Featured

ಬೆಂಗಳೂರು: ರೇವ್ ಪಾರ್ಟಿ ಮೇಲೆ ಪೊಲೀಸ್‌ ದಾಳಿ , ತೆಲುಗು ನಟ, ನಟಿಯರು, ಮಾಡೆಲ್ ಗಳು ಭಾಗಿ -vishwanews24

ಬೆಂಗಳೂರು: ತಡರಾತ್ರಿವರೆಗೆ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಪೊಲೀಸ್‌ ದಾಳಿ , ತೆಲುಗು ನಟ, ನಟಿಯರು, ಮಾಡೆಲ್ ಗಳು ಭಾಗಿ

ಬೆಂಗಳೂರು: ಐಟಿ ಸಿಟಿ ಬೆಂಗಳೂರಿನಲ್ಲಿ ವಾರಾಂತ್ಯ ನಡೆದ ರೇವ್ ಪಾರ್ಟಿ ಮೇಲೆ ನಗರ ಅಪರಾಧ ದಳ ವಿಭಾಗ ಪೊಲೀಸರು ದಾಳಿ ನಡೆಸಿದ್ದಾರೆ. ಎಕ್ಟ್ರಾನಿಕ್ ಸಿಟಿ ಬಳಿಯ ಜಿ ಆರ್.ಫಾರ್ಮ್​​​ಹೌಸ್​​ನಲ್ಲಿ ನಡೆಯುತ್ತಿದ್ದ ರೇವ್​​ಪಾರ್ಟಿ ಮೇಲೆ ಸಿಸಿಬಿ ತಂಡ ನಸುಕಿನ ಜಾವ 3 ಗಂಟೆ ಸುಮಾರಿಗೆ ದಾಳಿ ನಡೆಸಿದ್ದು, ದಾಳಿ ವೇಳೆ ಪಾರ್ಟಿಯಲ್ಲಿ ಡ್ರಗ್ಸ್ ಪತ್ತೆಯಾಗಿದೆ. ಪಾರ್ಟಿಯಲ್ಲಿ ಕೆಲ ಮಾಡೆಲ್ ಗಳು, ಟೆಕ್ಕಿಗಳು, ತೆಲುಗು ನಟಿಯರು ಭಾಗಿಯಾಗಿದ್ದರು ಎಂದು ಗೊತ್ತಾಗಿದೆ.

ಕಾನ್ ಕಾರ್ಡ್ ಗೋಪಾಲ ರೆಡ್ಡಿ ಎಂಬುವವರ ಮಾಲಿಕತ್ವದ ಜಿ ಆರ್.ಫಾರ್ಮ್​​​ಹೌಸ್​​ನಲ್ಲಿ ಹೈದರಾಬಾದ್ ಮೂಲದ ವಾಸು ಎಂಬಾತ ಪಾರ್ಟಿ ಆಯೋಜನೆ ಮಾಡಿದ್ದ. ಬರ್ತಡೇ ಪಾರ್ಟಿ ಹೆಸರಿನಲ್ಲಿ ನಡೆಯುತ್ತಿದ್ದ ಈ ಪಾರ್ಟಿ ತಡರಾತ್ರಿ 2 ಗಂಟೆಯಾದ್ರೂ ಮುಗಿದಿರಲಿಲ್ಲ. ಅವಧಿ ಮೀರಿ ಪಾರ್ಟಿ ಮಾಡಲಾಗುತ್ತಿರುವ ಸುದ್ದಿ ತಿಳಿದ ಸಿಸಿಬಿಯ ಆಂಟಿ ನಾರ್ಕೊಟಿಕ್ಸ್ ವಿಭಾಗದ ಅಧಿಕಾರಿಗಳು ದಾಳಿ ನಡೆಸಿದಾಗ ಪಾರ್ಟಿಯಲ್ಲಿ ಡ್ರಗ್ಸ್ ಪತ್ತೆಯಾಗಿದೆ.

ದಾಳಿ ವೇಳೆ 17 ಎಂಡಿಎಂಎ ಮಾತ್ರೆ, ಕೊಕೇನ್ ಪತ್ತೆಯಾಗಿದೆ. ಆಂಧ್ರ, ಬೆಂಗಳೂರು ಮೂಲದ 100ಕ್ಕೂ ಹೆಚ್ಚು ಜನ ಮತ್ತು 25ಕ್ಕೂ ಹೆಚ್ಚು ಯುವತಿಯರು ಪಾರ್ಟಿಯಲ್ಲಿ ಭಾಗಿಯಾಗಿದ್ದು ತಿಳಿದುಬಂದಿದೆ.

ಬೆಂಜ್ ಕಾರಿನಲ್ಲಿ ಆಂಧ್ರ ಶಾಸಕನ ಪಾಸ್ ಪತ್ತೆಯಾಗಿದೆ. ಎಂಎಲ್​ಎ ಕಾಕನಿ ಗೋವರ್ಧನರೆಡ್ಡಿ ಹೆಸರಿನ ಪಾಸ್ ಸಿಕ್ಕಿದೆ. ಜೊತೆಗೆ ದಾಳಿ ನಡೆದ ಫಾರ್ಮ್​​​ಹೌಸ್ ಬಳಿ ಮರ್ಸಿಡಿಸ್-ಬೆನ್ಜ್, ಜಾಗ್ವಾರ್, ಆಡಿ ಕಾರ್ ಸೇರಿದಂತೆ 15ಕ್ಕೂ ಹೆಚ್ಚು ಐಷಾರಾಮಿ ಕಾರುಗಳು ಪತ್ತೆಯಾಗಿವೆ. ಪಾರ್ಟಿಯಲ್ಲಿ ಮಾಡೆಲ್​​ಗಳು, ಟೆಕ್ಕಿಗಳು ತೆಲುಗು ನಟಿಯರು ಸೇರಿದಂತೆ ಅನೇಕರು ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ.

ಪೊಲೀಸರು ಪಾರ್ಟಿಯಲ್ಲಿ ಭಾಗಿಯಾದವರ ಗುರುತು ಪತ್ತೆ ಮಾಡುತ್ತಿದ್ದಾರೆ. ಎಲೆಕ್ಟ್ರಾನಿಕ್​​ಸಿಟಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿಸಿದ್ದಾರೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

59 minutes ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

1 hour ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

1 hour ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

2 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

4 hours ago