ಬೆಂಗಳೂರು: ನಗರದ ಖಾಸಗಿ ಶಾಲೆಯೊಂದರ ನಾಲ್ವರು ಉದ್ಯೋಗಿಗಳ ವಿರುದ್ಧ ಶಾಲೆ ಮತ್ತು ಶಿಕ್ಷಣ ಸಂಸ್ಥೆಗೆ ಸೇರಿದ 4 ಕೋಟಿ ರೂ. ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.
ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಶಾಲೆಗೆ ಆರೋಪಿಗಳು 2017ರಿಂದ 4 ಕೋಟಿ ರೂ. ವಂಚಿಸಿದ್ದಾರೆ. ವಿದ್ಯಾರ್ಥಿಗಳ ಶುಲ್ಕದ ಹಣವನ್ನು ಸ್ವಂತಕ್ಕೆ ಬಳಸಿಕೊಂಡಿದ್ದಾರೆ. ಶಾಲೆ & ಟ್ರಸ್ಟ್ ನಲ್ಲಿ ಅಕೌಂಟೆಂಟ್ಸ್, ಟ್ರಾನ್ಸ್‌ಪೋರ್ಟ್ ಇನ್ಚಾರ್ಜ್ ಆಗಿದ್ದ ಸಾಗರ್, ಮುರುಳಿ, ಮನೋಜ್, ಮೋಹನ್ ಮತ್ತು ಕಿಶೋರ್ ಎಂಬವರು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ಶಿಕ್ಷಣ ಸಂಸ್ಥೆಯ ನಿರ್ದೇಶಕ ಸಿಸಿಬಿಗೆ (CCB) ದೂರು ನೀಡಿದ್ದರು. ದೂರಿನಡಿ ಎಫ್‍ಐಆರ್ ದಾಖಲಿಸಿಕೊಂಡು, ಸಾಗರ್ ಮತ್ತು ಮನೋಜ್‍ನನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…