Featured

ಬೆಂಗಳೂರು: ರಸ್ತೆ ದಾಟುವಾಗ ಬುಲೆಟ್ ಬೈಕ್ ಡಿಕ್ಕಿ : ಯುವತಿ ಸಾವು – vishwanews24

ಬೆಂಗಳೂರು: ಅತಿ ವೇಗವಾಗಿ ಬುಲೆಟ್ ಬೈಕ್ ಚಲಾಯಿಸಿಕೊಂಡು ಬಂದ ಸವಾರ ಯುವತಿಯನ್ನ ಬಲಿ ಪಡೆದಿದ್ದಾನೆ.

ರಾಜ್‌ಕುಮಾರ್ ರಸ್ತೆಯ ಹೆಚ್‌ಡಿಎಫ್‌ಸಿ ಬ್ಯಾಂಕ್ ಬಳಿ ನಿನ್ನೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಊಟಕ್ಕೆ ತೆರಳುತ್ತಿದ್ದ 27 ವರ್ಷದ ಯುವತಿ ಯೋಗೇಶ್ವರಿ ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ: 

ಲಗ್ಗೆರೆ ಬಳಿಯ ಕೆಂಪೇಗೌಡ ಲೇಔಟ್ ನಿವಾಸಿಯಾಗಿದ್ದ ಯೋಗೇಶ್ವರಿ, ನಿನ್ನೆ ಮಧ್ಯಾಹ್ನ ತಮ್ಮ ಕೆಲಸದ ಸ್ಥಳದ ಸಮೀಪ ಊಟಕ್ಕೆಂದು ರಸ್ತೆ ದಾಟುತ್ತಿದ್ದರು. ಈ ಸಂದರ್ಭದಲ್ಲಿ ಅತಿ ವೇಗವಾಗಿ ಬಂದ ಬೈಕ್ ಸವಾರ ಯೋಗೇಶ್ವರಿಗೆ ಡಿಕ್ಕಿ ಹೊಡೆದಿದ್ದಾನೆ. ಅಪಘಾತದ ರಭಸಕ್ಕೆ ರಸ್ತೆಗೆ ಬಿದ್ದ ಯೋಗೇಶ್ವರಿ ತೀವ್ರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಸುಗುಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದರು.

ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ರಾಜಾಜಿನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಬೈಕ್ ಸವಾರನ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago