Featured

ಬೆಂಗಳೂರು: ವೈದ್ಯೆಯ ರೀತಿ ವೇಷ ಧರಿಸಿ ಆಸ್ಪತ್ರೆಯಲ್ಲಿದ್ದ ರೋಗಿಗಳ ಚಿನ್ನಾಭರಣ ಕಳವು ಮಾಡುತ್ತಿದ್ದ  ಖತರ್ನಾಕ್‌ ಕಳ್ಳಿಯ ಬಂಧನ – Vishwanews24

ಬೆಂಗಳೂರು: ವೈದ್ಯೆಯ ರೀತಿ ವೇಷ ಧರಿಸಿ ಆಸ್ಪತ್ರೆಯಲ್ಲಿದ್ದ ರೋಗಿಗಳ ಚಿನ್ನಾಭರಣ ಕಳವು ಮಾಡುತ್ತಿದ್ದ  ಖತರ್ನಾಕ್‌ ಕಳ್ಳಿಯ ಬಂಧನ

ಬೆಂಗಳೂರು: ವೈದ್ಯೆಯ ರೀತಿ ವೇಷ ಧರಿಸಿ ಆಸ್ಪತ್ರೆಯಲ್ಲಿದ್ದ ರೋಗಿಗಳ ಚಿನ್ನಾಭರಣ ಕಳವು ಮಾಡುತ್ತಿದ್ದ ಲಕ್ಷ್ಮಿಯನ್ನು ಬಂಧಿಸಲಾಗಿದೆ.

ಬೆಂಗಳೂರಿನ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಆಸ್ಪತ್ರೆಯಲ್ಲಿ ಘಟನೆ ನಡೆದಿತ್ತು. ಕಳೆದ ಕೆಲ ದಿನಗಳ ಹಿಂದೆ ವೈದ್ಯೆಯ ರೀತಿಯಲ್ಲಿ ಡ್ರೆಸ್ ಮಾಡಿಕೊಂಡು ಆಸ್ಪತ್ರೆ ಎಂಟ್ರಿಯಾಗಿದ್ದ ಕಳ್ಳಿ ಲಕ್ಷ್ಮಿ, ರೋಗಿಗಳ ವಾರ್ಡ್ ಗೆ ಹೋಗುತ್ತಿದ್ದಳು. ಬಳಿಕ ರೋಗಿಯ ಜೊತೆಗಿದ್ದವರನ್ನು ಚಿಕಿತ್ಸೆ ಕೊಡುವ ವೇಳೆ ಯಾರು ಒಳಗೆ ಇರಬಾರದು ಅಂತಾ ಹೊರಗೆ ಕಳುಹಿಸುತ್ತಿದ್ದಳು. ಹಾಗೆಯೇ ಹೊರಗೆ ಕಳುಹಿಸಿ ಚಿಕಿತ್ಸೆ ಕೊಡುವ ನೆಪದಲ್ಲಿ ರೋಗಿಗಳ ಬಳಿಯಿದ್ದ ಚಿನ್ನಾಭರಣ ಕಳವು ಮಾಡಿ ಎಸ್ಕೇಪ್ ಆಗುತ್ತಿದ್ದಳು.

ರೋಗಿ ಸರಸಮ್ಮ ಅನ್ನೋರ ಬಳಿ ಇದೇ ವಂಚಿಸಿ 40 ಗ್ರಾಂ ಚಿನ್ನದ ಸರ ಕಳವು ಮಾಡಿದ್ದಳು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ನಕಲಿ ಡಾಕ್ಟರ್ ಲಕ್ಷ್ಮಿಯನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಆರೋಪಿತೆ ಲಕ್ಷ್ಮಿಯ ಖಾಸಗಿ ಫೋಟೋ (Photo) ಇಟ್ಟುಕೊಂಡು ಹಣ ತರುವಂತೆ ಬ್ಲಾಕ್ ಮೇಲ್ ಮಾಡ್ತಿದ್ದ ಎನ್ನಲಾಗಿದೆ. ಆ ಹಿನ್ನೆಲೆಯಲ್ಲಿ ಕಳ್ಳತನ ಮಾಡಿದಳು ಅನ್ನೋದು ಬೆಳಕಿಗೆ ಬಂದಿದೆ. ಸದ್ಯ ಆ ವ್ಯಕ್ತಿಯ ಬಂಧನಕ್ಕೆ ಪೊಲೀಸರು, ಶೋಧ ನಡೆಸಿದ್ದಾರೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

19 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

19 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

20 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

20 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

21 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

21 hours ago