Featured

ಬೆಂಗಳೂರು ವಿಮಾನ ನಿಲ್ದಾಣ : ಫೆ. 5ರಿಂದ 14ರವರೆಗೆ ವಿಮಾನ ಸಂಚಾರದಲ್ಲಿ ವ್ಯತ್ಯಯ : ವೇಳಾಪಟ್ಟಿ ಇಲ್ಲಿದೆ – vishwanews24

ಬೆಂಗಳೂರು ವಿಮಾನ ನಿಲ್ದಾಣ : ಫೆ. 5ರಿಂದ 14ರವರೆಗೆ ವಿಮಾನ ನಿಲ್ದಾಣದಲ್ಲಿ ಸಂಚಾರ ಬಂದ್ ..

29 ಗಂಟೆಗಳ ಕಾಲ ವಿಮಾನ ನಿಲ್ದಾಣದಲ್ಲಿ ಟೇಕಾಫ್, ಲ್ಯಾಂಡಿಂಗ್ ಸ್ಥಗಿತ..

ದಿನಾಂಕ ಮತ್ತು ಏರ್​ಪೋರ್ಟ್ ಕಾರ್ಯಾಚರಣೆ ಸ್ಥಗಿತವಾಗಲಿರುವ ಸಮಯದ ಮಾಹಿತಿ ಇಲ್ಲಿದೆ..

ಬೆಂಗಳೂರು: ಯಲಹಂಕದಲ್ಲಿ ನಡೆಯುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ಕಾರಣ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಫೆಬ್ರವರಿ 5ರಿಂದ ಮೊದಲುಗೊಂಡು ಒಟ್ಟು 29 ಗಂಟೆಗಳ ಕಾಲ ವಿಮಾನ ನಿಲ್ದಾಣದಲ್ಲಿ ಟೇಕಾಫ್, ಲ್ಯಾಂಡಿಂಗ್ ಸ್ಥಗಿತಗೊಳ್ಳಲಿದೆ. ಈ ಬಗ್ಗೆ ಬೆಂಗಳೂರು ವಿಮಾನ ನಿಲ್ದಾಣ ಆಡಳಿತ ಮಾಹಿತಿ ನೀಡಿದೆ. ಏರ್ ಶೋ ಕಾರ್ಯಕ್ರಮದ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

ವಿಮಾನ ಪ್ರಯಾಣಿಕರು ಟೇಕಾಫ್, ಲ್ಯಾಂಡಿಂಗ್ ಸ್ಥಗಿತಗೊಳ್ಳಲಿರುವ ಸಮಯವನ್ನು ಗಮನಿಸಿಕೊಂಡು ಪ್ರಯಾಣದ ಯೋಜನೆ ರೂಪಿಸುವಂತೆ ಬೆಂಗಳೂರು ವಿಮಾನ ನಿಲ್ದಾಣ ಆಡಳಿತ ಸಲಹೆ ನೀಡಿದೆ.

ಬೆಂಗಳೂರು ಏರ್​ಪೋರ್ಟ್ ಟ್ವೀಟ್

ವಿಮಾನ ನಿಲ್ದಾಣ ಕಾರ್ಯಾಚರಣೆ ಸ್ಥಗಿತದ ವೇಳಾಪಟ್ಟಿ
ಫೆಬ್ರವರಿ 5ರಿಂದ 15ರ ವರೆಗೆ 10 ದಿನಗಳ ಅವಧಿಯಲ್ಲಿ ವಿವಿಧ ಸಮಯಗಳಲ್ಲಿ ಏರ್​ಪೋರ್ಟ್ ಕಾರ್ಯಾಚರಣೆ ಬಂದ್ ಆಗಿರಲಿದೆ. ದಿನಾಂಕಗಳು ಮತ್ತು ಏರ್​ಪೋರ್ಟ್ ಕಾರ್ಯಾಚರಣೆ ಸ್ಥಗಿತವಾಗಲಿರುವ ಸಮಯದ ಮಾಹಿತಿ ಇಲ್ಲಿದೆ.

ಫೆಬ್ರವರಿ 5: ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 4:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.

ಫೆಬ್ರವರಿ 6: ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 4:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.

ಫೆಬ್ರವರಿ 7: ಬೆಳಿಗ್ಗೆ 09 ರಿಂದ 11 ರವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 4:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.

ಫೆಬ್ರವರಿ 8: ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 4:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.

ಫೆಬ್ರವರಿ 9: ಬೆಳಿಗ್ಗೆ 9 ರಿಂದ 11 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.

ಫೆಬ್ರವರಿ 10: ಬೆಳಿಗ್ಗೆ 9 ರಿಂದ 11:30 ರವರೆಗೆ ಮತ್ತು ಮಧ್ಯಾಹ್ನ 2:30 ರಿಂದ 3:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.

ಫೆಬ್ರವರಿ 11-12: ಮಧ್ಯಾಹ್ನ 12:00 ರಿಂದ 2:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.

ಫೆಬ್ರವರಿ 13-14: ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಮಧ್ಯಾಹ್ನ 2:30 ರಿಂದ ಸಂಜೆ 5:00 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.

ಫೆಬ್ರವರಿ 10 ರಿಂದ 14 ರವರೆಗೆ ಏರೋ ಇಂಡಿಯಾ ಏರ್​ ಶೋ ನಡೆಯಲಿದ್ದು, ಇದು ವಿಶ್ವದ ಅತಿದೊಡ್ಡ ವೈಮಾನಿಕ ಪ್ರದರ್ಶನಗಳಲ್ಲಿ ಒಂದಾಗಿದೆ. ಮಿಲಿಟರಿ ಮತ್ತು ನಾಗರಿಕ ವಿಮಾನಯಾನ ತಜ್ಞರು, ಉದ್ಯಮ ವಲಯದ ಪ್ರಮುಖರು ಮತ್ತು ತಂತ್ರಜ್ಞಾನ ಉತ್ಸಾಹಿಗಳು ಇದರಲ್ಲಿ ಭಾಗವಹಿಸಲಿದ್ದಾರೆ.

Vishwa News 24

Recent Posts

ಏಷ್ಯನ್ ಗೇಮ್ಸ್ ನಲ್ಲಿ ಎರಡನೇ ಚಿನ್ನದ ಪದಕ ಗೆದ್ದುಕೊಂಡ ಭಾರತ – vishwanews24

ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ 2ನೇ ಚಿನ್ನ.. 10 ಮೀಟರ್ ಏರ್ ಪಿಸ್ತೂಲ್‌ ನಲ್ಲಿ ಸ್ವರ್ಣ ಪದಕ ಗೆದ್ದ ಕಮಲ್‌ಜೀತ್–ಸುರುಚಿ…

13 minutes ago

ಗವಿಸಿದ್ದೇಶ್ವರ ಶ್ರೀಗಳಿಂದ ಈ ಬಾರಿಯ ಮೈಸೂರು ದಸರಾ ಉದ್ಘಾಟನೆ : ಸಿಎಂ ಡಿ.ಕೆ.ಶಿವಕುಮಾರ್ – vishwanews24

ಕೊಪ್ಪಳ ಗವಿಮಠದ ಗವಿಸಿದ್ದೇಶ್ವರ ಶ್ರೀಗಳಿಂದ ಈ ಬಾರಿಯ ಮೈಸೂರು ದಸರಾ ಉದ್ಘಾಟನೆ : ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು : "ಈ…

35 minutes ago

ಕೇಂದ್ರ ಸರಕಾರ ರೈತರ ಸಾಲ ಮನ್ನಾ ಮಾಡಿದರೆ, ರಾಜ್ಯದ ಪಾಲು ನೀಡಲು ಸಿದ್ಧ : ಸಿಎಂ  – vishwanews24

ಕೇಂದ್ರ ಸರಕಾರ ರೈತರ ಸಾಲ ಮನ್ನಾ ಮಾಡಿದರೆ, ರಾಜ್ಯದ ಪಾಲು ನೀಡಲು ಸಿದ್ಧ : ಸಿಎಂ  ಬೆಂಗಳೂರು: "ಬರಗಾಲದ ಪರಿಸ್ಥಿತಿಯಲ್ಲಿ…

45 minutes ago

ಉಡುಪಿ: ಪೆಟ್ರೋಲ್ ಪಂಪ್ ಬಳಿ ನಿಂತಿದ್ದ ಬಸ್ಸಿನಲ್ಲಿ ಬೆಂಕಿ ಅವಘಡ ; ತಪ್ಪಿದ ಭಾರೀ ಅನಾಹುತ – vishwanews24

ಉಡುಪಿ: ಪೆಟ್ರೋಲ್ ಪಂಪ್ ಬಳಿ ನಿಂತಿದ್ದ ಬಸ್ಸಿನಲ್ಲಿ ಬೆಂಕಿ ಅವಘಡ ; ತಪ್ಪಿದ ಭಾರೀ ಅನಾಹುತ ಉಡುಪಿ: ಉಡುಪಿ ಸಮೀಪದ…

58 minutes ago

ಸೌಜನ್ಯ ಪ್ರಕರಣದ ಮರುತನಿಖೆಗೆ ಐಜಿಪಿ ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ – vishwanews24

ಸೌಜನ್ಯ ಪ್ರಕರಣದ ಮರುತನಿಖೆಗೆ ಐಜಿಪಿ ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ ಬೆಂಗಳೂರು: ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಬಹುಚರ್ಚಿತ ಧರ್ಮಸ್ಥಳದ…

1 hour ago

ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ: ಕೇಂದ್ರ ಸರ್ಕಾರ ಆದೇಶ – vishwanews24

ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ: ಕೇಂದ್ರ ಸರ್ಕಾರ ಆದೇಶ ಬೆಂಗಳೂರು: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ…

19 hours ago