ಬೆಂಗಳೂರು: ರಿಂಗ್ ರಸ್ತೆಗೆ ಪುನೀತ್ ರಾಜ್ ಕುಮಾರ್ ಹೆಸರು : ಫೆ.7ಕ್ಕೆ ಸಿಎಂ ಬೊಮ್ಮಾಯಿ ಉದ್ಘಾಟನೆ – Vishwanews24
ಬೆಂಗಳೂರಿನ ರಿಂಗ್ ರಸ್ತೆಗೆ ಪುನೀತ್ ಹೆಸರು ನಾಮಕರಣ : ಫೆ.7ಕ್ಕೆ ಸಿಎಂ ಬೊಮ್ಮಾಯಿ ಉದ್ಘಾಟನೆ
ಬೆಂಗಳೂರು : ಸಿಲಿಕಾನ್ ಸಿಟಿಯ ರಿಂಗ್ ರಸ್ತೆಗೆ ಪುನೀತ್ ರಾಜ್ ಕುಮಾರ್ ಹೆಸರು ಇಡಲು ಪ್ರಸ್ತಾವನೆಗೆ ಒಪ್ಪಿಗೆ ಸಿಕ್ಕಿದ್ದು,ಫೆ .7ಕ್ಕೆ ಸಿಎಂ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ ಎಂದು ಕಂದಾಯ ಸಚಿವ ಆರ್. ಆಶೋಕ್ ಮಾಹಿತಿ ನೀಡಿದ್ದಾರೆ.
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿಧನ ಬಳಿ ಅವರ ನೆನಪಿಗಾಗಿ ರಾಜ್ಯದ ಹಲವು ರಸ್ತೆ, ವೃತ್ತ, ಪಾರ್ಕ್ಗೆ ಅಪ್ಪು ಅವರ ಹೆಸರನ್ನು ಇಡಲಾಗುತ್ತಿದೆ. ಮೈಸೂರು ರಸ್ತೆಯಿಂದ ಬನ್ನೇರುಘಟ್ಟವರೆಗಿನ ರಸ್ತೆಗೆ ಪುನೀತ್ ಹೆಸರು ಇಡುವ ಪ್ರಸ್ತಾವನೆಗೆ ಒಪ್ಪಿಗೆ ಸಿಕ್ಕಿತ್ತು. ಫೆಬ್ರವರಿ 7ರಂದು ಸಂಜೆ 6 ಗಂಟೆಗೆ ಪದ್ಮನಾಭನಗರದಲ್ಲಿ ಉದ್ಘಾಟನಾ ಸಮಾರಂಭವನ್ನು ಸಿಎಂ ಬಸವರಾಜ ಬೊಮ್ಮಾಯಿ ನಡೆಯಲಿದೆ ಎಂದು ಕಂದಾಯ ಇಲಾಖೆ ಸಚಿವ ಆರ್. ಅಶೋಕ್ ಮಾಹಿತಿ ನೀಡಿದ್ದಾರೆ. ಈ. ಕಾರ್ಯಕ್ರಮದಲ್ಲಿ ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಸೇರಿ ಅನೇಕರು ಭಾಗಿ ಆಗುತ್ತಿದ್ದಾರೆ. ಪುನೀತ್ ಪತ್ನಿ ಅಶ್ವಿನಿಯವರು ಕೂಡ ಪಾಲ್ಗೊಳ್ಳುತ್ತಾರೆ’ ಎಂದು ಆರ್.ಅಶೋಕ್ ಹೇಳಿದ್ದಾರೆ.
