 25 ರಿಂದ 26 ವಯಸ್ಸಿನ ಯುವತಿ ಎಂದು ಗುರುತಿಸಲಾಗಿದ್ದು, ಹತ್ತರಿಂದ ಹದಿನೈದು ದಿನಗಳ ಹಿಂದೆಯೇ ಹತ್ಯೆ ಮಾಡಲಾಗಿದೆ. ಸಧ್ಯ ಸ್ಥಳಕ್ಕೆ ವೈಯಾಲಿಕಾವಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಳೆದ ಎರಡು ದಿನಗಳಿಂದ ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನಲೆ ಅದೇ ಬಿಲ್ಡಿಂಗ್ನ ಅಕ್ಕಪಕ್ಕದವರು ಇವತ್ತು ಸಂಬಂಧಿಕರಿಗೆ ಹೇಳಿದ್ದಾರೆ. ಅದರಂತೆ ಕೊಲೆಯಾದಂತಹ ಯುವತಿಯ ತಾಯಿ ಮತ್ತು ಅಕ್ಕ ಮನೆ ಬಳಿ ಬಂದು ಬೀಗ ಹೊಡೆದು ಒಳಹೋದಾಗ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ.
ಈ ಕುರಿತು ಮಾತನಾಡಿದ ಕೇಂದ್ರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್, ‘ಒರ್ವನೇ ಕೊಲೆ ಮಾಡಿದ್ದು, 30ಕ್ಕೂ ಹೆಚ್ಚು ಪೀಸ್ ಮಾಡಿ ಸಿಂಗಲ್ ಡೋರ್ನ 165 ಲೀಟರ್ಸ್ ಫ್ರೀಡ್ಜ್ನಲ್ಲಿ ಬಾಡಿ ಇಡಲಾಗಿದೆ. ಮೃತ ಯುವತಿಯನ್ನು ಛತ್ತೀಸ್ಘಡ್ ಅಥವಾ ಪಶ್ಚಿಮ ಬಂಗಾಳ ಮೂಲದ ಮಹಾಲಕ್ಷ್ಮಿ ಎಂದು ಗುರುತಿಸಲಾಗಿದೆ. ಬೇರೆ ರಾಜ್ಯದವರು ಇಲ್ಲಿಯೇ ಸೆಟಲ್ ಆಗಿದ್ದವರು. ಗಂಡನ ಜೊತೆಗೆ ಬೇರೆಯಾಗಿದ್ದ ಮಹಿಳೆ, ಒಬ್ಬಳೆ ವಾಸವಾಗಿದ್ದಳು ಎಂದಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…