ಬೆಂಗಳೂರು: ಅತಿ ವೇಗವಾಗಿ ಬುಲೆಟ್ ಬೈಕ್ ಚಲಾಯಿಸಿಕೊಂಡು ಬಂದ ಸವಾರ ಯುವತಿಯನ್ನ ಬಲಿ ಪಡೆದಿದ್ದಾನೆ.
ರಾಜ್‌ಕುಮಾರ್ ರಸ್ತೆಯ ಹೆಚ್‌ಡಿಎಫ್‌ಸಿ ಬ್ಯಾಂಕ್ ಬಳಿ ನಿನ್ನೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಊಟಕ್ಕೆ ತೆರಳುತ್ತಿದ್ದ 27 ವರ್ಷದ ಯುವತಿ ಯೋಗೇಶ್ವರಿ ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಇದನ್ನೂ ಓದಿ:
ಲಗ್ಗೆರೆ ಬಳಿಯ ಕೆಂಪೇಗೌಡ ಲೇಔಟ್ ನಿವಾಸಿಯಾಗಿದ್ದ ಯೋಗೇಶ್ವರಿ, ನಿನ್ನೆ ಮಧ್ಯಾಹ್ನ ತಮ್ಮ ಕೆಲಸದ ಸ್ಥಳದ ಸಮೀಪ ಊಟಕ್ಕೆಂದು ರಸ್ತೆ ದಾಟುತ್ತಿದ್ದರು. ಈ ಸಂದರ್ಭದಲ್ಲಿ ಅತಿ ವೇಗವಾಗಿ ಬಂದ ಬೈಕ್ ಸವಾರ ಯೋಗೇಶ್ವರಿಗೆ ಡಿಕ್ಕಿ ಹೊಡೆದಿದ್ದಾನೆ. ಅಪಘಾತದ ರಭಸಕ್ಕೆ ರಸ್ತೆಗೆ ಬಿದ್ದ ಯೋಗೇಶ್ವರಿ ತೀವ್ರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಸುಗುಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದರು.
ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ರಾಜಾಜಿನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಬೈಕ್ ಸವಾರನ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ:
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…