Featured

ಬೆಂಗಳೂರು : ಹಿಂದೂ ಆಗಿ ಭಾರತದಲ್ಲಿ ಅಕ್ರಮವಾಗಿ ನೆಲಸಿದ್ದ ಬಾಂಗ್ಲಾ ಮಹಿಳೆ ಬಂಧನ – Vishwanews24

ಬೆಂಗಳೂರು : ಹಿಂದೂ ಆಗಿ ಭಾರತದಲ್ಲಿ ಅಕ್ರಮವಾಗಿ ನೆಲಸಿದ್ದ ಬಾಂಗ್ಲಾ ಮಹಿಳೆ ಬಂಧನ – Vishwanews24

ಬೆಂಗಳೂರು: ಬಾಂಗ್ಲಾ ದೇಶದಿಂದ ಬಂದು, ಹಿಂದೂ ಆಗಿ ಭಾರತದಲ್ಲಿ ಅಕ್ರಮವಾಗಿ ನೆಲಸಿದ್ದ ಮಹಿಳೆಯೊಬ್ಬರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಅಕ್ರಮವಾಗಿ ಭಾರತೀಯ ಪೌರತ್ವ ಪಡೆದಿದ್ದ ಮಹಿಳೆಯನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ರೋನಿ ಬೇಗಂ 2006 -2007 ರಲ್ಲಿ ಅಕ್ರಮವಾಗಿ ಗಡಿ ನುಸುಳಿ ಭಾರತದೊಳಕ್ಕೆ ಪ್ರವೇಶಿಸಿದ್ದಳು ,ರೋನಿ ಬೇಗಂ 2015 ರಿಂದ ಬೆಂಗಳೂರಿನಲ್ಲಿ ನೆಲೆಸಿದ್ದಳು.

ಬೆಂಗಳೂರಿನ ಮಾಗಡಿ ರಸ್ತೆಯಲ್ಲಿ ಟೈಲರಿಂಗ್ ಮಾಡಿಕೊಂಡಿದ್ದ ಸದರಿ ವಿದೇಶಿ ಮಹಿಳೆ, ನೀತಿನ್ ಕುಮಾರ್ ಎಂಬಾತನನ್ನು ಮುಂಬೈನಲ್ಲಿ ವಿವಾಹವಾಗಿದ್ದಳು. ಹಿಂದೂ ಸಂಪ್ರದಾಯದಂತೆ ವಿವಾಹವಾಗಿದ್ದ ರೋನಿ ಬೇಗಂ ತನ್ನ ಹೆಸರು ಬದಲಿಸಿಕೊಂಡಿದ್ದಳು. ಪಾಯಲ್ ಗೋಷ್ ಎಂದು ಆಕೆಗೆ ಮರು ನಾಮಕರಣವಾಗಿತ್ತು. ನಕಲಿ ದಾಖಲೆ ಕೊಟ್ಟು ಭಾರತದ ಪ್ರಜೆಯಾಗಿ ದಾಖಲೆ ಮಾರ್ಪಾಡು ಮಾಡಿಕೊಂಡಿದ್ದಳು. ಬಾಂಗ್ಲಾಗೆ ಪ್ರಯಾಣ ಮಾಡುವಾಗ ಏರ್ ಪೋರ್ಟ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾಳೆ.

ನಕಲಿ ದಾಖಲೆ ಮುಖಾಂತರ ಓಟರ್ ಐಡಿ, ಆಧಾರ್ ಕಾರ್ಡ್ ಸಹ ರೋನಿ ಬೇಗಂ ಯಾನಿ ಪಾಯಲ್ ಗೋಷ್ ಪಶ್ಚಿಮ ಬಂಗಾಳದ ಏರ್ ಪೋರ್ಟ್ ನಲ್ಲಿ ಲಾಕ್ ಆಗಿದ್ದಾಳೆ. FRRO ಸೂಚನೆ ಮೇರೆಗೆ ಬ್ಯಾಡರಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಒಂದೂವರೆ ವರ್ಷದ ನಂತರ ರೋನಿ ಬೇಗಂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ. ರೋನಿ ಬೇಗಂ ಯಾನಿ ಪಾಯಲ್ ಗೋಷ್ ಎಂಬ ಈ ಮಹಿಳೆಗೆ ಅಕ್ರಮವಾಗಿ ದಾಖಲಾತಿ ಮಾಡಿಕೊಟ್ಟವರಿಗೂ ಬೆಂಗಳೂರು ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ :

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

15 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

17 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

17 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

17 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

18 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

18 hours ago