Featured

ಬೆಂಗಳೂರು: ಲೇಡಿ ಡಾಕ್ಟರ್ ವೇಷದಲ್ಲಿ ಆಸ್ಪತ್ರೆಯಲ್ಲಿ ಕಳ್ಳತನ : ರೋಗಿಗಳ ಚಿನ್ನಾಭರಣ ಕದ್ದು ಪರಾರಿ- Vishwanews24

ಬೆಂಗಳೂರು: ವೈದ್ಯರ ವೇಷ ಧರಿಸಿ ಚಿಕಿತ್ಸೆ ಕೊಡುವುದಾಗಿ ಹೇಳಿ ರೋಗಿಗಳ ಚಿನ್ನಾಭರಣ ಕದ್ದು ಪರಾರಿಯಾದ ಮಹಿಳೆ- Vishwanews24

ಬೆಂಗಳೂರು: ಲೇಡಿ ಡಾಕ್ಟರ್ ವೇಷದಲ್ಲಿ ನಗರದ ಪ್ರತಿಷ್ಠಿತ ಆಸ್ಪತ್ರೆಗೆ ನುಗ್ಗಿದ ಮಹಿಳೆಯೊಬ್ಬಳು ರೋಗಿಗಳ ಬಳಿ ಚಿನ್ನಾಭರಣ ಕಳವು ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಇಲ್ಲಿನ ಅಶೋಕ ನಗರ ಪೊಲೀಸ್ ಠಾಣಾ  ವ್ಯಾಪ್ತಿಯಲ್ಲಿರುವ ಸೇಂಟ್ ಫಿಲೋಮಿನಾ ಆಸ್ಪತ್ರೆಯಲ್ಲಿ  ಘಟನೆ ನಡೆದಿದೆ.

ಇದೇ ಜನವರಿ 11 ರಂದು ಉಸಿರಾಟ ಸಮಸ್ಯೆಯಿಂದ ಸರಸಮ್ಮ ಎಂಬ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದರು. ಅಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಡಾಕ್ಟರ್ ಡ್ರೆಸ್ ಹಾಕಿಕೊಂಡು ವಾರ್ಡ್ ಒಳಗೆ ಬಂದ ಖತರ್ನಾಕ್ ಲೇಡಿ, ರೋಗಿಗೆ ಚಿಕಿತ್ಸೆ ನೀಡಬೇಕೆಂದು ಎಲ್ಲರಿಗೂ ಹೊರಗೆ ಹೋಗುವಂತೆ ಸೂಚಿಸಿದ್ದಾಳೆ. ಕೆಲ ಹೊತ್ತಿನ ನಂತರ ಆಕೆಯೂ ಹೊರಗೆ ಹೋಗಿದ್ದಾಳೆ.

ಇದೇ ಸಮಯಕ್ಕೆ ಒಳಗೆ ಬಂದ ಶುಶ್ರೂಷಕಿ ಆ ಡಾಕ್ಟರ್ ಯಾರು? ಅಂತಾ ಪ್ರಶ್ನೆ ಮಾಡಿದ್ದಾರೆ. ಕೊನೆಗೆ ಡಾಕ್ಟರ್ ಯಾರು ಬಂದಿಲ್ಲ ಎಂದು ತಿಳಿದು, ಆಕೆ ನಕಲಿ ಡಾಕ್ಟರ್ ಅನ್ನೋದು ಗೊತ್ತಾಗಿದೆ. ಅನುಮಾನಗೊಂಡು ಸರಸಮ್ಮರನ್ನ ಚೆಕ್ ಮಾಡಿದ ವೇಳೆ ಎರಡು ಉಂಗುರ, ಕತ್ತಿನಲ್ಲಿದ್ದ ಸರ ಸೇರಿ 41 ಗ್ರಾಂ ಚಿನ್ನಾಭರಣ ಕಳವು ಮಾಡಿರೋದು ಗೊತ್ತಾಗಿದೆ.

ನಂತರ ಪೊಲೀಸರಿಗೆ ಮಾಹಿತಿ ನೀಡಿ, ವಿಚಾರಣೆ ನಡೆಸಿದಾಗ ಆ ನಕಲಿ ಲೇಡಿ ಡಾಕ್ಟರ್ ಅಕ್ಕಪಕ್ಕದ ವಾರ್ಡ್ಗಳಲ್ಲೂ ಇದೇ ರೀತಿ ಕೃತ್ಯವೆಸಗಿರೋದು ಬೆಳಕಿಗೆ ಬಂದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಅಶೋಕ ನಗರ ಪೊಲೀಸರು, ನಕಲಿ ಡಾಕ್ಟರ್ ಗಾಗಿ ಹುಡುಕಾಟ ನಡೆಸಿದ್ದಾರೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

20 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

20 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

21 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

21 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

22 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

22 hours ago