ಬೆಂಗಳೂರು: ಸಹೋದ್ಯೋಗಿ ಯುವತಿಯರ ಖಾಸಗಿ ದೃಶ್ಯಗಳನ್ನು ಸೆರೆಹಿಡಿದು ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ಕುಂದಾಪುರ ಮೂಲದ ರಘುರಾಮ್ ಎಂಬಾತನನ್ನು ಪಶ್ಚಿಮ ಬಂಗಾಲದ 22 ವರ್ಷದ ಯುವತಿ ನೀಡಿದ ದೂರಿನ ಆಧಾರದಲ್ಲಿ ಎಚ್‌ಎಎಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕ್ಯಾಟರಿಂಗ್ ನಡೆಸುತ್ತಿದ್ದ ರಘುರಾಮ್ ಪಶ್ಚಿಮ ಬಂಗಾಲದ ಯುವತಿಯರನ್ನು ಕೆಲಸಕ್ಕೆ ಇಟ್ಟುಕೊಂಡಿದ್ದ. ಸಂತ್ರಸ್ತೆ, ಆಕೆಯ ಸ್ನೇಹಿತೆ ಹಾಗೂ ರಘುರಾಮ್ ನಿಸರ್ಗ ಗಾರ್ಡನ್‌ನ ಒಂದೇ ಮನೆಯಲ್ಲಿ ವಾಸವಾಗಿದ್ದರು.
ಮೇ .12ರಂದು ದೂರುದಾರೆ ಸ್ನಾನ ಮಾಡುತ್ತಿದ್ದ ದೃಶ್ಯವನ್ನು ಆರೋಪಿ ಚಿತ್ರೀಕರಿಸಿಕೊಂಡಿದ್ದ ಇದನ್ನು ಆಕೆಯ ಸ್ನೇಹಿತೆ ಗಮನಿಸಿ ಬೊಬ್ಬೆ ಹಾಕಿದ್ದಳು. ಇದನ್ನು ಪ್ರಶ್ನಿಸಿದಾಗ ತಾನು ಹೇಳಿದಂತೆ ಕೇಳಬೇಕು. ತನ್ನೊಂದಿಗೆ ಲೈಂಗಿಕವಾಗಿ ಸಹಕರಿಸಬೇಕು ಇಲ್ಲವಾದಲ್ಲಿ ಜಾಲತಾಣದಲ್ಲಿ ವಿಡಿಯೋ ಪ್ರಕಟಿಸುವುದಾಗಿ ಬೆದರಿಕೆ ಹಾಕಿದ್ದ ಎಂದು ದೂರಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…