ಬೆಂಗಳೂರು: ಉದ್ಯೋಗದಾಸೆ ತೋರಿಸಿ ಯುವತಿಯರನ್ನು ವೇಶ್ಯಾವಟಿಕೆಗೆ ಬಳಕೆ ಮಾಡುತ್ತಿದ್ದ ಇಬ್ಬರು ಮಹಿಳೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಉಮಾ, ಪುಷ್ಪಲತಾ ಬಂಧಿತ ಆರೋಪಿಗಳು. ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ಬಿಇಎಲ್ ಬಡವಾಣೆಯಲ್ಲಿ ಹೈ ಫೈ ಮನೆ ಬಾಡಿಗೆ ಪಡೆದಿದ್ದ ಆರೋಪಿಗಳು ಈ ಕೃತ್ಯ ನಡೆಸುತ್ತಿದ್ದರು.
ಮನೆ ಮಾಲೀಕರ ಬಳಿ ಪತಿ ಇಲ್ಲಎಂದು ಮನೆಯನ್ನು ಬಾಡಿಗೆಗೆ ಪಡೆಯುತ್ತಿದ್ದ ಇವರು ಹೊರ ರಾಜ್ಯದಿಂದ ಬರುವ ಯುವತಿಯರಿಗೆ ಉದ್ಯೋಗದ ಆಸೆ ತೋರಿಸಿ ವೇಶ್ಯವಾಟಿಕೆ ದಂಧೆಗೆ ದೂಡುತ್ತಿದ್ದರು. ಗಿರಾಕಿಗಳನ್ನ ಫೋನ್ ಮೂಲಕ ಸಂಪರ್ಕ ಮಾಡಿ ಫೋಟೋಗಳನ್ನು ಕಳುಹಿಸಿ ಡೀಲ್ ಮಾಡುತ್ತಿದ್ದರು.
ಖಚಿತ ಮಾಹಿತಿ ಪಡೆದ ಸಿಸಿಬಿ ಮಹಿಳಾ ಸಂರಕ್ಷಣಾ ಘಟಕದ ಅಧಿಕಾರಿಗಳು ದಾಳಿ ನಡೆಸಿ ಓರ್ವ ಯುವತಿಯನ್ನು ರಕ್ಷಿಸಿ ಇಬ್ಬರು ಮಹಿಳೆಯರನ್ನು ಬಂಧಿಸಿದ್ದಾರೆ.
ಬೆಂಗಳೂರಿನ ಅನೇಕ ಭಾಗಗಳಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ದಾಳಿ ನಡೆಸಿದೆ. ಸಂಪಿಗೇಹಳ್ಳಿ, ಕೆಆರ್ ಪುರಂ, ರಾಮಮೂರ್ತಿ ನಗರ, ಹನುಮಂತ ನಗರ ಠಾಣಾ ವ್ಯಾಪ್ತಿಯ ಐಷಾರಾಮಿ ಹೋಟೆಲ್, ಅಪಾರ್ಟ್‌ಮೆಂಟ್ ಮನೆಗಳಲ್ಲಿ ದಂಧೆ ನಡೆಸುತ್ತಿದ್ದ 4 ಆರೋಪಿಗಳನ್ನು ಬಂಧಿಸಿ 9 ಮಹಿಳೆಯರನ್ನು ರಕ್ಷಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…