Featured

ಬೆಳಕು ಯೋಜನೆಯಡಿ ವಿದ್ಯುತ್ ಸಂಪರ್ಕಕ್ಕೆ ಆಧಾರ್, ರೇಶನ್ ಕಾರ್ಡ ಇದ್ದರೆ ಸಾಕು : ಇಂಧನ ಸಚಿವ ಸುನಿಲ್ ಕುಮಾರ್ – Vishwanews24

ಬೆಳಕು ಯೋಜನೆಯಡಿ ವಿದ್ಯುತ್ ಸಂಪರ್ಕಕ್ಕೆ ಗ್ರಾಮ ಪಂಚಾಯತಿಯಿಂದ ಎನ್‍ಓಸಿ ಪಡೆದುಕೊಳ್ಳುವುದು ಕಡ್ಡಾಯವಲ್ಲ..

ಬಾಗಲಕೋಟೆ : ವಿಫಲವಾದ ಪರಿವರ್ತಕಗಳನ್ನು 24 ಗಂಟೆಗಳಲ್ಲಿ ಬದಲಾವಣೆಗೆ ಕ್ರಮವಹಿಸುವಂತೆ ಇಂಧನ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರಾದ ವಿ.ಸುನೀಲ್ ಕುಮಾರ ಅಧಿಕಾರಿಗಳಿಗೆ ಸೂಚಿಸಿದರು.

ನೂತನ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಹಾಗೂ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕಳೆದ ಸಾಲಿನ ಸೆಪ್ಟೆಂಬರ ಮಾಹೆಯಿಂದ ಇಲ್ಲಿಯವರೆಗೆ ಒಟ್ಟು 14464 ಪರಿವರ್ತಕಗಳು ವಿಫಲಗೊಂಡಿದ್ದು, ಈ ಪೈಕಿ 24 ಗಂಟೆಗಳಲ್ಲಿ 11060 ಪರಿವರ್ತಕಗಳನ್ನು ಮಾತ್ರ ಬದಲಾವಣೆ ಮಾಡಲಾಗಿದೆ.24 ಗಂಟೆಗಳ ನಂತರ 3501 ಹಾಗೂ ಬಾಕಿ 99 ಉಳಿದಿವೆ ಈ ಬಗ್ಗೆ ಅಧಿಕಾರಿಗಳು ಕ್ರಮವಹಿಸುವ ಅಗತ್ಯವಿದೆ ಎಂದರು.

ಪರಿವರ್ತಕಗಳ ಬದಲಾವಣೆಗೆ ಟಿಸಿ ಬ್ಯಾಂಕ್, ವೆಹಿಕಲ್ ನೀಡಲಾಗಿದೆ. 24 ಗಂಟೆಗಳಲ್ಲಿ ಬಲಾಯಿಸಲು ಇರುವ ಸಮಸ್ಯೆಗಳ ಬಗ್ಗೆ ಚರ್ಚಿಸಿದಾಗ ಬಲಾವಣೆಗೊಳಿಸುವಲ್ಲಿ ಆಗುವ ತೊಂದರೆಗಳ ಬಗ್ಗೆ ಪರಿಹಾರ ಕಂಡುಕೊಂಡು ನಿಗದಿತ ವೇಳೆಯಲ್ಲಿ ಪರಿವರ್ತಕಗಳ ಬಲಾವಣೆಗೆ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಪರಿವರ್ತಕಗಳ ಬಲಾವಣೆಯಲ್ಲಿ ವಿಳಂಬ ದೋರಣೆಯಾದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುತ್ತದೆ. ಪರಿವರ್ತಕಗಳನ್ನು ಹಾಳಾಗದಂತೆ ನಿರ್ವಹನೆಗೆ 10 ದಿನಗಳ ಕಾಲ ಅಭಿಯಾನ ಹಮ್ಮಿಕೊಳ್ಳಲು ತಿಳಿಸಿದರು.

ಬೆಳಕು ಯೋಜನೆಯಡಿ ವಿದ್ಯುತ್ ಸಂಪರ್ಕಕ್ಕೆ ಗ್ರಾಮ ಪಂಚಾಯತಿಯಿಂದ ಎನ್‍ಓಸಿ ಪಡೆದುಕೊಳ್ಳುವುದು ಕಡ್ಡಾಯವಲ್ಲ. ಈ ಪೈಕಿ ಆಧಾರ ಕಾರ್ಡ ಮತ್ತು ರೇಶನ್ ಕಾರ್ಡ ಇದ್ದರೆ ಸಾಕು. ತೋಟದ ಮನೆಗಳಿಗೆ ಈ ಯೋಜನೆ ಅನ್ವಯವಾಗುವದಿಲ್ಲವೆಂದು ಸ್ಪಷ್ಟಪಡಿಸಿದರು. ಶಾಲಾ ಕಾಲೇಜುಗಳ ವಿದ್ಯುತ್ ಅಪಾಯಕಾರಿ ಸ್ಥಳಗಳನ್ನು ಬದಲಾವಣೆಗೆ ಈ ಮಾಹೆಯ ಅಂತ್ಯದೊಳಗೆ ಕ್ರಮವಹಿಸಬೇಕು ಎಂದರು. ಗಂಗಾ ಕಲ್ಯಾಣ ಯೋಜನೆಯಡಿ ಅರ್ಜಿ ನೋಂದಣಿ ದಿನಾಂಕದಿಂದ ಒಂದು ತಿಂಗಳಲ್ಲಿ ಸಂಪರ್ಕ ಕಲ್ಪಿಸುವ ಕೆಲವಾಗಬೇಕು ಎಂದರು.

ವಿದ್ಯುತ್ ಕುಂದು ಕೊರತೆ ನಿವಾರಣೆಗೆ ವಿದ್ಯುತ್ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಸಾರ್ವಜನಿಕರು ತರುವ ದೂರುಗಳ ನಿವಾರಣೆಗೆ ಎಲ್ಲ ರೀತಿಯಿಂದ ಸಿದ್ದತೆ ಮಾಡಿಕೊಳ್ಳಲು. ಸಮಸ್ಯೆಗೆ ಬೇಗನೇ ಪರಿಹರಿಸುವಂತಾಗಬೇಕು. ಗಂಗಾ ಕಲ್ಯಾಣ ಯೋಜನೆಗೆ ಸಂಬಂಧಿಸಿದ ವಿದ್ಯುತ್ ಸಂಪರ್ಕ, ಹೊಸ ಕಲೇಕ್ಷನ್, ಕುಡಿಯುವ ನೀರು, ಟಿಸಿ ಬದಲಾವಣೆ ಸೇರಿದಂತೆ ಯಾವುದೇ ರೀತಿಯ ದೂರು ಬರದಂತೆ ಕ್ರಮವಹಿಸಿ ಇಲಾಖೆಯಲ್ಲಿ ಸುಧಾರಣೆ ತರುವ ಕೆಲಸವಾಗಬೇಕು ಎಂದರು.

ಹೆಸ್ಕಾಂ ಹಾಗೂ ಕೆಪಿಟಿಸಿಎಲ್ ವ್ಯಾಪ್ತಿಯಲ್ಲಿ ಕೈಗೊಳ್ಳಲಾದ ಎಲ್ಲ ಕಾಮಗಾರಿಗಳು ಬರುವ ಡಿಸೆಂಬರ ಒಳಗಾಗಿ ಪೂರ್ಣಗೊಳಿಸಿ ಉದ್ಘಾಟನೆಗೆ ಸಜ್ಜುಗೊಳಿಸಬೇಕು. ಬರುವ ಜೂನ್ ಮಾಹೆಯಿಂದ ಮಳೆಗಾಲ ಆರಂಭಗೊಳ್ಳಲಿದ್ದು, ವಿದ್ಯುತ್ ಸಂಪರ್ಕಕ್ಕೆ ಎದುರಾಗುವ ಸಮಸ್ಯೆಗಳನ್ನು ಎದುರಿಸಲು ಎಲ್ಲ ರೀತಿಯ ಸಿದ್ದತೆ ಮಾಡಿಕೊಳ್ಳಲು ತಿಳಿಸಿದರು. ಟಿಸಿ ರಿಪೇರಿ, ಐಪಿ ಸೆಟ್‍ನಲ್ಲಿ ನಿರ್ವಹಣೆ ಮಾಡಿ. ಈ ನಿಟ್ಟಿನಲ್ಲಿ ಅಧಿಕಾರಿಗಳು ಚೆನ್ನಾಗಿ ಕೆಲಸ ನಿರ್ವಹಿಸಿ, ಸಭೆಯಲ್ಲಿ ನೀಡಲಾದ ನಿರ್ದೇಶನಗಳನ್ನು ತಮ್ಮ ಕೆಳ ಹಂತದ ನೌಕರರಿಗೆ ತಲುಪಿಸಿ ಗ್ರಾಹಕರಿಗೆ ಉತ್ತಮ ಸೇವೆ ಒದಗಿಸುವ ಕಾರ್ಯ ಮಾಡಲು ತಿಳಿಸಿದರು.

ಸಭೆಯಲ್ಲಿ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಡಿ.ಭಾರತಿ, ಕೆಪಿಟಿಸಿಎಲ್‍ನ ನಿರ್ದೇಶಕ ಜಿ.ಆರ್.ಚಂದ್ರಶೇಖರಯ್ಯ, ಮುಖ್ಯ ಇಂಜಿನೀಯರ್ ಎಸ್.ವಿ.ಮಂಜುನಾಥ, ಕಾರ್ಯನಿರ್ವಾಹಕ ಇಂಜಿನೀಯರ್ ಕೆ.ಎ.ಆನಂದ, ಅಧೀಕ್ಷಕರ ಅಭಿಯಂತರ ಜಿ.ಕೆ.ಗೊಟ್ಯಾಳ, ಹೆಸ್ಕಾಂ ಡಿಟಿ ಎ.ಎನ್.ಕಾಂಬಳೆ, ಡಿಎಫ್‍ಓ ಬಿ.ಮಂಜುನಾಥ, ಪೈನಾನ್ಸ್ ಅಡವೈಜರ್ ಮಂಜಪ್ಪ, ಮುಖ್ಯ ಅಭಿಯಂತರ ಹೆಬ್ಬಾಳ ಸೇರಿದಂತೆ ಇತರರು ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago