Featured

ಬೆಂಗಳೂರು : ರಿಯಲ್ ಎಸ್ಟೇಟ್ ಉದ್ಯಮಿ ಕೊಲೆ ಪ್ರಕರಣ: ಬಟ್ಟೆ ವ್ಯಾಪಾರಿ ಬಂಧನ – Vishwanews24

ಬೆಂಗಳೂರು : ರಿಯಲ್ ಎಸ್ಟೇಟ್ ಉದ್ಯಮಿ ಕೊಲೆ ಪ್ರಕರಣ: ಬಟ್ಟೆ ವ್ಯಾಪಾರಿ ಬಂಧನ

ಬೆಂಗಳೂರು: ಪತ್ನಿಯನ್ನು ತನ್ನೊಂದಿಗೆ ಒಂದು ರಾತ್ರಿ ಕಳುಹಿಸಿಕೊಂಡು ಎಂದ ರಿಯಲ್‌ ಎಸ್ಟೇಟ್‌ ಉದ್ಯಮಿಯನ್ನು ಕಾರಿನಲ್ಲಿ 14 ಬಾರಿ ಇರಿದು ಕೊಲೆಗೈದಿದ್ದ ಬಟ್ಟೆ ವ್ಯಾಪಾ­ರಿಯನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ.

ದಾಸರಹಳ್ಳಿ ಮರಿ­ಯಣ್ಣಪಾಳ್ಯ ನಿವಾಸಿ ಸಂತೋಷ್‌ ಕುಮಾರ್‌(39) ಬಂಧಿತ ಆರೋಪಿ. ಮಾ.12ರಂದು ಈತ ಮಾರುತಿನಗರ ನಿವಾಸಿ ಕೃಷ್ಣಯಾದವ್‌(55) ಎಂಬಾತನನ್ನು ಕೊಲೆಗೈದು, ಮೃತದೇಹವನ್ನು ಕಾರಿನಲ್ಲಿ ಇರಿಸಿ ಪರಾರಿಯಾಗಿದ್ದ. ಬಟ್ಟೆ ಅಂಗಡಿಗೆ ಲಕ್ಷಾಂತರ ರೂ. ಹೂಡಿಕೆ ಮಾಡಲು ಪತ್ನಿಯನ್ನು ಒಂದು ರಾತ್ರಿ ತನ್ನೊಂದಿಗೆ ಕಳುಹಿಸುವಂತೆ ಕೇಳಿದಕ್ಕೆ ಆರೋಪಿ ಉದ್ಯಮಿಯನ್ನು ಕೊಲೆಗೈದಿದ್ದಾನೆ ಎಂದು ಪೊಲೀಸರು ಹೇಳಿದರು.

ಆಂಧ್ರಪ್ರದೇಶ ಮೂಲದ ಕೃಷ್ಣಯಾದವ್‌ ನಗರದಲ್ಲಿ ರಿಯಲ್‌ ಎಸ್ಟೇಟ್‌ ವ್ಯವಹಾರ ಮಾಡಿಕೊಂಡಿದ್ದ. ಈತನ ಸ್ನೇಹಿತ ತಮಿಳುನಾಡು ಮೂಲದ ಸಂತೋಷ್‌ ಮೊಬೈಲ್‌ ಅಂಗಡಿ ಮುಂಭಾಗದ ಫ‌ುಟ್‌ಪಾತ್‌ನಲ್ಲಿ ಬಟ್ಟೆ ವ್ಯಾಪಾರ ಮಾಡಿಕೊಂಡಿದ್ದ. ಒಂದೆರಡು ಬಾರಿ ಆರೋಪಿಯ ಅಂಗಡಿಯಲ್ಲಿ ಬಟ್ಟೆ ಖರೀದಿಸಿದ್ದ ಕೃಷ್ಣಯಾದವ್‌, “ಉತ್ತಮ ಗುಣಮಟ್ಟದ ಬಟ್ಟೆ ಮಾರಾಟ ಮಾಡುತ್ತಿಯಾ, ಹೊಸ ಬಟ್ಟೆ ಅಂಗಡಿಗೆ ನಾನು ಹಣ ಹೂಡಿಕೆ ಮಾಡುತ್ತೇನೆ” ಎಂದು ಭರವಸೆ ನೀಡಿದ್ದ. ಆದರೆ, ನಾಲ್ಕೈದು ತಿಂಗಳಾದರೂ ಹಣ ಹೂಡಿಕೆ ಮಾಡಿರಲಿಲ್ಲ.

14 ಬಾರಿ ಇರಿತಕ್ಕೊಳಗಾದ ಉದ್ಯಮಿ: ಈ ಮಧ್ಯೆ ಉದ್ಯಮಿ ಕೃಷ್ಣಯಾದವ್‌ಗೆ ಹೆಣ್ಣಿನ ಮೇಲೆ ಹೆಚ್ಚಿನ ವ್ಯಾಮೋಹ ಇತ್ತು ಎಂದು ಹೇಳಲಾಗಿದೆ. ಮಾ.11ರಂದು ಆರೋಪಿ ಸಂತೋಷ್‌ ಜತೆ ಕಾರಿನಲ್ಲಿ ಯಲಹಂಕದ ಬಾರ್‌ನಲ್ಲಿ ಮದ್ಯ ಸೇವಿಸಿ ವಿವಿಧೆಡೆ ಸುತ್ತಾಡಿದ್ದ ಕೃಷ್ಣಯಾದವ್‌ಗೆ ಆರೋಪಿ ಸಂತೋಷ್‌ ಕುಮಾರ್‌, ತನ್ನ ಮೊಬೈಲ್‌ನಲ್ಲಿದ್ದ 2ನೇ ಪತ್ನಿಯ ಫೋಟೋವನ್ನು ತೋರಿಸಿದ್ದಾನೆ. ಅದರಿಂದ ವ್ಯಾಮೋಹಕ್ಕೊಳಗಾದ ಕೃಷ್ಣಯಾದವ್‌, “ಬಟ್ಟೆ ಅಂಗಡಿಗೆ ಒಂದೆರಡು ದಿನದಲ್ಲೇ ಲಕ್ಷಾಂತರ ರೂ. ಹೂಡಿಕೆ ಮಾಡುತ್ತೇನೆ. ಇಂದು ರಾತ್ರಿ ನಿನ್ನ ಪತ್ನಿಯನ್ನು ನನ್ನೊಂದಿಗೆ ಕಳುಹಿಸು’ ಎಂದು ಕೇಳಿದ್ದಾನೆ. ಅದರಿಂದ ಕೋಪಗೊಂಡು ಆರೋಪಿ, ಉದ್ಯಮಿ ಕೃಷ್ಣಯಾದವ್‌ ಜತೆ ಜಗಳ ಆರಂಭಿಸಿದ್ದಾನೆ. ಅದು ವಿಕೋಪಕ್ಕೆ ಹೋದಾಗ ಆರೋಪಿ ಕಾರಿನಲ್ಲಿದ್ದ ಚಾಕುವಿನಿಂದ ಕೃಷ್ಣಯಾದವ್‌ನ ದೇಹದ ವಿವಿಧೆಡೆ 14 ಬಾರಿ ಇರಿದು ಪರಾರಿಯಾಗಿದ್ದ. ಇತ್ತ ಕೃಷ್ಣಯಾದವ್‌ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದ. ಬಳಿಕ ಪ್ರಕರಣ ದಾಖಲಿಸಿಕೊಂಡು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಏನಿದು ಪ್ರಕರಣ? :
ಆರೋಪಿ ಸಂತೋಷ್‌ ಜತೆ ಉದ್ಯಮಿ ಕೃಷ್ಣಯಾದವ್‌ ಸೋಮವಾರ ಸಂಜೆ ತನ್ನ ಸ್ವಿಫ್ಟ್‌ ಕಾರಿನಲ್ಲಿ ಹೊರಗಡೆ ಹೋಗಿದ್ದಾನೆ. ರಾತ್ರಿಯಾದರೂ ಮನೆಗೆ ವಾಪಸ್‌ ಬಂದಿರಲಿಲ್ಲ. ಈ ಸಂಬಂಧ ಕುಟುಂಬ ಸದಸ್ಯರು ಠಾಣೆಗೆ ದೂರು ನೀಡಿದ್ದರು. ಮಂಗಳವಾರ ಬೆಳಗ್ಗೆ ಬಾಗಲೂರು ಕ್ರಾಸ್‌ನ ಪಾದಚಾರಿ ಮಾರ್ಗದಲ್ಲಿ ಅನುಮಾನ­ ಸ್ಪದ ರೀತಿ ಯಲ್ಲಿ ಕಾರಿನಲ್ಲಿ ಕೃಷ್ಣ ಯಾದವ್‌ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಯಲಹಂಕ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago