ಬೆಂಗಳೂರು :  ಸಕಲ ಸರಕಾರಿ ಗೌರವಗಳೊಂದಿಗೆ ಚಾರುಕೀರ್ತಿ ಮಹಾಸ್ವಾಮಿಗಳ ಅಂತ್ಯಕ್ರಿಯೆ: ಸಿಎಂ – Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು :  ಸಕಲ ಸರಕಾರಿ ಗೌರವಗಳೊಂದಿಗೆ ಚಾರುಕೀರ್ತಿ ಮಹಾಸ್ವಾಮಿಗಳ ಅಂತ್ಯಕ್ರಿಯೆ: ಸಿಎಂ

ಬೆಂಗಳೂರು: ಜಿನೈಕ್ಯರಾದ ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳ ಅಂತ್ಯಸಂಸ್ಕಾರವನ್ನು ಜೈನ ಸಂಪ್ರದಾಯದಂತೆ ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ತೀವ್ರ ಸಂತಾಪ
“ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳು ನಮ್ಮನ್ನಗಲಿದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಪೂಜ್ಯರ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದ್ದು, ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಅಪಾರ ಸಂಖ್ಯೆಯ ಭಕ್ತರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ” ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಕಾರ್ಕಳ : ಆಕಸ್ಮಿಕ ಬೆಂಕಿಗೆ ಸುಟ್ಟು ಭಸ್ಮವಾದ ಅತ್ತೂರು ಬಸಿಲಿಕಾ ಬಳಿಯ ಮೇಣದ ಬತ್ತಿ ತಯಾರಿಕಾ ಕಾರ್ಖಾನೆ – Vishwanews24

ಸಿದ್ದರಾಮಯ್ಯ ಸಾಂತಾಪ

ಶ್ರವಣಬೆಳಗೊಳದ ಜೈನಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ವಿಧಿವಶರಾದ ಸುದ್ದಿ ತಿಳಿದು ಅತೀವ ನೋವಾಯಿತು.ಧಾರ್ಮಿಕ ಚಟುವಟಿಕೆಗಳ ಜೊತೆ ಶಿಕ್ಷಣ, ಸಮಾಜ ಸುಧಾರಣೆಗಾಗಿ ದುಡಿಯುತ್ತಿದ್ದ ಶ್ರೀಗಳ ಅಗಲಿಕೆಯಿಂದ ಸಮಾಜ ಬಡವಾಗಿದೆ. ಶ್ರೀಗಳ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಮಠದ ಅನುಯಾಯಿಗಳಿಗೆ ದೇವರು ಕರುಣಿಸಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಸಾಂತಾಪ ಸೂಚಿಸಿದ್ದಾರೆ.

ಶಿರ್ವ: ಮಹಿಳೆ ನಾಪತ್ತೆ – Vishwanews24

Leave a Reply