ಬೆಂಗಳೂರು : ಕಾರಿನಲ್ಲಿ ರಿಯಲ್ ಎಸ್ಟೆಟ್ ಉದ್ಯಮಿಯ ಶವ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಬೆಂಗಳೂರಿನ ಬಾಗಲೂರು ಕ್ರಾಸ್ ಬಳಿ ರಿಯಲ್‌ಎಸ್ಟೇಟ್ ಉದ್ಯಮಿ ಕೃಷ್ಣ ಯಾದವ್ ಎಂಬುವವರ ಶವಪತ್ತೆಯಾಗಿದೆ.
ಶವದ ಮೇಲೆ ಗಾಯದ ಗುರುತುಗಳಿದ್ದು ದುಷ್ಕರ್ಮಿಗಳು ಕೊಲೆ ಮಾಡಿ ಬಳಿಕ ಕಾರಿನಲ್ಲಿ ಶವ ಇಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ. ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉದ್ಯಮಿ ಕೃಷ್ಣ ಯಾದವ್ ನಿನ್ನೆ ರಾತ್ರಿಯಿಂದ ಕಾಣೆಯಾಗಿದ್ದರು. ಕೆಲಸಕ್ಕೆಂದು ಹೊರ ಹೋಗಿದ್ದವರು ರಾತ್ರಿ ಕಳೆದರೂ ಮನೆಗೆ ಹಿಂತಿರುಗಿರಲಿಲ್ಲ. ಇಂದು ಬೆಳಗ್ಗೆ ತನ್ನದೆ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮಾರುತಿ ಶಿಫ್ಟ್ ಕಾರು ರಕ್ತ ಸಿಕ್ತವಾಗಿದೆ. ಹಂತಕರು ಕೊಲೆ ಮಾಡಿ ಬಾಗಲೂರು ಕ್ರಾಸ್ ಬಸ್ ನಿಲ್ದಾಣದ ಬಳಿ ಕಾರು ಬಿಟ್ಟು ಹೋಗಿದ್ದಾರೆ. ಸದ್ಯ ಪೊಲೀಸರು ಹಂತಕರ ತೀವ್ರ ಶೋಧ ಆರಂಭಿಸಿದ್ದಾರೆ.
ಶವದ ಮೇಲೆ ಗಾಯದ ಗುರುತುಗಳು ಪತ್ತೆಯಾಗಿದ್ದು, ಕಾರಲ್ಲಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳದ ಸುತ್ತಮುತ್ತ ಇರುವ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದು, ಹಂತಕರಿಗಾಗಿ ಹುಡಕಾಟ ನಡೆಸುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…