ಬೆಂಗಳೂರು: “ಅತ್ಯವಸರದಿಂದ 100 ಕೋಟಿ ಲಸಿಕೆ ನೀಡಿಕೆಯ ಸಂಭ್ರಮಾಚರಣೆಯ ಖಾಲಿ ತಟ್ಟೆ ಬಡಿಯುತ್ತಿರುವುದು ಹಾಸ್ಯಾಸ್ಪದವಾಗಿದೆ” ಎಂದು ಕೇಂದ್ರ ಸರ್ಕಾರದ ವಿರುದ್ದ ವಿಪಕ್ಷ ನಾಯ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
100 ಕೋಟಿ ಡೋಸ್ಗಳ ಲಸಿಕೆ ನೀಡಿಕೆಯನ್ನು ಪೂರೈಸಿದ ದಿನದ ಬೆನ್ನಲ್ಲೇ ಇಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ವಿಚಾರವಾಗಿ ಟೀಕೆ ಮಾಡಿರುವ ವಿಪಕ್ಷ ನಾಯಕ , ಈ ಬಗ್ಗೆ ಸರಣಿ ಟ್ವೀಟ್ ಮಾಡಿದ್ದು “ದೇಶದ 139 ಕೋಟಿ ಜನರಲ್ಲಿ 29 ಕೋಟಿ ಜನರಿಗೆ ಮಾತ್ರ ಎರಡು ಡೋಸ್ ಕೊರೊನಾ ಲಸಿಕೆ ನೀಡಿರುವ ನರೇಂದ್ರ ಮೋದಿ ಸರ್ಕಾರ, ಅತ್ಯವಸರದಿಂದ 100 ಕೋಟಿ ಲಸಿಕೆ ನೀಡಿಕೆಯ ಸಂಭ್ರಮಾಚರಣೆಯ ಖಾಲಿ ತಟ್ಟೆ ಬಡಿಯುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದಿದ್ದಾರೆ.
“ದೇಶದಲ್ಲಿ ಇಲ್ಲಿಯ ವರೆಗೆ 29 ಕೋಟಿ ಜನರಿಗೆ ಎರಡು ಡೋಸ್ ಮತ್ತು 42 ಕೋಟಿ ಜನರಿಗೆ ಒಂದು ಡೋಸ್ ಲಸಿಕೆ ಮಾತ್ರ ನೀಡಲಾಗಿದೆ. 139 ಕೋಟಿ ಜನರಲ್ಲಿ 68 ಕೋಟಿ ಜನರಿಗೆ ಇನ್ನು ಒಂದು ಡೋಸ್ ಲಸಿಕೆ ಕೂಡಾ ನೀಡಿಲ್ಲ. ಯಾವ ಸಾಧನೆಗೆ ಸಂಭ್ರಮಾಚರಣೆ? ಘೋಷಿತ ಗುರಿಯಂತೆ ದೇಶದ 103 ಕೋಟಿ ವಯಸ್ಕರಿಗೆ ಡಿಸೆಂಬರ್ 31ರೊಳಗೆ 2 ಡೋಸ್ ನೀಡಲು 206 ಕೋಟಿ ಲಸಿಕೆ ಬೇಕಾಗಿದೆ. ಕೊಟ್ಟಿರುವುದು 100 ಕೋಟಿ ಮಾತ್ರ. ಗುರಿ ತಲುಪಲು ಪ್ರತಿದಿನ 1.51 ಕೋಟಿ ಲಸಿಕೆ ನೀಡಬೇಕಾಗಿದೆ ಇದಕ್ಕಾಗಿ ಬೇಕಾಗಿರುವುದು ಸಿದ್ದತೆ, ಖಾಲಿ ತಟ್ಟೆಯ ಪ್ರಚಾರ ಅಲ್ಲ” ಎಂದು ಟೀಕಿಸಿದ್ದಾರೆ.
“ಅಮೆರಿಕ 56%, ಚೀನಾ 70% ಜನಸಂಖ್ಯೆಗೆ ಎರಡು ಡೋಸ್ ಕೊರೊನಾ ಲಸಿಕೆ ನೀಡಿ ಬೂಸ್ಟರ್ ಲಸಿಕೆ ನೀಡುವ ಸಿದ್ದತೆಯಲ್ಲಿದೆ. ಭಾರತದಲ್ಲಿ ಕೇವಲ 21% ಜನಸಂಖ್ಯೆಗೆ ಮಾತ್ರ ಎರಡು ಡೋಸ್ ಲಸಿಕೆ ನೀಡಲಾಗಿದೆ. ಯಾವ ಸಾಧನೆಗೆ ಸಂಭ್ರಮ? ‘ವೈಫಲ್ಯದ ವಿಶ್ವಗುರು’ ಕುಖ್ಯಾತಿಗಾಗಿಯೇ? ಸುಳ್ಳು ಸಾಧನೆಗಳ ಖಾಲಿ ತಟ್ಟೆ ಬಡಿಯುತ್ತಾ ದೇಶದ ಜನರನ್ನು ಮರುಳು ಮಾಡುತ್ತಾ ಬಂದ ನರೇಂದ್ರ ಮೋದಿ ಅವರೇ? ಮೊದಲು ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಎರಡು ಡೋಸ್ ಲಸಿಕೆ ನೀಡಲು ಗಂಭೀರವಾಗಿ ಸರ್ಕಾರವನ್ನು ತೊಡಗಿಸಿಕೊಳ್ಳಿ. ಸಾಧನೆಯ ಸಂಭ್ರಮಾಚರಣೆ ಆ ಮೇಲೆ ಮಾಡೋಣ “ಎಂದು ಹೇಳಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…