Featured

ಬೆಂಗಳೂರು : ಹೆಂಡತಿಗೆ ತನ್ನ ಸ್ನೇಹಿತರ ಜೊತೆಗೆ ಹಾಸಿಗೆ ಹಂಚಿಕೊಳ್ಳುವಂತೆ ಬೆದರಿಸಿ , ಖಾಸಗಿ ದೃಶ್ಯ ಮೊಬೈಲ್‌ನಲ್ಲಿ ಸೆರೆಹಿಡಿದು ಬ್ಲಾಕ್​ಮೇಲ್ ಮಾಡಿದ ಪತಿ – VIshwanews24

ಬೆಂಗಳೂರು: ಹೆಂಡತಿಗೆ ತನ್ನ ಸ್ನೇಹಿತರ ಜೊತೆಗೆ ಹಾಸಿಗೆ ಹಂಚಿಕೊಳ್ಳುವಂತೆ ಬೆದರಿಸಿದ ಪತಿ..

ಖಾಸಗಿ ದೃಶ್ಯ ಮೊಬೈಲ್‌ನಲ್ಲಿ ಸೆರೆಹಿಡಿದು ಬ್ಲಾಕ್​ಮೇಲ್ ..

ಪತಿಯ ಕಿರುಕುಳಕ್ಕೆ ಬೇಸತ್ತ ಮಹಿಳೆಯಿಂದ ಪೊಲೀಸರಿಗೆ ದೂರು

ಬೆಂಗಳೂರು: ಪತಿ ಮಹಾಶಯ ತನ್ನ ಸ್ನೇಹಿತರ ಜತೆಗೆ ಹಾಸಿಗೆ ಹಂಚಿಕೊಳ್ಳುವಂತೆ ಬೆದರಿಸಿ, ಆ ಖಾಸಗಿ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದು ಟೆಕ್ಕಿ ಪತ್ನಿಗೆ ಬ್ಲಾಕ್‌ಮೇಲ್ ಮಾಡುತ್ತಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

ಪ್ರತಿಷ್ಠಿತ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಥಣಿಸಂದ್ರದ ನಿವಾಸಿ 34 ವರ್ಷದ ಮಹಿಳೆ ಕೊಟ್ಟ ದೂರಿನ ಆಧಾರದ ಮೇಲೆ ಆಕೆಯ ಪತಿ ಜಾನ್ (36) ವಿರುದ್ಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ದೂರುದಾರ ಮಹಿಳೆಯು 2011ರಲ್ಲಿ ಪತಿ ಜಾನ್‌ನನ್ನು ವಿವಾಹವಾಗಿದ್ದರು. ದಂಪತಿಗೆ ಒಬ್ಬ ಮಗನಿದ್ದಾನೆ. ಮದುವೆಯಾದಾಗಿನಿಂದ ಜಾನ್ ಮದ್ಯಪಾನ ಮಾಡಿ ಬಂದು ಹಲ್ಲೆ ನಡೆಸಿ ಹಿಂಸೆ ಕೊಡುತ್ತಿದ್ದ.

2015ರಲ್ಲಿ ತನ್ನ ಸ್ನೇಹಿತರೊಂದಿಗೆ ಮಲಗುವಂತೆ ಒತ್ತಾಯ ಮಾಡುತ್ತಿದ್ದು ನಾನು ಒಪ್ಪದಿದ್ದಾಗ ಹಲ್ಲೆ ನಡೆಸಿ ಹಿಂಸೆ ಕೊಡುತ್ತಿದ್ದ. ಪತಿಯ ಹಿಂಸೆ ತಾಳಲಾರದೇ ಪತಿಯ ಇಬ್ಬರು ಸ್ನೇಹಿತರ ಜತೆಗೆ ಹಲವಾರು ಬಾರಿ ದೈಹಿಕ ಸಂಪರ್ಕ ಹೊಂದಿದ್ದೇನೆ. ಪತಿಯ ಸ್ನೇಹಿತರ ಜೊತೆಗೆ ಕಳೆದ ಖಾಸಗಿ ಕ್ಷಣಗಳ ವಿಡಿಯೋ ಹಾಗೂ ಫೋಟೊವನ್ನು ಪತಿ ಜಾನ್‌ ತನಗೆ ಗೊತ್ತಾಗದಂತೆ ಆತನ ಮೊಬೈಲ್ ಕ್ಯಾಮರಾದಲ್ಲಿ ಸೆರೆಹಿಡಿದಿದ್ದ. ಇತ್ತೀಚೆಗೆ ನನಗೆ ಈ ರೀತಿಯ ಕೃತ್ಯಗಳಲ್ಲಿ ಭಾಗಿಯಾಗುವುದು ಇಷ್ಟವಾಗದೇ ಇದರಿಂದ ದೂರ ಉಳಿದಿದ್ದೆ ಎಂದು ದೂರಿನಲ್ಲಿ ಮಹಿಳೆ ಉಲ್ಲೇಖಿಸಿದ್ದಾರೆ.

ವಿಚ್ಛೇದನ ಕೇಳಿದಕ್ಕೆ ಬ್ಲಾಕ್‌ಮೇಲ್: ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ನನ್ನ ಸಹೋದರಿ 2019ರಿಂದ ನಮ್ಮೊಂದಿಗೆ ವಾಸಿಸುತ್ತಿದ್ದಳು. ಇಷ್ಟಕ್ಕೆ ಸುಮ್ಮನಾಗದ ಪತಿ ನಿನ್ನ ತಂಗಿಯನ್ನು ನನ್ನ ಜೊತೆ ಮಲಗಲು ಹೇಳು ಎಂದು ಒತ್ತಾಯಿಸುತ್ತಿದ್ದ. ಇದರಿಂದ ಮನನೊಂದು ಪತಿಯಿಂದ ವಿಚ್ಛೇದನ ಪಡೆದುಕೊಳ್ಳಲು ಮುಂದಾಗಿದ್ದೆ.

ವಿಚ್ಛೇದನ ಕೇಳಿದಾಗಲೆಲ್ಲಾ ಖಾಸಗಿ ವಿಡಿಯೋ ಮತ್ತು ಫೋಟೋ ತೋರಿಸಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದಾಗಿ ಬೆದರಿಸಿದ್ದ. ಡಿ.4ರಂದು ಮತ್ತೆ ವಿಚ್ಛೇದನ ಕೇಳಿದಾಗ 2 ಖಾಸಗಿ ಫೋಟೋಗಳನ್ನು ನನ್ನ ವಾಟ್ಸ್​ಆಯಪ್​​ಗೆ ಕಳುಹಿಸಿದ್ದ. ಇವುಗಳನ್ನು ನಿನ್ನ ಸ್ನೇಹಿತರಿಗೆ, ನಿನ್ನ ತಂದೆ ತಾಯಿಗೆ ಕಳುಹಿಸಿ, ಇಂಟರ್ನೆಟ್ ಗ್ರೂಪ್‌ಗಳಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಸಿದ್ದಾನೆ. ಪತಿ ಮದ್ಯಪಾನದ ಜತೆಗೆ ಗಾಂಜಾ ಸೇವನೆ ಮಾಡುತ್ತಿದ್ದು, ಮನೆಯಲ್ಲಿ 2 ಪಾಟ್‌ಗಳಲ್ಲಿ ಗಾಂಜಾ ಸಸ್ಯ ಬೆಳೆಸಿದ್ದಾನೆ ಎಂದು ಪತ್ನಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago