ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಎ.22ರಂದು ಬೃಹತ್ ಪ್ರತಿಭಟನೆ : ಐವನ್ ಡಿಸೋಜ
ಮಂಗಳೂರು : ಬೆಲೆ ಏರಿಕೆಗೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯೇ ಮೂಲಕಾರಣವಾಗಿದ್ದು, ಇದು ಸಾಮಾನ್ಯ ಜನತೆಗೂ ತಿಳಿದ ವಿಚಾರವಾಗಿದೆ. ಹಾಗಾಗಿ ಇವುಗಳ ಬೆಲೆ ಏರಿಕೆ ಮಾಡಿದ ಬಿಜೆಪಿಗರ ನೀತಿ ಏನು? ಬಿಜೆಪಿಗರು ಸದ್ಯ ಯಾರ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ ಎಂಬುದನ್ನು ಸ್ವತಹ ಅವರೇ ತಿಳಿಸಬೇಕಿದೆ. ಬಿಜೆಪಿಯ ಜನಾಕ್ರೋಶ ಯಾತ್ರೆಗೆ ತಕ್ಕ ಉತ್ತರ ನೀಡಲು ಹಾಗೂ ಬೆಲೆ ಏರಿಕೆಗೆ ನೇರ ಕಾರಣವಾದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವತಿಯಿಂದ ರಾಜ್ಯಾದ್ಯಂತ ಎ.17ರಿಂದ ಪ್ರತಿಭಟನೆ ಆಯೋಜಿಸಲಾಗಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಎ.22ರಂದು ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಗತ್ಯ ವಸ್ತಗಳು ಸೇರಿದಂತೆ ಎಲ್ಲ ಬಗೆಯ ಬೆಲೆ ಏರಿಕೆ ಆಗಲು ಕೇಂದ್ರ ಸರ್ಕಾರದ ನೀತಿಗಳೇ ನೇರ ಕಾರಣ. ಇದು ಗೊತ್ತಿದ್ದೂ ರಾಜ್ಯದಲ್ಲಿ ತಾವು ಜೀವಂತ ಇದ್ದೇವೆ ಅಂತ ತೋರಿಸಿಕೊಡಲು ಬಿಜೆಪಿ ಜನಾಕ್ರೋಶ ಯಾತ್ರೆ ಮಾಡಿದೆ. ಬಿಜೆಪಿಯವರಿಗೆ ಧೈರ್ಯ ಇದ್ದರೆ ಬೆಲೆ ಏರಿಕೆ ಯಾರು ಮಾಡಿದ್ದು, ಎಂಬ ಬಗ್ಗೆ ಬಹಿರಂಗ ಚರ್ಚೆಗೆ ಬರಲಿ.
ನಿಜವಾದ ಜನಾಕ್ರೋಶ ಇರೋದೆ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ. ಪಶು ಆಹಾರ, ರಸಗೊಬ್ಬರ ದರ ಏರಿಕೆ ಮಾಡಿದ್ದು, ಅಗತ್ಯ ವಸ್ತುಗಳಿಗೂ ಜಿಎಸ್‌ಟಿ ಏರಿಕೆ ಮಾಡಿದ್ದು ಕೇಂದ್ರ ಸರಕಾರ. ಆದರೆ ರಾಜ್ಯ ಕಾಂಗ್ರೆಸ್ ಸರಕಾರ ಯಾವುದೇ ಅಗತ್ಯ ವಸ್ತುಗಳ ಮೇಲೆ ಒಂದು ಪೈಸೆ ತೆರಿಗೆಯನ್ನೂ ಹೆಚ್ಚಿಸಿಲ್ಲ ಎಂದು ಅವರು ತಿಳಿಸಿದರು. ಈ ವೇಳೆ ಕಾಂಗ್ರೆಸ್ ಮುಖಂಡರಾದ ನಾಗೇಂದ್ರ, ಪ್ರೇಮ್ ಮತ್ತಿತರರು ಉಪಸ್ಥಿತರಿದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…