ಬೆಂಗಳೂರು : ಮತದಾರರು ವೋಟರ್ ಐಡಿಗೆ ಆಧಾರ್ ನಂಬರ್ ಲಿಂಕ್ ಮಾಡಿಸುವುದು ಕಡ್ಡಾಯವಲ್ಲ ಎಂದು ರಾಜ್ಯ ಚುನಾವಣಾ ಆಯೋಗ ಹೇಳಿದೆ.
ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿದ ಚುನಾವಣೆ ಆಯೋಗವು ಮತದಾರರು ಮತದಾರರ ಪಟ್ಟಿಯ ದತ್ತಾಂಶದೊಂದಿಗೆ ಆಧಾರ್ ಸಂಖ್ಯೆ ಜೋಡಣೆ ಕಡ್ಡಾಯವಲ್ಲ. ಮತದಾರರು ಸ್ವಯಂ ಪ್ರೇರಿತರಾಗಿ ಆಧಾರ್ ಅಥವಾ ಇತರೆ ನಿಗದಿತ ದಾಖಲೆಗಳ ಮೂಲಕವೂ ದೃಢೀಕರಿಸಿ ಜೋಡಣೆ ಮಾಡಬಹುದಾಗಿದೆ ಎಂದು ತಿಳಿಸಿದೆ.
ಆಗಸ್ಟ್ 9 ರಂದು ರಾಜ್ಯದ ಎಲ್ಲ ಮತದಾರರು ತಮ್ಮ ಮತದಾನ ಗುರುತಿನ ಚೀಟಿ ಸಂಖ್ಯೆಗೆ ಕೂಡಲೇ ಆಧಾರ್ ನಂಬರ್ನ್ನು ಲಿಂಕ್ ಮಾಡಿಕೊಳ್ಳಬೇಕೆಂದು ಚುನಾವಣಾ ಆಯೋಗ ಸೂಚಿಸಿದೆ ಎಂದು ಕಂದಾಯ ಇಲಾಖೆ ಸುತ್ತೋಲೆ ಹೊರಡಿಸಿತ್ತು. ಸುತ್ತೋಲೆಯಲ್ಲಿ “ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ರಾಜ್ಯದ ಎಲ್ಲಾ ಮತದಾರರ ಗುರುತಿನ ಚೀಟಿ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಲು ನಿರ್ಧರಿಸಿದ್ದು, ಎಲ್ಲಾ ಮತದಾರರು ತಮ್ಮ ಹಾಗೂ ತಮ್ಮ ಕುಟುಂಬದ ಎಲ್ಲಾ ಸದಸ್ಯರ ಮತ್ತು ನಿಮ್ಮ ಸ್ನೇಹಿತರ ಮತದಾರರ ಗುರುತಿನ ಚೀಟಿ ಸಂಖ್ಯೆಗೆ ಕೂಡಲೇ ಆಧಾರ್ ನಂಬರನ್ನು ಲಿಂಕ್ ಮಾಡಿಕೊಳ್ಳಲು ಕೋರಿದೆ ಎಂದು”, ಕಂದಾಯ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿತ್ತು.
ಹೃದಯಾಘಾತದಿಂದ ನಟಿ ಬಿಜೆಪಿ ನಾಯಕಿ ಸೋನಾಲಿ ಫೋಗಟ್ ನಿಧನ – Vishwanews24
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…