Featured

ಬೆಂಗಳೂರು: ಹೊಸ ವರ್ಷ ಆಚರಣೆ : ಪೊಲೀಸ್ ನಿಯಮಗಳು ಜಾರಿಗೆ  – Vishwanews24

ಬೆಂಗಳೂರು: ಹೊಸ ವರ್ಷ ಆಚರಣೆ ರಾತ್ರಿ 1 ಗಂಟೆವರೆಗೆ ತನಕ ಮಾತ್ರ ಅವಕಾಶ :ಪೊಲೀಸ್ ನಿಯಮಗಳು ಜಾರಿಗೆ

ಬೆಂಗಳೂರು: ಈ ಬಾರಿಯ ಹೊಸ ವರ್ಷ ಆಚರಣೆಗೆ ಹೊಸ ನಿಯಮಗಳನ್ನು ಜಾರಿಗೆ ತರಲಾಗುತ್ತಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೆಲವೊಂದು ಪೊಲೀಸ್ ನಿಯಮಗಳನ್ನು ಜಾರಿಗೆ ತರಲಾಗುತ್ತಿದ್ದು, ಈ ರೂಲ್ಸ್ ಗಳನ್ನು ಅನುಸರಿಸುವಂತೆ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

ಹೊಸ ವರ್ಷ ಆಚರಣೆ ಹಿನ್ನೆಲೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿರುವ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿಈಗ ವೀಡಿಯೋ ಕಾನ್ಫರೆನ್ಸ್ ಮೂಲಕ ಬಂದೋಬಸ್ತ್ ಗೆ ಸೂಚನೆ ನೀಡಲಾಗಿದೆ. 8 ಸಾವಿರದ 500 ಅಧಿಕಾರಿಗಳ ನಿಯೋಜನೆ ಮಾಡಲಾಗಿದೆ. ಟ್ರಾಫಿಕ್ ನ ಎಲ್ಲಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಮಹಿಳೆ ಮತ್ತು ಮಕ್ಕಳ ಹಿತದೃಷ್ಟಿಯಿಂದ ಕ್ರಮಕೈಗೊಳ್ಳಲಾಗಿದೆ ಎಂದರು.

ಕಾನೂನು ಬಾಹಿರ ಚಟುವಟಿಕೆಗಳನ್ನು ಮಾಡುವವರ ವಿರುದ್ಧ ಕ್ರಮಕೈಗೊಳ್ಳಲಾಗಿದೆ. ಮಧ್ಯರಾತ್ರಿ 1 ಗಂಟೆಯ ತನಕ ಮಾತ್ರ ಅವಕಾಶ ನೀಡಲಾಗುತ್ತಿದೆ. ಶಬ್ದಮಾಲಿನ್ಯ ನಿಯಂತ್ರಣಕ್ಕೆ ಎಸಿಪಿ ಮಟ್ಟದಲ್ಲಿ ಟೀಂ ಮಾಡಲಾಗಿದೆ. ಜನಸಂದಣಿಯ ಬಗ್ಗೆ ಸಾಕಷ್ಟು ಎಚ್ಚರಿಕೆ ವಹಿಸಲಾಗಿದೆ. 4,000 ಕ್ಯಾಮರಾ ಸಿಸಿ ಟಿವಿ ಕ್ಯಾಮೆರಾ ಗಳನ್ನು ಹಾಕಲಾಗುತ್ತೆ. ಬೆಂಗಳೂರು ಎಲ್ಲಾ ಕಡೆಯೂ ಹೈಕ್ವಾಲಿಟಿ ಕ್ಯಾಮೆರಾಗಳು ಇವೆ. ಮಹಿಳೆಯರಿಗೆ ಐ ಲ್ಯಾಂಡ್ಸ್ ಗಳು ಇರುತ್ತೆ, ಟವರ್ ವಾಚ್ ಗಳು ಇರುತ್ತೆ ಎಂದು ವಿವರಿಸಿದರು.

ವೈದ್ಯ ಇಲಾಖೆಯ ಜೊತೆ ಮಾತನಾಡಲಾಗಿದೆ. ಕೆಲವೊಂದು ಬೆಡ್ ಗಳನ್ನು ಮೀಸಲು ಮಾಡಲಾಗಿದೆ. ಅಂಬುಲೆನ್ಸ್ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ. ಡ್ರಗ್ಸ್ ಬಗ್ಗೆಯೂ ಎಚ್ಚರಿಕೆಯನ್ನು ವಹಿಸಲಾಗಿದೆ. ಪರವಾನಿಗೆ ಇರುವ ಪಿಸ್ತೂಲ್, ರಿವಾಲ್ವರ್ ಗಳನ್ನು ಸಂಭ್ರಮಾಚರಣೆ ಸ್ಥಳಕ್ಕೆ ತರುವಂತಿಲ್ಲ ಎಂದು ಹೇಳಿದರು.

ಜನರಲ್ಲಿ ನಮ್ಮದೊಂದು ಮನವಿ ಮಾಡುತ್ತೇವೆ. ರಸ್ತೆಯ ಬದಿಯಲ್ಲಿ ಅನುಮಾನಾಸ್ಪದ ವಸ್ತುಗಳು ಕಂಡರೆ ತಕ್ಷಣ ಪೊಲೀಸರಿಗೆ ತಿಳಿಸಿ. ಪೊಲೀಸರು ತಕ್ಷಣವೇ ಕಾರ್ಯ ಪ್ರವೃತ್ತರಾಗುತ್ತಾರೆ. ಅನುಮಾನಸ್ಪದ ವಸ್ತುಗಳ ಬಗ್ಗೆ ನಿರ್ಲಕ್ಷ್ಯ ಬೇಡ ಎಂದು ಇದೇ ವೇಳೆ ಅವರು ವಿನಂತಿಸಿಕೊಂಡರು.

ಸಾರ್ವಜನಿಕರು ಹೆಚ್ಚಾಗಿ ಪಬ್ಲಿಕ್ ವೆಹಿಕಲ್ ಬಳಸಿ. ಬಿಎಂಟಿಸಿ, ಮೆಟ್ರೋ ಎರಡು ಕೂಡ ಕಾರ್ಯ ನಿರ್ವಹಿಸುತ್ತವೆ. ರಾತ್ರಿ 9 ಗಂಟೆಯ ಬಳಿಕ ಇಂಟರ್ ನ್ಯಾಶನಲ್ ಏರ್ ಪೋರ್ಟ್ ಪ್ಲೈಓವರ್ ಹೊರತು ಪಡಿಸಿ ಎಲ್ಲಾ ಪ್ಲೈ ಓವರ್ ಬಂದ್ ಮಾಡಲಾಗುವುದು. ಎಲಿವೇಟೆಡ್ ರಸ್ತೆಯಲ್ಲಿ 9 ಗಂಟೆಯ ನಂತರ ಸಂಚಾರಕ್ಕೆ ಅವಕಾಶ ಇಲ್ಲ. ರಾತ್ರಿ 9 ಗಂಟೆಯ ನಂತರ ನೈಸ್ ರೋಡ್ ದ್ವಿಚಕ್ರ ವಾಹನ ಇಲ್ಲ. ಡ್ರ್ಯಾಗ್ ರೈಸಿಂಗ್ ಬಗ್ಗೆ ಎಚ್ಚರಿಕೆ ವಹಿಸಲಾಗಿದೆ. ಡ್ರಿಂಕ್ ಅಂಡ್ ಡ್ರೈವ್ ಚೆಕ್ ಮಾಡಲಾಗುತ್ತೆ ಎಂದು ತಿಳಿಸಿದರು.

ಸಭೆಯಲ್ಲಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ಸಂದೀಪ್ ಪಾಟೀಲ್, ಸಂಚಾರಿ ಮುಖ್ಯಸ್ಥ ಸಲೀಂ, ಅನುಚೇತ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

1 hour ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

2 hours ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

2 hours ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

2 hours ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

2 hours ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

3 hours ago