ಬೆಂಗಳೂರು,: ಕೆಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಇ -ಮೇಲ್ ಬಂದಿರುವ ಕುರಿತು ಶುಕ್ರವಾರ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಕಠಿಣ ಕ್ರಮಕ್ಕೆ ಪೊಲೀಸರಿಗೆ ಸೂಚನೆ ನೀಡಿದ್ದು, ಬೆದರಿಕೆ ಹಾಕಿದವರನ್ನು ಕೂಡಲೇ ಬಂಧಿಸುವಂತೆ ಆದೇಶಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಂತಿ ಕದುಡುವ ಹುನ್ನಾರ ನಡೆಯುತ್ತಿದ್ದು, ಪ್ರಗತಿ ಹೊಂದಿದ ರಾಜ್ಯಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ ಮಾಡಲಾಗುತ್ತಿದೆ. ಶಾಲೆಗಳಿಗೆ ಇ-ಮೇಲ್ ಮೂಲಕ ಬೆದರಿಕೆ ಬಂದಿದೆ. ಬೆದರಿಕೆ ಬಂದ ಶಾಲೆಗಳಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದರು.
ಇನ್ನು ಎಲ್ಲಾ ರೀತಿಯ ತನಿಖೆ ನಡೆಯುತ್ತಿದೆ. ಎಲ್ಲಿಂದ ಕರೆ ಬಂದಿದೆ ಅನ್ನುವುದರ ಬಗ್ಗೆ ತೆನಿಖೆಯಾಗುತ್ತಿದೆ.ಪೋಷಕರು ಆತಂಕ ಪಡುವ ಅಗತ್ಯವಿಲ್ಲ.ಕೆಟ್ಟ ಹೆಸರು ತರಬೇಕು ಎಂದು ಹೇಳಿ ಈ ರೀತಿ ಮಾಡುತ್ತಿದ್ದಾರೆ. ಪೊಲೀಸ್ ಇಲಾಖೆ ಗಂಭೀರವಾಗಿ ತಗೆದುಕೊಂಡು ತಪಾಸಣೆ ಮಾಡುತ್ತಿದೆ ಎಂದು ತಿಳಿಸಿದ್ದಾರೆ.
ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…
ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…
ಬೆಳ್ತಂಗಡಿ: ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…
ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…