ಬೆಂಗಳೂರು: ಇಲ್ಲಿನ ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ದಾರುಣ ಘಟನೆಯೊಂದು ನಡೆದಿದೆ. ವಂದೇ ಭಾರತ್ ಹೈಸ್ಪೀಡ್ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮೇಲ್ನೋಟಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.
ಕೇರಳ ಮೂಲದ ಸ್ಟೆರ್ಲಿನ್ ಎಲಿಜ ಶಾಜಿ (19), ಜಸ್ಟಿನ್ ಜೋಸೆಫ್ (20) ಮೃತ ವಿದ್ಯಾರ್ಥಿಗಳು. ಇಬ್ಬರು ವಿದ್ಯಾರ್ಥಿಗಳುಸಪ್ತಗಿರಿ ಕೇಲೇಜಿನಲ್ಲಿ ಪ್ರಥಮ ವರ್ಷದ BSc ನರ್ಸಿಂಗ್ ವ್ಯಾಸಂಗ ಮಾಡ್ತಿದ್ದರು.
ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದ್ರೆ ರೈಲ್ವೆ ಪೊಲೀಸರ ಮಾಹಿತಿ ಪ್ರಕಾರ, ಇಬ್ಬರು ಪಿಜಿಗೆ ಟ್ರ್ಯಾಕ್ ಮೂಲಕ ಹೋಗಲು ಮುಂದಾಗಿದ್ದರು. ಈ ವೇಳೆ ಹೈಸ್ಪೀಡ್ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ UDR (ಅಸಹಜ ಸಾವಿನ ವರದಿ) ಅಡಿಯಲ್ಲಿ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಯುವಕ-ಯುವತಿ ಬಗ್ಗೆ ಮಾಹಿತಿ ಕಲೆಹಾಕಲು ಮುಂದಾಗಿದ್ದಾರೆ. ಮೃತದೇಹಗಳನ್ನ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಇರಿಸಲಾಗಿದೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…