Featured

ಬೆಂಗಳೂರು : ರಿಯಲ್‌ ಎಸ್ಟೇಟ್‌ ಉದ್ಯಮಿ ಕೊಲೆ; ಕಾರಲ್ಲಿ ಶವ ಪತ್ತೆ – Vishwanews24

ಬೆಂಗಳೂರು : ರಿಯಲ್‌ ಎಸ್ಟೇಟ್‌ ಉದ್ಯಮಿ ಕೊಲೆ; ಕಾರಲ್ಲಿ ಶವ ಪತ್ತೆ

ಬೆಂಗಳೂರು : ಕಾರಿನಲ್ಲಿ ರಿಯಲ್ ಎಸ್ಟೆಟ್ ಉದ್ಯಮಿಯ ಶವ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಬೆಂಗಳೂರಿನ ಬಾಗಲೂರು ಕ್ರಾಸ್​​ ಬಳಿ ರಿಯಲ್‌ಎಸ್ಟೇಟ್ ಉದ್ಯಮಿ ಕೃಷ್ಣ ಯಾದವ್ ಎಂಬುವವರ ಶವಪತ್ತೆಯಾಗಿದೆ.

ಶವದ ಮೇಲೆ ಗಾಯದ ಗುರುತುಗಳಿದ್ದು ದುಷ್ಕರ್ಮಿಗಳು ಕೊಲೆ ಮಾಡಿ ಬಳಿಕ ಕಾರಿನಲ್ಲಿ ಶವ ಇಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ. ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಉದ್ಯಮಿ ಕೃಷ್ಣ ಯಾದವ್ ನಿನ್ನೆ ರಾತ್ರಿಯಿಂದ ಕಾಣೆಯಾಗಿದ್ದರು. ಕೆಲಸಕ್ಕೆಂದು ಹೊರ ಹೋಗಿದ್ದವರು ರಾತ್ರಿ ಕಳೆದರೂ ಮನೆಗೆ ಹಿಂತಿರುಗಿರಲಿಲ್ಲ. ಇಂದು ಬೆಳಗ್ಗೆ ತನ್ನದೆ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮಾರುತಿ ಶಿಫ್ಟ್​ ಕಾರು ರಕ್ತ ಸಿಕ್ತವಾಗಿದೆ. ಹಂತಕರು ಕೊಲೆ ಮಾಡಿ ಬಾಗಲೂರು ಕ್ರಾಸ್ ಬಸ್ ನಿಲ್ದಾಣದ‌ ಬಳಿ ಕಾರು ಬಿಟ್ಟು ಹೋಗಿದ್ದಾರೆ. ಸದ್ಯ ಪೊಲೀಸರು ಹಂತಕರ ತೀವ್ರ ಶೋಧ ಆರಂಭಿಸಿದ್ದಾರೆ.

ಶವದ ಮೇಲೆ ಗಾಯದ ಗುರುತುಗಳು ಪತ್ತೆಯಾಗಿದ್ದು, ಕಾರಲ್ಲಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ‌ ನಡೆಸುತ್ತಿದ್ದಾರೆ. ಘಟನಾ ಸ್ಥಳದ ಸುತ್ತಮುತ್ತ ಇರುವ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದು, ಹಂತಕರಿಗಾಗಿ ಹುಡಕಾಟ ನಡೆಸುತ್ತಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

21 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

22 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

24 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

24 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago