ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ವಿಚಾರವಾಗಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಕರ್ನಾಟಕದ ಬೆಟ್ಟ ಕುರುಬ ಜನಾಂಗಕ್ಕೆ ಸೇರಿದ 12 ಜಾತಿಗಳನ್ನ ಎಸ್.ಟಿ ಸಮುದಾಯದ ಪಟ್ಟಿಗೆ ಸೇರ್ಪಡೆಗೊಳಿಸಲಾಗಿದೆ.
ಕರ್ನಾಟಕ ಸರ್ಕಾರ ಮಾಡಿದ ಶಿಫಾರಸ್ಸನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ. ಕರ್ನಾಟಕದ ಚಾಮರಾಜನಗರ, ಕೊಡಗು, ಮೈಸೂರು ಜಿಲ್ಲೆಗಳ ಅಂಚಿನಲ್ಲಿ ಬೆಟ್ಟ ಕುರುಬ ಜನಾಂಗ ನೆಲೆಸಿತ್ತು. ಕಾರಣಾಂತರಗಳಿಂದ ಈ ಜನಾಂಗದವರನ್ನು ಒಕ್ಕಲೆಬ್ಬಿಸಲಾಗಿತ್ತು. ಪರಿಶಿಷ್ಟ ವರ್ಗಕ್ಕೆ ಸೇರ್ಪಡೆಗೊಳಿಸುವಂತೆ ಈ ಜನಾಂಗದವರು ಕಳೆದ 30 ವರ್ಷಗಳಿಂದ ಹೋರಾಡುತ್ತಿದ್ದರು.
ಕರ್ನಾಟಕದ ಮಲೆ ಮಹದೇಶ್ವರ ಬೆಟ್ಟದಲ್ಲಿ ಹಾಗೂ ಸುತ್ತಮುತ್ತಲಿನ ಬೆಟ್ಟಗಳಲ್ಲಿ ಬೆಟ್ಟ ಕುರುಬರು ವಾಸಿಸುತ್ತಿದ್ದರು. ಇವರನ್ನ ಕಾಡು ಕುರುಬರು ಎಂದು ಕರೆಯಲಾಗುತ್ತಿತ್ತು. ನಂತರದಲ್ಲಿ ಬೆಟ್ಟ ಕುರುಬರು ಎಂದು ಕರೆಯಲಾಗುತ್ತಿತ್ತು. ಇದೀಗ ಈ ಸಮುದಾಯಕ್ಕೆ ಸೇರಿದ 12 ಉಪ ಜಾತಿಗಳನ್ನು ಎಸ್.ಟಿ ಸಮುದಾಯಕ್ಕೆ ಸೇರಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಈ ಕುರಿತು ರಾಜ್ಯ ಬಿಜೆಪಿ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಲಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಸ್ಥೆಯ ಮೇರೆಗೆ ಬೆಟ್ಟ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸಲು ಕೇಂದ್ರ ಸಚಿವ ಒಪ್ಪಿಗೆ ಸೂಚಿಸಿರುವುದಾಗಿ ತಿಳಿಸಲಾಗಿದೆ.
ಇದರಿಂದಾಗಿ ಈ ವರ್ಗದವರು ಸರ್ಕಾರದ ಹೆಚ್ಚುವರಿ ಸೌಲಭ್ಯಗಳನ್ನು ಪಡೆದು ಸಮಾಜ ಮುಖಿಯಾಗಲು ಸಹಕಾರಿಯಾಗಲಿದೆ ಎಂದು ಹೇಳಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…