Featured

ಬೆಂಗಳೂರು : ಹೆಲ್ಮೆಟ್ ಹಾಕಿರದಿದ್ದರೆ, ಪೆಟ್ರೋಲ್ ಇಲ್ಲ ; ಹೊಸ ನಿಯಮ ಜಾರಿಗೆ -Vishwanews24

ಬೆಂಗಳೂರು: ವಾಹನಸವಾರರ ಮತ್ತು ರಸ್ತೆ ಸುರಕ್ಷತೆ ಉದ್ದೇಶದಿಂದ ‘ಹೆಲ್ಮೆಟ್ ಹಾಕಿರದಿದ್ದರೆ, ಪೆಟ್ರೋಲ್ ಇಲ್ಲ’ ಎಂಬ ನಿಯಮವನ್ನು ನಗರ ವ್ಯಾಪಿ ಸೋಮವಾರದಿಂದಲೇ ಜಾರಿಗೆ ತರಲಾಗಿದೆ.

ಮೋಟಾರು ವಾಹನ ಕಾಯ್ದೆ-1988 ಕಲಂ 129ರ ಪ್ರಕಾರ ದ್ವಿಚಕ್ರ ವಾಹನಸವಾರ ಸುರಕ್ಷತೆಗಾಗಿ ಹೆಲ್ಮೆಟ್ ಧರಿಸುವುದು ಕಡ್ಡಾಯ. ನಗರದಲ್ಲಿ ಕಳೆದ 10 ವರ್ಷದಿಂದ ಹೆಲ್ಮೆಟ್ ಕಡ್ಡಾಯ ನಿಯಮ ಜಾರಿಗೊಳಿಸಲಾಗಿದೆ. ಆದರೆ ಆದೇಶವಿದ್ದರು ಇದ್ದರು ಕೂಡ ಈ ಬಗ್ಗೆ ವಾಹನ ಸವಾರರು ಈ ಬಗ್ಗೆ ತಲೆ ಕೆಡಿಸಿಕೊಳ್ಳದೇ ಇರುವುದು ಆತಂಕಕಾರಿಯಾಗಿದೆ ಅಂತ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಹೆಲ್ಮೆಟ್ ಇಲ್ಲದಿದ್ದರೆ ಪೆಟ್ರೋಲ್ ಸಿಗಲ್ಲ ಎನ್ನುವ ವಿಷಯಕ್ಕೆ ಸಂಬಂಧಪಟ್ಟಂತೆ ಸಹಕಾರ ನೀಡುವ ನಿಟ್ಟಿನಲ್ಲಿ ನಗರದಲ್ಲಿರುವ ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ, ಹಿಂದೂಸ್ತಾನ್ ಪೆಟ್ರೋಲಿಯಂ, ರಿಲಯನ್ಸ್, ಶೆಲ್ ಸೇರಿ ಎಲ್ಲ ಪೆಟ್ರೋಲ್ ಬಂಕ್​ಗಳ ಮಾಲೀಕರಿಗೆ ಪತ್ರ ಬರೆದು ಸಹಕಾರ ನೀಡುವಂತೆ ಕೋರಲಾಗುತ್ತದೆ. ಈ ಸಂಬಂಧ ಆದೇಶವನ್ನು ಹೊರಡಿಸಲಾಗುತ್ತದೆ ಅಂತ ಹರಿಶೇಖರ್‌ ಅವರು ಹೇಳಿದ್ದಾರೆ.

ಈ ನಿಯಮ ಈಗಾಗಲೇ ಕೇರಳ, ಆಂಧ್ರ ಸೇರಿದಂತೆ ದೇಶದ ವಿವಿಧೆಡೆ ಜಾರಿಯಾಗಿದೆ. ಇದರ ಪ್ರಕಾರ ನಿಮ್ಮ ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ಹಾಕಿಸಬೇಕು ಎಂದರೆ ಹೆಲ್ಮೆಟ್ ಇರಲೇಬೇಕು. ಒಂದು ವೇಳೆ ನಿಮ್ಮ ಬಳಿ ಹೆಲ್ಮೆಟ್ ಇಲ್ಲ ಎಂದರೆ ಬಂಕ್‍ನವರು ನಿಮ್ಮ ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ಹಾಕುವುದಿಲ್ಲ. ಬೆಂಗಳೂರಲ್ಲಿ ಬೈಕ್ ಅಪಘಾತದಿಂದ ಹೆಚ್ಚುತ್ತಿರುವ ಸಾವು-ನೋವು ತಡೆಗೆ ಈ ಹೊಸ ನಿಯಮವನ್ನು ತರಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago