ಬೆಂಗಳೂರು : ಹೃದಯಾಘಾತದಿಂದ ಇನ್ಸ್‌ಪೆಕ್ಟರ್ ಮಹಮ್ಮದ್ ರಫೀಕ್ ನಿಧನ – Vishwanews24
ಬೆಂಗಳೂರು : ಹೃದಯಾಘಾತದಿಂದ ಇನ್ಸ್‌ಪೆಕ್ಟರ್ ಮಹಮ್ಮದ್ ರಫೀಕ್ ನಿಧನ – Vishwanews24
ಬೆಂಗಳೂರು: ನಗರದ ವಿವಿಧ ಠಾಣೆಗಳಲ್ಲಿ ಕೆಲಸ ನಿರ್ವಹಿಸಿದ್ದ ಇನ್ಸ್‌ಪೆಕ್ಟರ್ ಹೃದಯಘಾತದಿಂದ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಬೆಂಗಳೂರಿನ ಠಾಣೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಮ್ಮದ್ ರಫೀಕ್ ಹೃದಯಾಘಾತದಿಂದ ಮೃತಪಟ್ಟ ದುರ್ದೈವಿ. ಇಂದು ರಫೀಕ್ ಎಂದಿನಂತೆ ಬೆಳಗ್ಗೆ ಎದ್ದು ಸ್ಥಾನಕ್ಕೆ ತೆರಳಿದಾಗ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಕೂಡಲೇ ಮನೆಯವರು ವೈದ್ಯರನ್ನು ಮನೆಗೆ ಕರೆಸಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ರಫೀಕ್ ಅವರ ಪ್ರಾಣಪಕ್ಷಿ ಹಾರಿ ಹೋಗಿತ್ತು.
ನಗರದ ವಿವಿಧ ಠಾಣೆಗಳಲ್ಲಿ ಕೆಲಸ ಮಾಡಿದ್ದ ಮಹಮ್ಮದ್ ರಫೀಕ್ ಸ್ನೇಹ ಜೀವಿಯಾಗಿದ್ದರು. ರಫೀಕ್ ಇತ್ತೀಚೆಗೆ ಖಾಸಗಿ ಚಾನಲ್ ಒಂದರಲ್ಲಿ ಹಾಡುತ್ತಿದ್ದ ಪೊಲೀಸ್ ಕಾನ್ಸ್‌ಟೇಬಲ್ ಸುಬ್ರಹ್ಮಣಿ ಜೊತೆ ಶೋ ಒಂದರಲ್ಲಿ ಭಾಗವಹಿಸಿದ್ದರು. ಅಲ್ಲದೆ, ಕೊರೊನಾ ಲಾಕ್‍ಡೌನ್ ಸಂದರ್ಭದಲ್ಲಿ ಗೋವುಗಳಿಗೆ ರಕ್ಷಣೆ ನೀಡಿ ಅವುಗಳಿಗೆ ಆಹಾರ ನೀಡಿ ಆರೈಕೆ ಮಾಡುತ್ತಿದ್ದರು. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಕರುವೊಂದನ್ನು ಸಾಕುತ್ತಿದ್ದರು. ಆ ಬಳಿಕ ವರ್ಗಾವಣೆಗೊಂಡಾಗ ಆ ಕರುವನ್ನು ಜೊತೆಯಲ್ಲೇ ಕರೆದೊಯ್ದು ಪ್ರಾಣಿ ಪ್ರೀತಿ ತೋರಿಸಿದ್ದರು.
ಮಣಿಪಾಲ: ಸಿಎಂ ಹೇಳಿಕೆ ಖಂಡಿಸಿ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ – Vishwanews24
