Featured

ಬೆಡ್‌ರೂಂನಲ್ಲಿ ರಹಸ್ಯ ಕ್ಯಾಮರಾ ; ಪತ್ನಿಯೊಂದಿಗಿನ ಖಾಸಗಿ ವಿಡಿಯೋ ಸ್ನೇಹಿತರಿಗೆ ಶೇರ್ ಮಾಡಿದ ಪತಿ ; ಎಫ್‌ಐಆರ್ ದಾಖಲು – vishwanews24

ಬೆಡ್‌ರೂಂನಲ್ಲಿ ರಹಸ್ಯ ಕ್ಯಾಮರಾ ; ಪತ್ನಿಯೊಂದಿಗಿನ ಖಾಸಗಿ ವಿಡಿಯೋ ಸ್ನೇಹಿತರಿಗೆ ಶೇರ್ ಮಾಡಿದ ಪತಿ ; ಎಫ್‌ಐಆರ್ ದಾಖಲು – vishwanews24

ಬೆಂಗಳೂರು: ಪತಿ ತನ್ನ ಖಾಸಗಿ ಕ್ಷಣಗಳನ್ನು ಬೆಡ್‌ರೂಂನಲ್ಲಿ ಕ್ಯಾಮೆರಾ ಫಿಕ್ಸ್ ಮಾಡಿ ರೆಕಾರ್ಡ್ ಮಾಡಿ, ಆ ವಿಡಿಯೋಗಳನ್ನು ಸ್ನೇಹಿತರಿಗೆ ಹಂಚಿಕೊಂಡಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮಹಿಳೆಯ ಪತಿ ಸೈಯದ್ ಇನಾಮುಲ್ ಹಕ್ ಸೇರಿದಂತೆ ಒಟ್ಟು ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಖಾಸಗಿ ವಿಡಿಯೋ ರೆಕಾರ್ಡ್ ಮತ್ತು ಬೆದರಿಕೆ ಆರೋಪ
ಪತ್ನಿ ನೀಡಿರುವ ದೂರಿನ ಪ್ರಕಾರ, ಪತಿ ಸೈಯದ್ ಇನಾಮುಲ್ ಹಕ್ ಅವರು ತಮ್ಮ ಖಾಸಗಿ ಕ್ಷಣಗಳನ್ನು ಯಾರಿಗೂ ತಿಳಿಯದಂತೆ ಬೆಡ್‌ರೂಂನಲ್ಲಿ ಕ್ಯಾಮೆರಾ ಫಿಕ್ಸ್ ಮಾಡಿ ವಿಡಿಯೋ ಮಾಡಿದ್ದಾರೆ. ಈ ಖಾಸಗಿ ವಿಡಿಯೋಗಳನ್ನು ಮತ್ತು ಫೋಟೋಗಳನ್ನು ತನ್ನ ಸ್ನೇಹಿತರಿಗೆ ಹಂಚಿಕೊಂಡಿದ್ದಾರೆ ಎಂದು ಮಹಿಳೆ ಗಂಭೀರವಾಗಿ ಆರೋಪಿಸಿದ್ದಾರೆ. ಅಲ್ಲದೆ, ಈ ವಿಡಿಯೋಗಳನ್ನು ಸಾರ್ವಜನಿಕವಾಗಿ ಜಾಲತಾಣಗಳಲ್ಲಿ ಶೇರ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ದೈಹಿಕ ಕಿರುಕುಳ ಮತ್ತು ಮೊದಲ ಮದುವೆ ಬಚ್ಚಿಟ್ಟ ಆರೋಪ
ವಿಡಿಯೋ ರೆಕಾರ್ಡಿಂಗ್ ಮತ್ತು ಹಂಚಿಕೆಯ ಆರೋಪಗಳ ಜೊತೆಗೆ, ಈತ ಈ ಮೊದಲೇ ಮದುವೆಯಾಗಿದ್ದರೂ ಆ ವಿಷಯವನ್ನು ತನಗೆ ತಿಳಿಸದೇ ಎರಡನೇ ಮದುವೆಯಾಗಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಜೊತೆಗೆ, ದೈಹಿಕ ಕಿರುಕುಳ ನೀಡಿ ಹಲ್ಲೆ ನಡೆಸಿದ್ದಾನೆ ಎಂದೂ ಆರೋಪಿಸಿದ್ದಾರೆ. ನೊಂದ ಮಹಿಳೆಯ ದೂರಿನ ಮೇರೆಗೆ ಪುಟ್ಟೇನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Vishwa News 24

Recent Posts

ಉಡುಪಿ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ಕೇಂದ್ರದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಂದ ಸುದ್ದಿ ಆಧಾರರಹಿತ: ಸರ್ಜನ್ ಡಾ. ಅಶೋಕ್ ಸ್ಪಷ್ಟನೆ – vishwanews24

ಉಡುಪಿ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ಕೇಂದ್ರದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಂದ ಸುದ್ದಿ ಆಧಾರರಹಿತ: ಸರ್ಜನ್ ಡಾ. ಅಶೋಕ್…

7 minutes ago

ಮಣಿಪಾಲ :ಕಂದಕಕ್ಕೆ ಉರುಳಿದ ಶಾಲಾ ಬಸ್ ; ಓರ್ವ ವಿದ್ಯಾರ್ಥಿ ಗಂಭೀರ ಗಾಯ – vishwanews24

ಮಣಿಪಾಲ :ಕಂದಕಕ್ಕೆ ಉರುಳಿದ ಶಾಲಾ ಬಸ್ ; ಓರ್ವ ವಿದ್ಯಾರ್ಥಿ ಗಂಭೀರ ಗಾಯ  ಉಡುಪಿ: ಮಣಿಪಾಲ್‌ ಬಳಿಯ ಕೊಡಂಗೆಯಲ್ಲಿ ಶಾಲಾ…

22 minutes ago

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

2 days ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

2 days ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

2 days ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

2 days ago