ಬೆಂಗಳೂರು: ಪತಿ ತನ್ನ ಖಾಸಗಿ ಕ್ಷಣಗಳನ್ನು ಬೆಡ್‌ರೂಂನಲ್ಲಿ ಕ್ಯಾಮೆರಾ ಫಿಕ್ಸ್ ಮಾಡಿ ರೆಕಾರ್ಡ್ ಮಾಡಿ, ಆ ವಿಡಿಯೋಗಳನ್ನು ಸ್ನೇಹಿತರಿಗೆ ಹಂಚಿಕೊಂಡಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮಹಿಳೆಯ ಪತಿ ಸೈಯದ್ ಇನಾಮುಲ್ ಹಕ್ ಸೇರಿದಂತೆ ಒಟ್ಟು ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಖಾಸಗಿ ವಿಡಿಯೋ ರೆಕಾರ್ಡ್ ಮತ್ತು ಬೆದರಿಕೆ ಆರೋಪ
ಪತ್ನಿ ನೀಡಿರುವ ದೂರಿನ ಪ್ರಕಾರ, ಪತಿ ಸೈಯದ್ ಇನಾಮುಲ್ ಹಕ್ ಅವರು ತಮ್ಮ ಖಾಸಗಿ ಕ್ಷಣಗಳನ್ನು ಯಾರಿಗೂ ತಿಳಿಯದಂತೆ ಬೆಡ್‌ರೂಂನಲ್ಲಿ ಕ್ಯಾಮೆರಾ ಫಿಕ್ಸ್ ಮಾಡಿ ವಿಡಿಯೋ ಮಾಡಿದ್ದಾರೆ. ಈ ಖಾಸಗಿ ವಿಡಿಯೋಗಳನ್ನು ಮತ್ತು ಫೋಟೋಗಳನ್ನು ತನ್ನ ಸ್ನೇಹಿತರಿಗೆ ಹಂಚಿಕೊಂಡಿದ್ದಾರೆ ಎಂದು ಮಹಿಳೆ ಗಂಭೀರವಾಗಿ ಆರೋಪಿಸಿದ್ದಾರೆ. ಅಲ್ಲದೆ, ಈ ವಿಡಿಯೋಗಳನ್ನು ಸಾರ್ವಜನಿಕವಾಗಿ ಜಾಲತಾಣಗಳಲ್ಲಿ ಶೇರ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ದೈಹಿಕ ಕಿರುಕುಳ ಮತ್ತು ಮೊದಲ ಮದುವೆ ಬಚ್ಚಿಟ್ಟ ಆರೋಪ
ವಿಡಿಯೋ ರೆಕಾರ್ಡಿಂಗ್ ಮತ್ತು ಹಂಚಿಕೆಯ ಆರೋಪಗಳ ಜೊತೆಗೆ, ಈತ ಈ ಮೊದಲೇ ಮದುವೆಯಾಗಿದ್ದರೂ ಆ ವಿಷಯವನ್ನು ತನಗೆ ತಿಳಿಸದೇ ಎರಡನೇ ಮದುವೆಯಾಗಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಜೊತೆಗೆ, ದೈಹಿಕ ಕಿರುಕುಳ ನೀಡಿ ಹಲ್ಲೆ ನಡೆಸಿದ್ದಾನೆ ಎಂದೂ ಆರೋಪಿಸಿದ್ದಾರೆ. ನೊಂದ ಮಹಿಳೆಯ ದೂರಿನ ಮೇರೆಗೆ ಪುಟ್ಟೇನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…