ಬೆಂಗಳೂರು: ವಿದೇಶಗಳಿಂದ ಬಂದ ಪ್ರಯಾಣಿಕರಿಗೆ ಆರ್‌ಟಿಪಿಸಿಆರ್ ಪರೀಕ್ಷೆ ಕಡ್ಡಾಯ  – Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ವಿದೇಶಗಳಿಂದ ಬಂದ ಪ್ರಯಾಣಿಕರಿಗೆ ಆರ್‌ಟಿಪಿಸಿಆರ್ ಪರೀಕ್ಷೆ  ಕಡ್ಡಾಯ  – Vishwanews24

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಏರುತ್ತಲೇ ಇದೆ ಈ ನಿಟ್ಟಿನಲ್ಲಿ ವಿದೇಶಗಳಿಂದ ಬರುವಂತ ಪ್ರತಿಯೊಬ್ಬ
ಪ್ರಯಾಣಿಕರಿಗೂ ಕಡ್ಡಾಯವಾಗಿ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದರು.

ಹೈರಿಸ್ಕ್ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗುತ್ತದೆ. ಆರ್‌ಟಿಪಿಸಿಆರ್ ಪರೀಕ್ಷೆ ಬಳಿಕ ಪಾಸಿಟಿವ್ ಬಂದರೆ ಅವರನ್ನು ಹೋಟೆಲ್‌ಗಳಲ್ಲಿ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗುತ್ತದೆ. ಪ್ರತಿ ಪ್ರಯಾಣಿಕರನ್ನೂ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಅವರು ಮಂಗಳವಾರ ನಡೆದ ಕೋವಿಡ್ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು. ಕ್ವಾರಂಟೈನ್‌ಗೆ ಒಳಪಡುವವರಿಗೆ 2 ಸ್ಟಾರ್ ಅಥವಾ 3 ಸ್ಟಾರ್ ಹೋಟೆಲ್‌ಗಳಲ್ಲಿ ಅವಕಾಶ ಮಾಡಲಾಗುವುದು. ನಗರದಲ್ಲಿ ಹೋಟೆಲ್‌ಗಳನ್ನು ಗುರುತಿಸುವಂತೆ ಈಗಾಗಲೇ ಬಿಬಿಎಂಪಿಗೆ ಸೂಚನೆ ನೀಡಲಾಗಿದೆ. ಹೋಟೆಲ್‌ಗಳ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ ಎಂದು ಸ್ಪಷ್ಟಪಡಿಸಿದರು.

ತಿರುಪತಿ ಟಿಕೆಟ್‌ ಬುಕ್ಕಿಂಗ್‌ ಮಾಡೋ ಮುನ್ನ ಎಚ್ಚರ ! ದರ್ಶನದ ನಕಲಿ ಟಿಕೆಟ್‌ ದುಬಾರಿ ಬೆಲೆಗೆ ಮಾರಾಟ , 7 ಜನರ ಬಂಧನ – Vishwanews24

ವಿದೇಶಿ ಪ್ರಯಾಣಿಕರ ಟ್ರ್ಯಾಕಿಂಗ್-ಟ್ರೇಸಿಂಗ್ ಬಲಪಡಿಸಲು ತೀರ್ಮಾನಿಸಲಾಗಿದೆ. ರಾಜ್ಯಕ್ಕೆ ಬರುವಂತಹ ಎಲ್ಲ ಪ್ರಯಾಣಿಕರ ಮಾಹಿತಿಯೂ ಸರ್ಕಾರದ ಬಳಿ ಲಭ್ಯ ಇರಲಿದೆ ಎಂದು ಹೇಳಿದರು. ಇನ್ನು ವಿಮಾನ ನಿಲ್ದಾಣದಲ್ಲಿ ಅನುಸರಿಸಬಹುದಾದ ಕೋವಿಡ್ ನಿಯಮಗಳ ಕುರಿತು ಪ್ರಶ್ನಿಸಿದಾಗ, ಕೇಂದ್ರ ಸರ್ಕಾರ ಈಗಾಗಲೇ ವಿಮಾನ ನಿಲ್ದಾಣಗಳಿಗೆ ಸಂಬಂಧಿಸಿದಂತೆ ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಸೋಂಕಿನ ಲಕ್ಷಣ ಕಂಡು ಬರುವ ಪ್ರತಿಯೊಬ್ಬರು ತಪ್ಪದೇ ಕೋವಿಡ್‌ ಪರೀಕ್ಷೆ ಮಾಡಿಸುವ ಮೂಲಕ ಜಾಗೃತೆ ವಹಿಸಬೇಕಾಗಿದೆ.

ಕಾಂಗ್ರೆಸ್ ನಡೆಸುತ್ತಿರುವಂತ ಪಾದಯಾತ್ರೆಗೆ ನಮ್ಮ ಬೆಂಬಲ ಇಲ್ಲ : ವಾಟಾಳ್ ನಾಗರಾಜ್ – Vishwanews24

Leave a Reply