ಬೆಂಗಳೂರು: ಐಟಿ ಸಿಟಿ ಬೆಂಗಳೂರಿನಲ್ಲಿ ವಾರಾಂತ್ಯ ನಡೆದ ರೇವ್ ಪಾರ್ಟಿ ಮೇಲೆ ನಗರ ಅಪರಾಧ ದಳ ವಿಭಾಗ ಪೊಲೀಸರು ದಾಳಿ ನಡೆಸಿದ್ದಾರೆ. ಎಕ್ಟ್ರಾನಿಕ್ ಸಿಟಿ ಬಳಿಯ ಜಿ ಆರ್.ಫಾರ್ಮ್ಹೌಸ್ನಲ್ಲಿ ನಡೆಯುತ್ತಿದ್ದ ರೇವ್ಪಾರ್ಟಿ ಮೇಲೆ ಸಿಸಿಬಿ ತಂಡ ನಸುಕಿನ ಜಾವ 3 ಗಂಟೆ ಸುಮಾರಿಗೆ ದಾಳಿ ನಡೆಸಿದ್ದು, ದಾಳಿ ವೇಳೆ ಪಾರ್ಟಿಯಲ್ಲಿ ಡ್ರಗ್ಸ್ ಪತ್ತೆಯಾಗಿದೆ. ಪಾರ್ಟಿಯಲ್ಲಿ ಕೆಲ ಮಾಡೆಲ್ ಗಳು, ಟೆಕ್ಕಿಗಳು, ತೆಲುಗು ನಟಿಯರು ಭಾಗಿಯಾಗಿದ್ದರು ಎಂದು ಗೊತ್ತಾಗಿದೆ.
ಕಾನ್ ಕಾರ್ಡ್ ಗೋಪಾಲ ರೆಡ್ಡಿ ಎಂಬುವವರ ಮಾಲಿಕತ್ವದ ಜಿ ಆರ್.ಫಾರ್ಮ್ಹೌಸ್ನಲ್ಲಿ ಹೈದರಾಬಾದ್ ಮೂಲದ ವಾಸು ಎಂಬಾತ ಪಾರ್ಟಿ ಆಯೋಜನೆ ಮಾಡಿದ್ದ. ಬರ್ತಡೇ ಪಾರ್ಟಿ ಹೆಸರಿನಲ್ಲಿ ನಡೆಯುತ್ತಿದ್ದ ಈ ಪಾರ್ಟಿ ತಡರಾತ್ರಿ 2 ಗಂಟೆಯಾದ್ರೂ ಮುಗಿದಿರಲಿಲ್ಲ. ಅವಧಿ ಮೀರಿ ಪಾರ್ಟಿ ಮಾಡಲಾಗುತ್ತಿರುವ ಸುದ್ದಿ ತಿಳಿದ ಸಿಸಿಬಿಯ ಆಂಟಿ ನಾರ್ಕೊಟಿಕ್ಸ್ ವಿಭಾಗದ ಅಧಿಕಾರಿಗಳು ದಾಳಿ ನಡೆಸಿದಾಗ ಪಾರ್ಟಿಯಲ್ಲಿ ಡ್ರಗ್ಸ್ ಪತ್ತೆಯಾಗಿದೆ.
ದಾಳಿ ವೇಳೆ 17 ಎಂಡಿಎಂಎ ಮಾತ್ರೆ, ಕೊಕೇನ್ ಪತ್ತೆಯಾಗಿದೆ. ಆಂಧ್ರ, ಬೆಂಗಳೂರು ಮೂಲದ 100ಕ್ಕೂ ಹೆಚ್ಚು ಜನ ಮತ್ತು 25ಕ್ಕೂ ಹೆಚ್ಚು ಯುವತಿಯರು ಪಾರ್ಟಿಯಲ್ಲಿ ಭಾಗಿಯಾಗಿದ್ದು ತಿಳಿದುಬಂದಿದೆ.
ಬೆಂಜ್ ಕಾರಿನಲ್ಲಿ ಆಂಧ್ರ ಶಾಸಕನ ಪಾಸ್ ಪತ್ತೆಯಾಗಿದೆ. ಎಂಎಲ್ಎ ಕಾಕನಿ ಗೋವರ್ಧನರೆಡ್ಡಿ ಹೆಸರಿನ ಪಾಸ್ ಸಿಕ್ಕಿದೆ. ಜೊತೆಗೆ ದಾಳಿ ನಡೆದ ಫಾರ್ಮ್ಹೌಸ್ ಬಳಿ ಮರ್ಸಿಡಿಸ್-ಬೆನ್ಜ್, ಜಾಗ್ವಾರ್, ಆಡಿ ಕಾರ್ ಸೇರಿದಂತೆ 15ಕ್ಕೂ ಹೆಚ್ಚು ಐಷಾರಾಮಿ ಕಾರುಗಳು ಪತ್ತೆಯಾಗಿವೆ. ಪಾರ್ಟಿಯಲ್ಲಿ ಮಾಡೆಲ್ಗಳು, ಟೆಕ್ಕಿಗಳು ತೆಲುಗು ನಟಿಯರು ಸೇರಿದಂತೆ ಅನೇಕರು ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ.
ಪೊಲೀಸರು ಪಾರ್ಟಿಯಲ್ಲಿ ಭಾಗಿಯಾದವರ ಗುರುತು ಪತ್ತೆ ಮಾಡುತ್ತಿದ್ದಾರೆ. ಎಲೆಕ್ಟ್ರಾನಿಕ್ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…