ಹುಬ್ಬಳ್ಳಿ: ಬೆಳಗಾವಿಯಲ್ಲಿ ಶುಕ್ರವಾರ ತಡರಾತ್ರಿ ನಡೆದ ಪುಂಡಾಟಿಕೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಪುಂಡರನ್ನು ಮಟ್ಟಹಾಕಲು ಕಠಿಣ ಕ್ರಮಕ್ಕೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಶನಿವಾರ ಬೆಳಿಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರ ನಾಯಕರ ಪ್ರತಿಮೆಗಳನ್ನು ಅವಮಾನ ಮಾಡುವುದನ್ನು ಸಹಿಸಿಕೊಳ್ಳಲಾಗದು.
ರಾಷ್ಟ್ರ ನಾಯಕರ ಪ್ರತಿಮೆಗಳಿಗೆ ಗೌರವ ನೀಡಬೇಕು. ಅದರ ಬದಲು ಪ್ರತಿಮೆಗಳನ್ನು ಅವಮಾನಿಸುವ ಮೂಲಕ ಸಮಾಜದಲ್ಲಿ ಕ್ಷೋಭೆ ಸೃಷ್ಟಿಸಲು ಮುಂದಾದರೆ ಅಂತಹ ಯತ್ನಗಳಿಗೆ ಅವಕಾಶ ನೀಡುವುದಿಲ್ಲ ಎಂದರು.
ಘಟನೆಗೆ ಸಂಬಂಧಿಸಿದಂತೆ ಕಠಿಣ ಕ್ರಮಕ್ಕೆ ಹಾಗೂ ಇಂತಹ ಘಟನೆಗಳು,ಪುನಃ ನಡೆಯದಂತೆ ಪೊಲೀಸರು ದೀರ್ಘಾವಧಿ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಸೂಚನೆ ನೀಡಿದ್ದೇನೆ. ಈಗಾಗಲೇ ಅವರು ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ ಎಂದರು.
ಬೆಳಗಾವಿ ಘಟನೆಗೆ ಸಂಬಂಧಿಸಿದಂತೆ ಕೆಲವರನ್ನು ಬಂಧಿಸಲಾಗಿದೆ. ಬೆಳಗಾವಿಯಲ್ಲಿ ಅಧಿವೇಶನ ನಡೆಯುವ ವೇಳೆ ಇಂತಹ ಘಟನೆ ನಡೆಯುವುದರ ಹಿಂದೆ ಹಲವಾರು ಕಾರಣಗಳು ಇರಬಹುದು ಇದೆಲ್ಲದರ ಬಗ್ಗೆಯೂ ಪರಿಶೀಲಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸ್ಪಷ್ಟಪಡಿಸಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…