ನವದೆಹಲಿ : ಕೇಂದ್ರ ಸರ್ಕಾರವು ಬೆಲೆ ಏರಿಕೆಯನ್ನು ತಕ್ಷಣವೇ ನಿಯಂತ್ರಿಸದಿದ್ದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅದು ಬಿಜೆಪಿಗೆ ದುಬಾರಿಯಾಗಲಿದೆ ಎಂದು ಯೋಗ ಗುರು ರಾಮದೇವ್ ಅಭಿಪ್ರಾಯಪಟ್ಟಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಪ್ರಚಾರ ನಡೆಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ. 2014ರ ಚುನಾವಣೆಯಲ್ಲಿ ಅವರು ಬಿಜೆಪಿ ಪರವಾಗಿ ಸಕ್ರಿಯವಾಗಿ ಪ್ರಚಾರ ಮಾಡಿದ್ದರು.
‘ಮೋದಿ ಅವರ ನೀತಿಗಳನ್ನು ಹಲವರು ಹೊಗಳುತ್ತಿದ್ದಾರೆ. ಆದರೆ ಅವುಗಳಲ್ಲಿ ಕೆಲವನ್ನು ಸರಿಪಡಿಸುವ ಅಗತ್ಯ ಇದೆ’ ಎಂದು ಅವರು ಹೇಳಿದ್ದಾರೆ.
ಪೆಟ್ರೋಲ್ ಮತ್ತು ಡೀಸೆಲ್ ಸೇರಿ ವಿವಿಧ ವಸ್ತುಗಳ ಬೆಲೆಯನ್ನು ಕಡಿಮೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ತಾವು ಎಡಪಂಥೀಯನೂ ಅಲ್ಲ, ಬಲಪಂಥೀಯನೂ ಅಲ್ಲ, ಮಧ್ಯಪಂಥೀಯ. ಕೆಲವು ಮಹತ್ವದ ವಿಚಾರಗಳಲ್ಲಿ ‘ಮೌನ ಯೋಗ’ ಅನುಸರಿಸುತ್ತಿರುವುದರಿಂದ ಪ್ರಶ್ನೆ ಕೇಳಿ ತಮ್ಮನ್ನು ಇಕ್ಕಟ್ಟಿಗೆ ಸಿಲುಕಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.
‘ನಾನು ರಾಜಕೀಯದಿಂದ ಹಿಂದೆ ಸರಿದಿದ್ದೇನೆ. ಎಲ್ಲ ಪಕ್ಷಗಳ ಜತೆಗೂ ಇದ್ದೇನೆ. ಹಾಗಿದ್ದರೂ ನಾನು ಸ್ವತಂತ್ರ’ ಎಂದು ಅವರು ಹೇಳಿಕೊಂಡಿದ್ದಾರೆ.
ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರಬೇಕು. ಪೆಟ್ರೋಲ್ ಮತ್ತು ಡೀಸೆಲ್‌ಗೆ ಹಣ ಕೊಟ್ಟು ಜನರ ಜೇಬು ಖಾಲಿಯಾಗಿದೆ. ಹಾಗಾಗಿ ಅದನ್ನು ಜಿಎಸ್‌ಟಿಯ ಅತ್ಯಂತ ಕಡಿಮೆ ತೆರಿಗೆಯ ಹಂತಕ್ಕೆ ಸೇರಿಸಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.
ಜಾಹಿರಾತು: ಪಂಡೀತ್ ಸುದರ್ಶನ್ ಭಟ್
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…