ಬೆಂಗಳೂರು: ವಾಹನಸವಾರರ ಮತ್ತು ರಸ್ತೆ ಸುರಕ್ಷತೆ ಉದ್ದೇಶದಿಂದ ‘ಹೆಲ್ಮೆಟ್ ಹಾಕಿರದಿದ್ದರೆ, ಪೆಟ್ರೋಲ್ ಇಲ್ಲ’ ಎಂಬ ನಿಯಮವನ್ನು ನಗರ ವ್ಯಾಪಿ ಸೋಮವಾರದಿಂದಲೇ ಜಾರಿಗೆ ತರಲಾಗಿದೆ.
ಮೋಟಾರು ವಾಹನ ಕಾಯ್ದೆ-1988 ಕಲಂ 129ರ ಪ್ರಕಾರ ದ್ವಿಚಕ್ರ ವಾಹನಸವಾರ ಸುರಕ್ಷತೆಗಾಗಿ ಹೆಲ್ಮೆಟ್ ಧರಿಸುವುದು ಕಡ್ಡಾಯ. ನಗರದಲ್ಲಿ ಕಳೆದ 10 ವರ್ಷದಿಂದ ಹೆಲ್ಮೆಟ್ ಕಡ್ಡಾಯ ನಿಯಮ ಜಾರಿಗೊಳಿಸಲಾಗಿದೆ. ಆದರೆ ಆದೇಶವಿದ್ದರು ಇದ್ದರು ಕೂಡ ಈ ಬಗ್ಗೆ ವಾಹನ ಸವಾರರು ಈ ಬಗ್ಗೆ ತಲೆ ಕೆಡಿಸಿಕೊಳ್ಳದೇ ಇರುವುದು ಆತಂಕಕಾರಿಯಾಗಿದೆ ಅಂತ ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಹೆಲ್ಮೆಟ್ ಇಲ್ಲದಿದ್ದರೆ ಪೆಟ್ರೋಲ್ ಸಿಗಲ್ಲ ಎನ್ನುವ ವಿಷಯಕ್ಕೆ ಸಂಬಂಧಪಟ್ಟಂತೆ ಸಹಕಾರ ನೀಡುವ ನಿಟ್ಟಿನಲ್ಲಿ ನಗರದಲ್ಲಿರುವ ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ, ಹಿಂದೂಸ್ತಾನ್ ಪೆಟ್ರೋಲಿಯಂ, ರಿಲಯನ್ಸ್, ಶೆಲ್ ಸೇರಿ ಎಲ್ಲ ಪೆಟ್ರೋಲ್ ಬಂಕ್ಗಳ ಮಾಲೀಕರಿಗೆ ಪತ್ರ ಬರೆದು ಸಹಕಾರ ನೀಡುವಂತೆ ಕೋರಲಾಗುತ್ತದೆ. ಈ ಸಂಬಂಧ ಆದೇಶವನ್ನು ಹೊರಡಿಸಲಾಗುತ್ತದೆ ಅಂತ ಹರಿಶೇಖರ್ ಅವರು ಹೇಳಿದ್ದಾರೆ.
ಈ ನಿಯಮ ಈಗಾಗಲೇ ಕೇರಳ, ಆಂಧ್ರ ಸೇರಿದಂತೆ ದೇಶದ ವಿವಿಧೆಡೆ ಜಾರಿಯಾಗಿದೆ. ಇದರ ಪ್ರಕಾರ ನಿಮ್ಮ ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ಹಾಕಿಸಬೇಕು ಎಂದರೆ ಹೆಲ್ಮೆಟ್ ಇರಲೇಬೇಕು. ಒಂದು ವೇಳೆ ನಿಮ್ಮ ಬಳಿ ಹೆಲ್ಮೆಟ್ ಇಲ್ಲ ಎಂದರೆ ಬಂಕ್‍ನವರು ನಿಮ್ಮ ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ಹಾಕುವುದಿಲ್ಲ. ಬೆಂಗಳೂರಲ್ಲಿ ಬೈಕ್ ಅಪಘಾತದಿಂದ ಹೆಚ್ಚುತ್ತಿರುವ ಸಾವು-ನೋವು ತಡೆಗೆ ಈ ಹೊಸ ನಿಯಮವನ್ನು ತರಲಾಗುತ್ತಿದೆ ಎಂದು ಹೇಳಲಾಗುತ್ತಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…