Featured

ಬೆಂಗಳೂರು: 7 ಕೋಟಿ ರೂ. ದರೋಡೆ ಪ್ರಕರಣದಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಬಂಧನ – vishwanews24

ಬೆಂಗಳೂರು: ದರೋಡೆ ಪ್ರಕರಣ : ಪೊಲೀಸ್ ಕಾನ್ಸ್‌ಟೇಬಲ್ ಬಂಧನ

ಬೆಂಗಳೂರು: ಎರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ಹಾಡುಹಗಲೇ ನಡೆದ 7 ಕೋಟಿ ರೂಪಾಯಿ ದರೋಡೆ ಪ್ರಕರಣ ಹಿಂದೆ ಪೊಲೀಸ್ ಕಾನ್ಸ್‌ಟೇಬಲ್ ಇದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ದರೋಡೆ ಪ್ರಕರಣ ಸಂಬಂಧ ಗೋವಿಂದಪುರ ಠಾಣೆಯ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್ ಎಂಬವರನ್ನು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಅಣ್ಣಪ್ಪ ನಾಯ್ಕ್ ಇಡೀ ದರೋಡೆಯ ಮಾಸ್ಟರ್‌ಮೈಂಡ್ ಎನ್ನಲಾಗುತ್ತಿದೆ. ಇವರೇ ಆರೋಪಿ ಗ್ಯಾಂಗ್ ನ್ನು ದರೋಡೆ ಹೇಗೆ ಮಾಡಬೇಕೆಂದು ಸಂಚು ರೂಪಿಸಿದ್ದರು ಎಂಬ ವಿಚಾರ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ.

ಕಾನ್ಸ್ಟೇಬಲ್ ನಿಂದ ದರೋಡೆಗೆ ಪ್ಲಾನ್

ಕಮ್ಮನಹಳ್ಳಿ, ಕಲ್ಯಾಣನಗರ ಹುಡುಗರ ಗ್ಯಾಂಗ್ ರೆಡಿ ಮಾಡಿದ್ದ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್, ದರೋಡೆ ಹೇಗೆ ಮಾಡಬೇಕೆಂದು ಹೇಳಿಕೊಟ್ಟಿದ್ದರು. ದರೋಡೆ ನಂತರ ಹೇಗೆ ತಪ್ಪಿಸಿಕೊಳ್ಳಬೇಕೆಂದು ಕೂಡ ತರಬೇತಿ ಕೊಟ್ಟಿದ್ದರು. ಪೊಲೀಸರು ಹೇಗೆ ಕೆಲಸ ಮಾಡುತ್ತಾರೆಂದು ಸಹ ತಿಳಿಸಿದ್ದರು ಎನ್ನಲಾಗಿದೆ. ಅದರಂತೆ ಕಮ್ಮನಹಳ್ಳಿ, ಕಲ್ಯಾಣನಗರ ಹುಡುಗರ ತಂಡವೇ 7.11 ಕೋಟಿ ರೂಪಾಯಿ ದರೋಡೆ ಮಾಡಿದೆ. ಸಿಎಂಎಸ್ ಸೆಕ್ಯೂರಿಟಿ ಎಜೆನ್ಸಿಯ ಮಾಜಿ ಉದ್ಯೋಗಿಗಳು ದರೋಡೆಯಲ್ಲಿ ಭಾಗಿಯಾಗಿದ್ದು, ಕದ್ದ ಹಣವನ್ನು ಬೆಂಗಳೂರಲ್ಲಿಯೇ ಬಚ್ಚಿಟ್ಟು ಪರಾರಿಯಾಗಿದ್ದಾರೆ ಎಂಬ ವಿಷಯ ಆರಂಭಿಕ ತನಿಖೆಯಿಂದ ತಿಳಿದುಬಂದಿದೆ.

ದರೋಡೆ ಪ್ರಕರಣದಲ್ಲಿ ಆರೋಪಿಗಳನ್ನು 24 ಗಂಟೆಯೊಳಗೆ ಪತ್ತೆಹಚ್ಚಬೇಕೆಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಪೊಲೀಸರಿಗೆ ಸೂಚನೆ ನೀಡಿದ್ದರು. ಈವರೆಗೆ ದರೋಡೆಕೋರರ ಸುಳಿವು ಸಿಕ್ಕಿ ಆರೋಪಿಗಳ ಫೋಟೋ ಬಿಡುಗಡೆ ಮಾಡಲಾಗಿದೆ.

Vishwa News 24

Recent Posts

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

50 minutes ago

ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ – vishwanews24

ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ…

1 hour ago

ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು – vishwanews24

ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು ಜೈಪುರ: ಸ್ಕಾರ್ಪಿಯೋ ಎಸ್‌ಯುವಿ  ಕಾರೊಂದು ಸುಮಾರು 700 ಅಡಿ ಕಂದಕಕ್ಕೆ…

1 hour ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ ಕೊಲ್ಲೂರು: ಮೇ 17ರ…

1 hour ago

ಮಂಗಳೂರು : ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ – vishwanews24

ಮಂಗಳೂರು : ಹೆಚ್ಚುತ್ತಿರುವ ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಂಗಳೂರು : ಆಫ್ರಿಕಾ…

2 hours ago

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

3 days ago